ಪಾಂಡೇಶ್ವರ: ಬೇಕರಿಯಲ್ಲಿ ಬೆಂಕಿ ಅವಘಡ

ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಬೇಕರಿಯೊಂದರಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ ಎಂದು ತಿಳಿದು ಬಂದಿದೆ.
ಈ ಬೇಕರಿಯ ಸ್ವಿಚ್‌ಬೋರ್ಡ್‌ನಲ್ಲಿ ಮಂಗಳವಾರ ಬೆಳಗ್ಗೆ ಸುಮಾರು 6..30ರ ವೇಳೆಗೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇದರಿಂದ ತಿಂಡಿ ತಿನಿಸುಗಳು ಮತ್ತು ಕಟ್ಟಡಕ್ಕೆ ಭಾಗಶಃ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಪಾಂಡೇಶ್ವರ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Next Story