Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಿಪಿಐ ಪ್ರಥಮ ಪ್ರಧಾನ ಕಾರ್ಯದರ್ಶಿ...

ಸಿಪಿಐ ಪ್ರಥಮ ಪ್ರಧಾನ ಕಾರ್ಯದರ್ಶಿ ಕಾ.ಎಸ್. ಘಾಟೆ ನುಡಿಸ್ಮರಣೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ1 May 2025 8:42 PM IST
share
ಸಿಪಿಐ ಪ್ರಥಮ ಪ್ರಧಾನ ಕಾರ್ಯದರ್ಶಿ ಕಾ.ಎಸ್. ಘಾಟೆ ನುಡಿಸ್ಮರಣೆ ಕಾರ್ಯಕ್ರಮ

ಮಂಗಳೂರು: ಸತ್ಯ, ವೈಜ್ಞಾನಿಕತೆ ಇತ್ಯಾದಿಯನ್ನು ಬಚ್ಚಿಟ್ಟು ಸುಳ್ಳು ಅವೈಜ್ಞಾನಿಕತೆ, ಮೂಢನಂಬಿಕೆ ಗಳನ್ನು ಬಿತ್ತರಿಸಿ ಜನರನ್ನು ಮೂಢರಾಗಿಸುವ ಪ್ರಕ್ರಿಯೆ ಮೂಲಕ ದೇಶವನ್ನು ಏಕಾಧಿಪತ್ಯ ಆಡಳಿತಕ್ಕೆ ಬದಲಿಸಲು ಎಲ್ಲಾ ಪ್ರಯತ್ನಗಳು ಇತೀಚಿಗಿನ ವರ್ಷಗಳಲ್ಲಿ ನಡೆಯುತ್ತಿದೆ ಎಂದು ಖ್ಯಾತ ವೈದ್ಯ ಹಾಗೂ ಪ್ರಗತಿಪರ ಚಿಂತಕ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಹೇಳಿದರು.

ಸಿಪಿಐ ದ.ಕ. ಹಾಗೂ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಪಕ್ಷದ ಶತಮಾನೋತ್ಸವ ಹಿನ್ನೆಲೆಯಲ್ಲಿ ವಿಶ್ವ ಕಾರ್ಮಿಕ ದಿನವಾದ ಗುರುವಾರ ನಗರದ ಬಿಜೈಯಲ್ಲಿರುವ ಕರ್ನಾಟಕ ಬ್ಯಾಂಕ್ ನೌಕರರ ಸಂಘದ ಸಭಾಭವನದಲ್ಲಿ ಕಾ.ಎಸ್. ಘಾಟೆ ಅವರ ನುಡಿಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಂಗಳೂರಿನ ಸುಪುತ್ರ ಎಸ್. ಘಾಟೆ ಮುಂಬೈಗೆ ತೆರಳಿ ಇತರರಂತೆ ವ್ಯಾಪಾರ ವಹಿವಾಟು ನಡೆಸದೆ, ಅಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಸ್ಥಿತಿಗತಿಗಳನ್ನು ಗಮನಿಸಿ ಅವರನ್ನು ದಾಸ್ಯದಿಂದ ಬಿಡುಗಡೆ ಮಾಡುವ ಸಾಹಸಕ್ಕೆ ಮುಂದಾದರು. ಮಾರ್ಕ್ಸ್‌ವಾದ ಲಿನಿನ್ ವಾದ ಮುಂತಾದ ಕಮ್ಯುನಿಸ್ಟ್ ಸಿದ್ಧಾಂತ ಗಳನ್ನು ಆಳವಾಗಿ ಅಭ್ಯಾಸ ಮಾಡಿ ಕಮ್ಯುನಿಸ್ಟ್ ಚಿಂತಕರನ್ನು ಒಗ್ಗೂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ’ವನ್ನು 1925ರಲ್ಲಿ ಕಟ್ಟಿ ಅದರ ಪ್ರಪ್ರಥಮ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು ಎಂದು ಶ್ರಿನಿವಾಸ ಕಕ್ಕಿಲ್ಲಾಯ ಬಣ್ಣಿಸಿದರು.

ಎಸ್. ಘಾಟೆಯ ಸಂಬಂಧಿ ಸುಮನಾ ಘಾಟೆ ಮಾತನಾಡಿ ಅಜ್ಜ ಘಾಟೆಯವರು ಕುಟುಂಬದೊಂದಿಗೆ ಬಹಳ ಆತ್ಮೀಯವಾಗಿದ್ದರು. ಅವರೆಂದರೆ ಎಲ್ಲರಿಗೂ ಪ್ರೀತಿ, ವಿಶ್ವಾಸವಿತ್ತು. ನಾವು ಘಾಟೆಯ ಕುಟುಂಬಸ್ಥರು ಎನ್ನಲು ನಮಗೆ ಹೆಮ್ಮೆ ಇದೆ ಎಂದರು.

ನಿವೃತ್ತ ಪ್ರಾಂಶುಪಾಲ, ಜನಪರ ಚಿಂತಕ ಡಾ. ವಸಂತ ಕುಮಾರ್ ಮಾತನಾಡಿ ಯುವಪೀಳಿಗೆ ದೇಶದ ಭವಿಷ್ಯ.ಆದರೆ ಅವರನ್ನು ಧರ್ಮ, ಜಾತಿ, ರಾಷ್ಟ್ರೀಯತೆ ಹೆಸರಲ್ಲಿ ದಾರಿತಪ್ಪಿಸಲಾಗುತ್ತಿದೆ. ಅವರನ್ನು ಸರಿದಾರಿಗೆ ತರುವಲ್ಲಿ ನಾವು ಯಶಸ್ವಿಯಾದರೆ ದೇಶದ ಭವಿಷ್ಯ ಉಜ್ವಲವಾಗುತ್ತದೆ. ಇಲ್ಲದಿದ್ದರೆ ದುರಂತ ವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಿಪಿಐ ದ.ಕ ಹಾಗೂ ಉಡುಪಿ ಜಿಲ್ಲಾ ಕಾರ್ಯದರ್ಶಿ ಶೇಖರ ಬಿ. ಅಧ್ಯಕ್ಷತೆ ವಹಿಸಿದ್ದರು. ಸೀತಾರಾಮ ಬೇರಿಂಜೆ ಕಾರ್ಯಕ್ರಮ ನಿರೂಪಿಸಿದರು. ಸುರೇಶ್ ಬಂಟ್ವಾಳ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X