Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರೈತರ ಕೃಷಿಭೂಮಿ ರಿಯಲ್ ಎಸ್ಟೇಟ್...

ರೈತರ ಕೃಷಿಭೂಮಿ ರಿಯಲ್ ಎಸ್ಟೇಟ್ ದಂಧೆಕೋರರ ಪಾಲಾಗುತ್ತಿದೆ : ಯಾದವ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ22 April 2025 11:37 PM IST
share
ರೈತರ ಕೃಷಿಭೂಮಿ ರಿಯಲ್ ಎಸ್ಟೇಟ್ ದಂಧೆಕೋರರ ಪಾಲಾಗುತ್ತಿದೆ : ಯಾದವ ಶೆಟ್ಟಿ

ಮಂಗಳೂರು: ಗೇಣಿದಾರ ರೈತರು, ಬೀಡಿ, ಹೆಂಚು ಕಾರ್ಮಿಕರ ಸಮರಶೀಲ ಚಳವಳಿಗಳಿಂದ ಖ್ಯಾತಿ ಪಡೆದಿದ್ದ ಉಳ್ಳಾಲ ತಾಲೂಕಿನಲ್ಲಿ ಇಂದು ಜನ ಸಾಮಾನ್ಯರಿಗೆ ಧ್ವನಿಯೇ ಇಲ್ಲದಂತಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಇರುವ ಮನೆ, ನಿವೇಶನ ರಹಿತರಿಗೆ ಕಳೆದ ಒಂದೂವರೆ ದಶಕದಿಂದ ಒಂದು ವಸತಿ ಯೋಜನೆಯೂ ಜಾರಿಯಾಗಿಲ್ಲ ಎಂದು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ ಯಾದವ ಶೆಟ್ಟಿ ಹೇಳಿದ್ದಾರೆ.

ಅವರು, ಸಿಪಿಐಎಂ ಉಳ್ಳಾಲ ಹಾಗೂ ಮುಡಿಪು ವಲಯ ಸಮಿತಿಗಳು ಎಪ್ರಿಲ್ 29ರಂದು ದೇರಳೆಕಟ್ಟೆಯಲ್ಲಿ ಹಮ್ಮಿಕೊಂಡಿರುವ ‘ಜನಾಗ್ರಹ ಸಮಾವೇಶ’ದ ಪ್ರಚಾರಾರ್ಥ ನಡೆಯುತ್ತಿರುವ ಎರಡನೇ ದಿನದ ವಾಹನ ಜಾಥಾವನ್ನು ಕುತ್ತಾರ್ ಜಂಕ್ಷನ್‌ನಲ್ಲಿ ಉದ್ಘಾಟಿಸಿ ಮಾತನಾಡುತ್ತಿದ್ದರು.

ಪಂಚಾಯತ್‌ಗಳು ಕನಿಷ್ಟ ನಿವೇಶನರಹಿತರ ಪಟ್ಟಿಗಳನ್ನೂ ಸಿದ್ದಪಡಿಸಿಲ್ಲ ಎಂಬುದು ಇಲ್ಲಿನ ಜನಪ್ರತಿನಿಧಿ ಗಳ ಆದ್ಯತೆಯನ್ನು ಎತ್ತಿತೋರಿಸುತ್ತದೆ. ಬಡವರ, ಶ್ರಮಿಕರ, ಜನ ಸಾಮಾನ್ಯರ ಬೇಡಿಕೆಗಳು ಇಲ್ಲಿನ ರಾಜಕಾರಣದಲ್ಲಿ ಆದ್ಯತೆಯಾಗಿ ಉಳಿದಿಲ್ಲ. ರೈತರ ಕೈಯಲ್ಲಿರುವ ಅಲ್ಪ ಸ್ವಲ್ಪ ಜಮೀನು ವಿವಿಧ ಕಸರತ್ತು ಗಳ ಮೂಲಕ ಅಗ್ಗದ ದರಕ್ಕೆ ರಿಯಲ್ ಎಸ್ಟೇಟ್ ಲಾಭಿಗಳ ಪಾಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಜನತೆ ತಮ್ಮ ಹಕ್ಕುಗಳಿಗಾಗಿ ಸಂಘಟಿರಾಗಬೇಕಿದೆ, ಮತ್ತೆ ಕೆಂಬಾವುಟ ಹಿಡಿದು ಹಕ್ಕುಗಳಿಗಾಗಿ ಧ್ವನಿ ಎತ್ತಬೇಕಿದೆ ಎಂದರು

ಪ್ರಾಸ್ತಾವಿಕವಾಗಿ ಮಾತನಾಡಿದ ಸಿಪಿಐಎಂ ಉಳ್ಳಾಲ ವಲಯ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಉಳ್ಳಾಲ ತಾಲೂಕು ರಚನೆಯಾಗಿ ೫ ವರ್ಷಗಳು ಕಳೆದರೂ, ತಾಲೂಕು ಕಚೇರಿ, ತಾಲೂಕು ಆಸ್ಪತ್ರೆ,ನ್ಯಾಯಾಲಯ, ಸಬ್ ರಿಜಿಸ್ಟಾರ್ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ ಎಂದು ಉಳ್ಳಾಲ ತಾಲೂಕಿನ ಅವ್ಯವಸ್ಥೆಗಳ ಬೆಳಕು ಚೆಲ್ಲಿದರು.

ಮುನ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಹಾಬಲ ದೆಪ್ಪಲಿಮಾರ್ ಜಾಥಾ ತಂಡವನ್ನು ಸ್ವಾಗತಿಸಿ ದರು. ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ನಾಯಕರಾದ ಸುಕುಮಾರ್ ತೊಕ್ಕೋಟು, ಕೃಷ್ಣಪ್ಪ ಸಾಲ್ಯಾನ್, ಜಯಂತ ನಾಯಕ್, ಮನೋಜ್ ವಾಮಂಜೂರು, ಯೋಗೀಶ್ ಜಪ್ಪಿನಮೊಗರು, ರಫೀಕ್ ಹರೇಕಳ, ಶೇಖರ್ ಕುಂದರ್, ಪದ್ಮಾವತಿ ಶೆಟ್ಟಿ, ವಲಯ ಮುಖಂಡರಾದ ರಿಜ್ವನ್ ಹರೇಕಳ, ರಝಾಕ್ ಮುಡಿಪು, ರೋಹಿದಾಸ್ ಭಟ್ನಗರ, ಪ್ರಮೋದಿನಿ ಕಲ್ಲಾಪು, ಸುಂದರ ಕುಂಪಲ, ಇಬ್ರಾಹೀಂ ಅಂಬ್ಲಮೊಗರು, ಜನಾರ್ದನ ಕುತ್ತಾರ್, ಮುನ್ನೂರು ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಅಡ್ಯಂತಾಯ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X