Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಾ.ಜಿ.ಪರಮೇಶ್ವರ ತಮ್ಮ ಸ್ಥಾನಕ್ಕೆ...

ಡಾ.ಜಿ.ಪರಮೇಶ್ವರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಜಲೀಲ್ ಕೃಷ್ಣಾಪುರ

ವಾರ್ತಾಭಾರತಿವಾರ್ತಾಭಾರತಿ30 April 2025 10:56 PM IST
share
ಡಾ.ಜಿ.ಪರಮೇಶ್ವರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಜಲೀಲ್ ಕೃಷ್ಣಾಪುರ

ಮಂಗಳೂರು: ಮಂಗಳೂರಿನಲ್ಲಿ ಗುಂಪು ಥಳಿತದಿಂದ ಹತ್ಯೆಗೀಡಾದ ವಲಸೆ ಕಾರ್ಮಿಕ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎಂದು ಆರೋಪಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ತಕ್ಷಣ ಆ ಹೇಳಿಕೆಯನ್ನು ಹಿಂಪಡೆಯಬೇಕು ಮತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಎಸ್‌ಡಿಪಿಐ ಮಂಗಳೂರು ನಗರ ಜಿಲ್ಲಾಧ್ಯಕ್ಷ ಜಲೀಲ್ ಕೃಷ್ಣಾಪುರ ಆಗ್ರಹಿಸಿದ್ದಾರೆ.

ನಗರದ ಎಸ್‌ಡಿಪಿಐ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗೃಹ ಸಚಿವ ಪರಮೇಶ್ವರ ಅವರು ಹತ್ಯೆಗೀಡಾದ ವ್ಯಕ್ತಿಯ ಬಗ್ಗೆ ಸುಳ್ಳು ಆರೋಪ ಮಾಡಿ ಸಮುದಾಯವನ್ನು ತಲೆ ತಗ್ಗಿಸುವಂತೆ ಮಾಡಿದ್ದಾರೆ. ಇಂತಹ ಅಸಮರ್ಥ ಗೃಹ ಸಚಿವರ ರಾಜೀನಾಮೆಯನ್ನು ತಕ್ಷಣ ಮುಖ್ಯ ಮಂತ್ರಿ ಸಿದ್ದರಾಮಯ್ಯ ಪಡೆಯಬೇಕು ಎಂದು ಆಗ್ರಹಿಸಿದರು.

ಡಾ.ಜಿ. ಪರಮೇಶ್ವರ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯದಿದ್ದರೆ ಅವರು ದ.ಕ. ಜಿಲ್ಲೆಗೆ ಪ್ರವೇಶಿಸು ವಾಗ ಅವರನ್ನು ಮುಸ್ಲಿಮರು ಸೂಕ್ತ ರೀತಿಯಲ್ಲಿ ಸ್ವಾಗತಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಗೃಹ ಸಚಿವರ ಹೇಳಿಕೆಯಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಸಂಘ ಪರಿವಾರದ ಸಮ್ಮಿಶ್ರ ಸರಕಾರ ಇದೆಯೋ ಎಂಬ ಸಂಶಯ ಮೂಡುತ್ತಿದೆ ಎಂದು ಜಲೀಲ್ ಕೃಷ್ಣಾಪುರ ಹೇಳಿದರು.

ಸಮಾಜದಲ್ಲಿ ವಿಷ ಬೀಜ ಬಿತ್ತುವ ಡಾ. ಜಿ.ಪರಮೇಶ್ವರ ಅವರಂತಹ ಸಚಿವರು ಸಮಾಜವಾದಿ ನಿಲುವಿನ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಇರಬಾರದು ಎಂದರು.

ಪರಮೇಶ್ವರ ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣದಿಂದಾಗಿ ಇಂತಹ ಹೇಳಿಕೆ ನೀಡಿರಬಹುದು ಎಂದು ಜಲೀಲ್ ಕೃಷ್ಣಾಪುರ ಕುಟುಕಿದರು. ಕ್ಷುಲ್ಲಕ ಕಾರಣಕ್ಕಾಗಿ ಗುಂಪು ಹತ್ಯೆ ನಡೆದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯಕ್ತ ಅನುಪಮ್ ಅಗ್ರವಾಲ್ ಹೇಳಿಕೆ ನೀಡಿದ್ದಾರೆ. ಕ್ಷುಲ್ಲಕ ಕಾರಣ ಏನು? ಎಂದು ಪ್ರಶ್ನಿಸಿದ ಜಲೀಲ್ ಅವರು ಪ್ರಕರಣವನ್ನು ಸರಿಯಾಗಿ ನಿಭಾಯಿಸದ ಪೊಲೀಸ್ ಠಾಣೆಯ ನಿರೀಕ್ಷಕರನ್ನು ಅಮಾನತು ಮಾಡಬೇಕು ಮತ್ತು ಗುಂಪು ಹತ್ಯೆ ಪ್ರಕರಣದಲ್ಲಿ ಮಾಜಿ ಕಾರ್ಪೊರೇಟರ್ ಪತಿ ರವೀಂದ್ರ ನಾಯಕ್ ಭಾಗಿಯಾಗಿದ್ದಾರೆಂಬ ಆರೋಪವಿದ್ದು, ಆತನನ್ನು ಬಂಧಿಸುವಂತೆ ಸರಕಾರವನ್ನು ಆಗ್ರಹಿಸಿದರು.

ಗುಂಪು ಹತ್ಯೆಗೀಡಾದ ವ್ಯಕ್ತಿಯ ಬಾಯಿಗೆ ದುಷ್ಕರ್ಮಿಗಳು ಮಣ್ಣು ಹಾಕಿದ್ದಾರೆ. ಆತನ ಮರ್ಮಾಂಗಕ್ಕೆ ತುಳಿದು ಕೊಲೆ ಮಾಡಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ಪ್ರಮುಖರಾದ ನಿಸಾರ್ ಅಹ್ಮದ್, ಸಿದ್ದೀಕ್ ಬೆಂಗ್ರೆ, ಅಕ್ಬರ್ ಕುದ್ರೋಳಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X