Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕ್ರೀಡಾ ಕೋಟಾದಲ್ಲಿ ಉದ್ಯೋಗಾವಕಾಶ ಕಡಿತ...

ಕ್ರೀಡಾ ಕೋಟಾದಲ್ಲಿ ಉದ್ಯೋಗಾವಕಾಶ ಕಡಿತ ಸಲ್ಲದು: ರೇಮಂಡ್ ಡಿಸೋಜಾ

ವಾರ್ತಾಭಾರತಿವಾರ್ತಾಭಾರತಿ29 April 2025 7:25 PM IST
share
ಕ್ರೀಡಾ ಕೋಟಾದಲ್ಲಿ ಉದ್ಯೋಗಾವಕಾಶ ಕಡಿತ ಸಲ್ಲದು: ರೇಮಂಡ್ ಡಿಸೋಜಾ

ಮಂಗಳೂರು : ಇತ್ತೀಚಿನ ವರ್ಷಗಳಲ್ಲಿ ಕ್ರೀಡಾ ಪ್ರತಿಭೆಗಳಿಗೆ ಬ್ಯಾಂಕ್ ಹಾಗೂ ಸರಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ ಕಡಿಮೆಯಾಗಿದೆ. ಉದ್ಯೋಗದಲ್ಲಿ ಕ್ರೀಡಾ ಕೋಟಾ ಕಡಿಮೆಯಾದ ಕಾರಣ ವಿದ್ಯಾರ್ಥಿಗಳು ಕ್ರೀಡೆಯಿಂದ ವಿಮುಖರಾಗುವ ವಾತಾವರಣ ನಿರ್ಮಾಣವಾಗಿದೆ. ಕ್ರೀಡಾ ಪಟುಗಳಿಗೆ ಉದ್ಯೋಗ ಭದ್ರತೆ ಕಲ್ಪಿಸಲು ಸರಕಾರ ಆದ್ಯತೆ ನೀಡಬೇಕು ಎಂದು ಅಂತರ್ರಾಷ್ಟ್ರೀಯ ದೇಹದಾಡ್ಯ ಪಟು, ಮಿ. ವರ್ಲ್ಡ್ ರೇಮಂಡ್ ಡಿ ಸೋಜ ಹೇಳಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಂಗಳವಾರ ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿ ಸನ್ಮಾನ ಸ್ವೀಕರಿಸಿ ಮಾತನಾಡಿದರು ‘ ಯಾವುದೇ ಕ್ಷೇತ್ರದಲ್ಲಿ ಛಲ, ಶಿಸ್ತು, ಕಠಿಣ ಪರಿಶ್ರಮ ಇದ್ದರೆ ಮಾತ್ರ ಯಶಸ್ಸು ಸಾಧ್ಯ. ಯುವ ಕ್ರೀಾಪ್ರತಿಭೆಗಳು ವೈಯಕ್ತಿಕ ಸಾಧನೆಯ ಜತೆಗೆ ದೇಶಕ್ಕೆ ಕೀರ್ತಿ ತರುವ ಉನ್ನತ ಕನಸು ಕಾಣಬೇಕು ಎಂದರು.

ಹದಿ ಹರೆಯದಲ್ಲೇ ಬಾಡಿ ಬಿಲ್ಡಿಂಗ್ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂಬ ಛಲ ಮೂಡಿತು. ಹಾಗಾಗಿ ಬಡತನ ಇದ್ದರೂ ಅದನ್ನು ಸವಾಲಾಗಿ ಸ್ವೀಕರಿಸಿ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಕೀರ್ತಿ ತರುವ ಸಾಧನೆ ಮಾಡಿದೆ. ಬಂಟ್ವಾಳದ ಮೊಡಂಕಾಪುವಿನಲ್ಲಿ ಪ್ರೌಢ ಶಿಕ್ಷಣ ಪಡೆದ ಬಳಿಕ ಬಡತನದ ಕಾರಣ ವಿದ್ಯಾಭ್ಯಾಸ ಮುಂದುವರಿಸಲು ಆಗಲಿಲ್ಲ. ಓದಿನಲ್ಲಿ ಹೆಚ್ಚಿನ ಉದ್ಯೋಗ ಆಸಕ್ತಿಯೂ ಇರಲಿಲ್ಲ. ಉದ್ಯೋಗ ಅರಸಿ ಮಂಗಳೂರಿಗೆ ಬಂದವನು ಅಲೋಶಿಯಸ್ ಹಾಸ್ಟೆಲ್‌ನಲ್ಲಿ ಕೆಲಸಕ್ಕೆ ಸೇರಿದೆ. ಸುಮಾರು ನೂರು ವಿದ್ಯಾರ್ಥಿಗಳಿಗೆ 3 ಸಿಬ್ಬಂದಿ ಅಡುಗೆ ಮಾಡಬೇಕಿತ್ತು. ತುಂಬಾ ಕಷ್ಟದ ಕೆಲಸದ ಮಧ್ಯೆಯೂ ಸಾಯಂಕಾಲ ಜಿಮ್‌ಗೆ ಹೋಗಿ ಅಭ್ಯಾಸ ಮಾಡುತ್ತಿದ್ದೆ. ಈಗಿನಂತೆ ಟ್ರಾಕ್ ಸೂಟ್, ಶೂ, ಪೌಷ್ಟಿಕ ಆಹಾರ ಯಾವ ಸೌಲಭ್ಯವೂ ಇರಲಿಲ್ಲ. ಮಣ್ಣಿನ ಅಖಾಡದಲ್ಲಿ ಅಭ್ಯಾಸ ಮಾಡಬೇಕಿತ್ತು. ಜಿಮ್‌ನಲ್ಲಿ ತರಬೇತುದಾರ ರಾಮಕೃಷ್ಣ ಅವರು , ಬಳಿಕ ಗುರುಗಳಾದ ಗಣೇಶ್ ಪಾಂಡೇಶ್ವರ, ಎಂ.ಎಸ್.ಕುಮಾರ್ ಪ್ರೋತ್ಸಾಹ ನೀಡಿದರು. ಬಾಡಿ ಬಿಲ್ಡಿಂಗ್ ಬಗ್ಗೆ ಯಾವುದೇ ಜ್ಞಾನ ಇಲ್ಲದ ನನ್ನಂತ ಹಳ್ಳಿ ಹುಡುಗನನ್ನು ಸ್ಪರ್ಧೆಗೆ ಅಣಿಗೊಳಿಸಿದರು ಎಂದು ರೇಮಂಡ್ ಡಿ ಸೋ ಜ ಹಿಂದಿನ ದಿನಗಳನ್ನು ಸ್ಮರಿಸಿಕೊಂಡರು.

ಸುರತ್ಕಲ್‌ನಲ್ಲಿ ನಡೆದ ಮೊದಲ ಒಂದು ಸ್ಪರ್ಧೆಯಲ್ಲೇ ಪ್ರಥಮ ಬಹುಮಾನ ಗಳಿಸಿದೆ. ಮುಂದೆ ಪ್ರತೀ ಸ್ಪರ್ಧೆಯಲ್ಲೂ ಗೆಲುವು ಸಾಧಿಸಿದೆ. ಆತ್ಮ ವಿಶ್ವಾಸ ಮೂಡಿತು. ಅದೇ ವೇಳೆ ಕಾರ್ಪೋರೇಶನ್ ಬ್ಯಾಂಕ್‌ನಲ್ಲಿ ಕ್ರೀಡಾ ಕೋಟಾದಲ್ಲಿ ಉದ್ಯೋಗ ದೊರೆಯಿತು. ಬ್ಯಾಂಕ್ ನೀಡಿದ ಪ್ರೋತ್ಸಾಹದಿಂದ ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿದೆ. 23ನೇ ವಯಸ್ಸಿಗೆ ಭಾರತ್ ಕಿಶೋರ್, ಭಾರತ್ ಕುಮಾರ್, ಭಾರತ್ ಶ್ರೀ ಪ್ರಶಸ್ತಿಗಳನ್ನು ಜಯಿಸಿದೆ. 1990ರಲ್ಲಿ ಜಪಾನ್‌ನಲ್ಲಿ ನಡೆದ ಅಂತರ್ರಾಷ್ಟ್ರೀಯ ಸ್ಪರ್ಧೆಯಲ್ಲಿ ಮಿ.ವರ್ಲ್ಡ್ ಪ್ರಶಸ್ತಿ ಗೆದ್ದೆ. ಇದರೊಂದಿಗೆ ಪ್ರಥಮ ಬಾರಿಗೆ ಭಾರತೀಯನೊಬ್ಬ ಈ ಪ್ರಶಸ್ತಿ ಗೆದ್ದ ಹೆಮ್ಮೆ ನನ್ನದು . ಹಿಂದೆ ಕ್ರೀಡೆಯಲ್ಲಿ ನಗದು ಬಹುಮಾನ ಇರಲಿಲ್ಲ. ದೇಶಕ್ಕೆ ಪದಕ ಗೆಲ್ಲುವುದೇ ನಮಗೆ ಖುಷಿಯ ವಿಷಯವಾಗಿತ್ತು ಎಂದು ಅವರು ಹೇಳಿದರು.

ಹಿರಿಯ ಪತ್ರಕರ್ತ ಕೇಶವ ಕುಂದರ್ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ , ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ , ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಉಪಸ್ಥಿತರಿದ್ದರು.

ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಆರ್.ಸಿ.ಭಟ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X