ಮಂಗಳೂರು: ಪಹಲ್ಗಾಮ್ ದಾಳಿ ಖಂಡಿಸಿ ಎಸ್ ಡಿಪಿಐಯಿಂದ ಕ್ಯಾಂಡೆಲ್ ಮಾರ್ಚ್

ಮಂಗಳೂರು: ದೇಶವನ್ನು ಬೆಚ್ಚಿ ಬೀಳಿಸಿದ ಕಾಶ್ಮೀರದ ಪಹಲ್ಗಾಮ್'ನ ದಾಳಿಯ ವೇಳೆ ದೊಡ್ಡ ಮಟ್ಟದ ಭದ್ರತಾ ವೈಫಲ್ಯವಾಗಿದ್ದು, ಇದರ ಸಂಪೂರ್ಣ ಹೊಣೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಹೊತ್ತುಕೊಳ್ಳಲಿ ಎಂದು ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಹೇಳಿದ್ದಾರೆ.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ನಗರ ಜಿಲ್ಲಾ ಸಮಿತಿ ವತಿಯಿಂದ ಜ್ಯೋತಿ ಸರ್ಕಲ್'ನಲ್ಲಿ ಆಯೋಜಿಸಿದ್ದ ಬೃಹತ್ ಕ್ಯಾಂಡೆಲ್ ಮಾರ್ಚ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ಎಸ್ಡಿಪಿಐ ಮಂಗಳೂರು ನಗರ ಜಿಲ್ಲಾ ಸಮಿತಿ ಅಧ್ಯಕ್ಷ ಜಲೀಲ್ ಕೆ. ಪ್ರತಿಭಟನೆಯ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್ ಎಸ್ಡಿಪಿಐ ಜಿಲ್ಲಾ ಉಪಾಧ್ಯಕ್ಷ ಅಶ್ರಫ್ ಅಡ್ಡೂರು, ಜಿಲ್ಲಾ ಸಮಿತಿ ಸದಸ್ಯ ಶಾಹುಲ್ ಹಮೀದ್ ಕಾಶಿಪಟ್ನ, ಮಂಗಳೂರು ದಕ್ಷಿಣ ಕ್ಷೇತ್ರ ಸಮಿತಿ ಅಧ್ಯಕ್ಷ ಸಿದ್ದೀಕ್ ಬೆಂಗ್ರೆ, ಎಸ್ಡಿಪಿಐ ಮಂಗಳೂರು ಉತ್ತರ ಕ್ಷೇತ್ರ ಸಮಿತಿ ಅಧ್ಯಕ್ಷ ಉಸ್ಮಾನ್ ಗುರುಪುರ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
Next Story