Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಿರಿಯ ಸಾಹಿತಿ ಹಂಪನಾ ವಿರುದ್ಧ ಕ್ರಮಕ್ಕೆ...

ಹಿರಿಯ ಸಾಹಿತಿ ಹಂಪನಾ ವಿರುದ್ಧ ಕ್ರಮಕ್ಕೆ ಚಿಂತನೆ: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ

ಅಕ್ರಮ ಎಸಗಿದ ಆರೋಪ

ವಾರ್ತಾಭಾರತಿವಾರ್ತಾಭಾರತಿ1 May 2025 7:31 PM IST
share
ಹಿರಿಯ ಸಾಹಿತಿ ಹಂಪನಾ ವಿರುದ್ಧ ಕ್ರಮಕ್ಕೆ ಚಿಂತನೆ: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ

ಮಂಗಳೂರು: ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದಾಗ ಪರಿಷತ್‌ನಲ್ಲಿ ಅಕ್ರಮ ಎಸಗುವ ಮೂಲಕ ಆಡಳಿತಾಧಿಕಾರಿಯ ನೇಮಕಕ್ಕೆ ಕಾರಣವಾಗಿದ್ದರು. ಅವರಿಂದಲೇ ಪರಿಷತ್‌ಗೆ ಉಂಟಾದ ನಷ್ಟವನ್ನು ಭರಿಸುವಂತೆ ಹಗರಣಗಳ ತನಿಖೆ ನಡೆಸಿದ್ದ ನ್ಯಾಯಮೂರ್ತಿ ಶ್ಯಾಮಸುಂದರ್ ನೇತೃತ್ವದ ಸಮಿತಿ ಸೂಚನೆ ನೀಡಿದೆ. ಹಾಗಾಗಿ ಹಂಪನಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಪರಿಷತ್ ಚಿಂತನೆ ನಡೆಸಲಿದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಹೇಳಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು1987 ರಲ್ಲಿ ಕಸಾಪ ಅಧ್ಯಕ್ಷರಾಗಿದ್ದ ಹಂಪನಾ ವಿರುದ್ಧ ಅಕ್ರಮಗಳ ಆರೋಪ ಕೇಳಿಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದ ಸಮಿತಿಯ ಶಿಫಾರಸಿನಂತೆ ಆಡಳಿತಾಧಿಕಾರಿಗಳ ನೇಮಕ ಮಾಡಲಾಗಿತ್ತು. ಅವರ ವಿರುದ್ಧದ ಆರೋಪ ತನಿಖೆಯಲ್ಲಿ ಸಾಬೀತಾದ ಕಾರಣ ಪರಿಷತ್ತಿಗೆ ಆದ ನಷ್ಟವನ್ನು ಅವರಿಂದಲೇ ಭರ್ತಿ ಮಾಡಿ ಕ್ರಿಮಿನಲ್ ಕೇಸು ದಾಖಲಿಸುವಂತೆ ಕೋರ್ಟ್ ಆದೇಶಿಸಿತ್ತು. ಆದರೆ ನಂತರ ಬಂದ ಪರಿಷತ್‌ನ ಅಧ್ಯಕ್ಷರುಗಳಿಗೆ ಇಂತಹ ಆದೇಶ ಇರುವ ಬಗ್ಗೆ ಗಮನಕ್ಕೆ ಬಂದಿರಲಿಲ್ಲ ಎಂದು ಹೇಳಿದರು.

ಆಡಳಿತಾಧಿಕಾರಿ ನೇಮಕಕ್ಕೆ ಕಾರಣರಾದ ಹಂಪನಾ ಅವರೇ ಈಗ ಮುಖ್ಯಮಂತ್ರಿಗಳಿಗೆ ಆಡಳಿತಾಧಿ ಕಾರಿ ನೇಮಿಸುವಂತೆ ಆಗ್ರಹಿಸುತ್ತಿರುವುದು ವಿಪರ್ಯಾಸ. ಹಂಪನಾ ವಿರುದ್ಧ ಕ್ರಮಕ್ಕೆ ಕಾನೂನು ಸಲಹೆ ಪಡೆದು ಕಸಾಪ ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು. ಇದನ್ನು ಮುಖ್ಯಮಂತ್ರಿಯ ಗಮನಕ್ಕೂ ತರಲಾಗುವುದು ಎಂದು ಡಾ.ಮಹೇಶ್ ಜೋಶಿ ಸ್ಪಷ್ಟಪಡಿಸಿದರು.

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ನೀಡಿಲ್ಲ ಎಂದು ಸಿಎಂ ಅವರನ್ನು ಭೇಟಿ ಮಾಡಿದ ಹಂಪನಾ ನಿಯೋಗ ಆರೋಪಿಸಿದೆ. ಇಂತಹ ಸಾಹಿತ್ಯ ಸಮ್ಮೇಳನಗಳ ಲೆಕ್ಕ ಪತ್ರದ ಜವಾಬ್ದಾರಿಯನ್ನು ನಿರ್ವಹಿಸುವುದು ಆತಿಥ್ಯ ಪಡೆದ ಜಿಲ್ಲೆಯ ಉಸ್ತುವಾರಿ ಸಚಿವರ ನೇತೃತ್ವದ ಸಮ್ಮೇಳನದ ಸ್ವಾಗತ ಸಮಿತಿಯಾಗಿದೆ. ಈ ಸಮಿತಿ ಕಸಾಪಗೆ ಲೆಕ್ಕಪತ್ರ ಒಪ್ಪಿಸಿದ ಬಳಿಕ ಇಳಿಕೆಯಾ ದರೆ ಆ ಮೊತ್ತವನ್ನು ಅತಿಥೇಯ ಜಿಲ್ಲೆಗೆ ಮರಳಿಸುವುದು ಕ್ರಮ. ಇಂತಹ ವಿಚಾರವನ್ನೂ ಅರಿತುಕೊಳ್ಳದೆ ವಿನಾ ಕಾರಣ ನಿಯೋಗವು ಕಸಾಪ ಬಗ್ಗೆ ದೋಷಾರೋಪ ಮಾಡುತ್ತಿದೆ ಎಂದರು.

ಕಸಾಪ ವಿರುದ್ಧ ಸಲ್ಲದ, ದಾಖಲೆ ರಹಿತ ಆರೋಪ ಮಾಡುತ್ತಿರುವ ಬೆಂಗಳೂರಿನ ಸಮಾನ ಮನಸ್ಕರ ವೇದಿಕೆ ಹಾಗೂ ಅದರಲ್ಲಿ ಇರುವವರ ವಿರುದ್ಧ ನ್ಯಾಯಾಲಯದಿಂದ 2023ರಲ್ಲೇ ಇನ್ಜೆಂಕ್ಷನ್ ಆದೇಶ ತರಲಾಗಿದೆ. ಹೀಗಿದ್ದೂ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಕಸಾಪ ಬಗ್ಗೆ ಅಪಪ್ರಚಾರ ನಡೆಸಲಾಗು ತ್ತಿದೆ. ಇದರ ವಿರುದ್ಧ ನ್ಯಾಯಾಲಯಕ್ಕೆ ಅಪೀಲು ಸಲ್ಲಿಸಲಾಗುವುದು ಎಂದು ಡಾ. ಮಹೇಶ್ ಜೋಶಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಸಾಪ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಡಾ.ಮಾಧವ ಎಂ.ಕೆ, ಕಸಾಪ ದ.ಕ. ಜಿಲ್ಲಾಧ್ಯಕ್ಷ ಡಾ.ಶ್ರೀನಾಥ್ ಎಂ.ಪಿ. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X