Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಲಸೆ ಕಾರ್ಮಿಕನ ಗುಂಪು ಹತ್ಯೆ ಪ್ರಕರಣ:...

ವಲಸೆ ಕಾರ್ಮಿಕನ ಗುಂಪು ಹತ್ಯೆ ಪ್ರಕರಣ: ಮಂಗಳೂರು ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್ ಅಮಾನತಿಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆಗ್ರಹ

►ಘಟನೆಯ ಮಾಹಿತಿ ನೀಡಲು ಪೊಲೀಸ್ ಕಮಿಷನರ್‌ಗೆ 48 ಗಂಟೆ ಬೇಕಾ? ►ರಾಜ್ಯ ಗೃಹ ಸಚಿವ-ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆಯ ಬಗ್ಗೆ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ29 April 2025 7:20 PM IST
share
ವಲಸೆ ಕಾರ್ಮಿಕನ ಗುಂಪು ಹತ್ಯೆ ಪ್ರಕರಣ: ಮಂಗಳೂರು ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್ ಅಮಾನತಿಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆಗ್ರಹ

ಮಂಗಳೂರು: ವಾಮಂಜೂರು ಸಮೀಪದ ಕುಡುಪು ಎಂಬಲ್ಲಿ ಮೊನ್ನೆ ನಡೆದ ವಲಸೆ ಕಾರ್ಮಿಕನ ಗುಂಪು ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷಿಸಿದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ರನ್ನು ಅಮಾನತುಗೊಳಿಸಬೇಕು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಒತ್ತಾಯಿಸಿದ್ದಾರೆ.

ನಗರದ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಹಾಡುಹಗಲೇ ಗುಂಪೊಂದು ವಲಸೆ ಕಾರ್ಮಿಕನನ್ನು ಥಳಿಸಿ ಹತ್ಯೆಗೈದಿದೆ. ಉತ್ತರ ಭಾರತದಲ್ಲಿ ನಡೆಯುತ್ತಿದ್ದ ಗುಂಪು ಹತ್ಯೆ ಪ್ರಕರಣವು ಇದೀಗ ದ.ಕ. ಜಿಲ್ಲೆಯಲ್ಲೂ ನಡೆದಿರುವುದು ಖಂಡನೀಯ. ಇದನ್ನು ಗಂಭೀರವಾಗಿ ಪರಿಗಣಿಸಬೇಕಿದ್ದ ಪೊಲೀಸ್ ಇಲಾಖೆಯು ನಿರ್ಲಕ್ಷ್ಯ ತಾಳಿದೆ. ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಸ್ಪಷ್ಟ ಮಾಹಿತಿ ನೀಡಿಲ್ಲ. ಘಟನೆ ನಡೆದ ತಕ್ಷಣ ಪೊಲೀಸರು ನಿಪ್ಷಕ್ಷಪಾತದಿಂದ ಕೆಲಸ ಮಾಡಬೇಕಿತ್ತು. ಆರೋಪಿಗಳನ್ನು ಬಂಧಿಸಿ ಜೈಲಿಗೆ ಅಟ್ಟಬೇಕಿತ್ತು. ಘಟನೆ ನಡೆದ 48 ಗಂಟೆಯ ಬಳಿಕ ಪೊಲೀಸ್ ಆಯುಕ್ತರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಆದರೆ ಅದೂ ಕೂಡ ಅಪೂರ್ಣವಾಗಿತ್ತು. ಯಾಕೆ ಹೀಗೆ? ಇದರ ಹಿಂದೆ ಯಾರಿದ್ದಾರೆ ? ಈ ಬಗ್ಗೆ ಸರಕಾರ ತನಿಖೆ ನಡೆಸಬೇಕು ಎಂದು ಕೆ.ಕೆ.ಶಾಹುಲ್ ಹಮೀದ್ ಆಗ್ರಹಿಸಿದರು.

ಜಿಲ್ಲೆಯಲ್ಲಿ ಕೆಲವು ಮಂದಿ ಪ್ರಚೋದನಕಾರಿ ಭಾಷಣ ಮಾಡುತ್ತಿದ್ದಾರೆ. ಇದರಿಂದ ಪ್ರೇರಿತಗೊಂಡ ಗುಂಪು ವಲಸೆ ಕಾರ್ಮಿಕನನ್ನು ಹತ್ಯೆ ಮಾಡಿರುವ ಸಾಧ್ಯತೆ ಇದೆ. ಇದರ ಹಿಂದೆ ಮಾಜಿ ಕಾರ್ಪೊರೇಟರ್‌ವೊಬ್ಬರ ಪತಿಯ ಕೈವಾಡವೂ ಇದೆ. ಸೂಕ್ಷ್ಮ ವಿಚಾರಗಳಿಗೆ ತಕ್ಷಣ ಹೇಳಿಕೆ ನೀಡುತ್ತಿರುವ ಶಾಸಕರಾದ ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ಮೌನ ತಾಳಿದ್ದಾರೆ. ಇದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಬೆಳ್ತಂಗಡಿಯ ಪೆರಾಡಿಯಲ್ಲಿ ಇಸ್ಲಾಂ ಧರ್ಮವನ್ನು ಅವಹೇಳನಾರಿಯಾಗಿ ಚಿತ್ರಿಸಿದ ಘಟನೆಯ ಬಗ್ಗೆ ಪೊಲೀಸರು 30 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದರೂ ಈವರೆಗೆ ಯಾರನ್ನೂ ಬಂಧಿಸಿಲ್ಲ. ಕೇವಲ 6 ಮಂದಿಯನ್ನು ಠಾಣೆಗೆ ಕರೆಸಿ ಜಾಮೀನು ಮುಚ್ಚಳಿಕೆ ಬರೆಸಿಕೊಂಡಿದ್ದಾರೆ. ಪೊಲೀಸರು ಇಂತಹ ಪ್ರಕರಣವನ್ನು ಲಘುವಾಗಿ ಪರಿಗಣಿಸಿದ ಕಾರಣ ಹೀಗೆಲ್ಲ ಆಗುತ್ತಿದೆ. ಪ್ರಮೋಚದನಕಾರಿ ಭಾಷಣ ಮತ್ತು ಅವಹೇಳನಕಾರಿ ಘಟನೆಗಳಿಗೆ ಕಡಿವಾಣ ಹಾಕದಿದ್ದರೆ ಜಿಲ್ಲೆಯಲ್ಲಿ ಸಮಸ್ಯೆ ಮತ್ತಷ್ಟು ಬಿಗಡಾಯಿಸಬ ಹುದು ಎಂದು ಶಾಹುಲ್ ಹಮೀದ್ ಅಭಿಪ್ರಾಯಪಟ್ಟರು.

ಘಟನೆಯ ಬಗ್ಗೆ ರಾಜ್ಯದ ಗೃಹ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ ಹೇಳಿಕೆಗಳ ಅಸಮಾಧಾನ ವ್ಯಕ್ತಪಡಿಸಿದ ಶಾಹುಲ್ ಹಮೀದ್ ತಕ್ಷಣ ಅವರು ಜಿಲ್ಲೆಗೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.

ನಗರ ಮತ್ತು ಗ್ರಾಮಾಂತರ ಪೊಲೀಸ್ ಇಲಾಖೆಯ ಗುಪ್ತಚರ ವಿಭಾಗದ ವೈಫಲ್ಯವು ಎದ್ದು ಕಾಣುತ್ತಿವೆ. ಕುಡುಪುವಿನ ಕ್ರಿಕೆಟ್ ಮೈದಾನದಲ್ಲಿ ವಲಸೆ ಕಾರ್ಮಿಕನನ್ನು ಗುಂಪು ಹತ್ಯೆ ಮಾಡಿ ರಸ್ತೆಗೆ ಎಸೆದಿರುವ ಬಗ್ಗೆ ಸ್ಥಳೀಯರನ್ನು ವಿಚಾರಿಸಿದರೆ ಪೊಲೀಸರಿಗೆ ಸ್ಪಷ್ಟ ಮಾಹಿತಿ ಸಿಗಬಹುದು. ಆದರೆ ಪೊಲೀಸರು ಆ ಕೆಲಸವನ್ನು ಮಾಡಿಲ್ಲ. ವಲಸೆ ಕಾರ್ಮಿಕನ ಮೇಲೆ ಗಾಯವಿಲ್ಲ ಎಂದು ಪೊಲೀಸ್ ಆಯುಕ್ತರು ಯಾವ ಆಧಾರದಲ್ಲಿ ಹೇಳಿದ್ದಾರೆ ಅಂತ ಗೊತ್ತಾಗುತ್ತಿಲ್ಲ. ನಾವು ವೆನ್ಲಾಕ್ ಶವಾಗಾರಕ್ಕೆ ತೆರಳಿ ಮೃತದೇಹವನ್ನು ಪರಿಶೀಲಿಸಿದಾಗ ಆತನ ಮೈಮೇಲೆ ತುಂಬಾ ಗಾಯಗಳು ಕಂಡುಬಂದಿವೆ. ಪೊಲೀಸ್ ಆಯುಕ್ತರು ಹೊರಡಿಸಿದ ಲುಕ್‌ಔಟ್ ನೋಟಿಸ್‌ನಲ್ಲೂ ಕೂಡ ಸಾಕಷ್ಟು ಗೊಂದಲವಿದೆ. ಅವರ ಮಾತುಗಳೆಲ್ಲವೂ ಅಡ್ಡಗೋಡೆಯ ಮೇಲೆ ದೀಪವಿಟ್ಟಂತಿದೆ ಎಂದು ಶಾಹುಲ್ ಹಮೀದ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಲಾರೆನ್ಸ್ ಡಿಸೋಜ, ಸುಹೈಲ್ ಕಂದಕ್, ಆಲ್ವಿನ್ ಪ್ರಕಾಶ್, ಮುಹಮ್ಮದ್ ಬಪ್ಪಳಿಗೆ, ಹಬೀಬ್ ಕಣ್ಣೂರು, ವಹಾಬ್ ಕುದ್ರೋಳಿ, ಬಶೀರ್ ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X