ಪ್ರವಾದಿಯವರ ಜೀವನದ ಹಾದಿ ಅನುಸರಿಸಬೇಕು: ಹುಸೈನ್ ಸಅದಿ

ಉಳ್ಳಾಲ: ಮುಸ್ಲಿಮರಿಗೆ ಶ್ರೇಷ್ಠ ದಿನ ಶುಕ್ರವಾರ ಆಗಿದೆ. ಈ ದಿನದಂದು ಧಾರ್ಮಿಕ ವಿಚಾರಗಳು, ಪ್ರಾರ್ಥನೆ ಜಾಸ್ತಿ ನಿರ್ವಹಣೆ ಮಾಡಬೇಕು. ಪ್ರವಾದಿಯವರ ಜೀವನದ ಹಾದಿ ನಾವು ಅನುಸರಿಸಬೇಕು ಎಂದು ಹುಸೈನ್ ಸಅದಿ ಕೆಸಿರೋಡ್ ಹೇಳಿದರು.
ಅವರು ಉಳ್ಳಾಲ ದರ್ಗಾ ದ 22 ಪಂಚವಾರ್ಷಿಕ ಉರೂಸ್ ಪ್ರಯುಕ್ತ ದರ್ಗಾ ವಠಾರದಲ್ಲಿ ನಡೆದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
ವಿದ್ಯಾಭ್ಯಾಸ ಇಲ್ಲದಿದ್ದರೆ ಸಮುದಾಯ ಅಭಿವೃದ್ಧಿ ಸಾಧ್ಯ ಇಲ್ಲ. ಕಲಿಯುವ ವಯಸ್ಸಿನಲ್ಲಿ ಶಿಕ್ಷಣ ಪಡೆಯಬೇಕು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೇರೇಪಣೆ ನೀಡಬೇಕು ಎಂದು ಕರೆ ನೀಡಿದರು.
ಅಬ್ದುಲ್ ರಶೀದ್ ಝೈನಿ ಅಲ್ ಕಾಮಿಲ್ ಸಖಾಫಿ ಧಾರ್ಮಿಕ ಪ್ರವಚನ ನೀಡಿದರು. ಸಯ್ಯಿದ್ ಅಬ್ದುಲ್ ರಹ್ಮಾನ್ ಶಹೀರ್ ತಂಙಳ್ ಪೊಸೋಟು ದುಆ ನೆರವೇರಿಸಿದರು. ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದರ್ಗಾ ಮಾಜಿ ಅಧ್ಯಕ್ಷ ಕಣಚೂರು ಮೋನು, ಯು.ಎಸ್.ಹಂಝ, ಮಾಜಿ ಉಪಾಧ್ಯಕ್ಷ ಇಸ್ಮಾಯಿಲ್ ಮೋನು, ಕಣಚೂರು ಮೆಡಿಕಲ್ ಕಾಲೇಜು ಹಾಗೂ ಸಂಶೋಧನಾ ಕೇಂದ್ರದ ನಿರ್ದೇಶಕ ಅಬ್ದುಲ್ ರಹಿಮಾನ್ ಕಣಚೂರು, ಉಳ್ಳಾಲ ಬೈಲು ಮಸೀದಿ ಅಧ್ಯಕ್ಷ ಅಮೀರ್ ಅಲಿ, ಖತೀಬ್ ಕಬೀರ್ ಸ ಅದಿ,ಪಿಲಾರ್ ಮಸೀದಿ ಖತೀಬ್ ಜಬ್ಬಾರ್ ಸಖಾಫಿ , ಅಶ್ರಫ್ ತಂಙಳ್, ಅಬ್ದುಲ್ ಕರೀಂ ಸಖಾಫಿ, ಯೆನೆಪೋಯ ವೈದ್ಯಕೀಯ ಕಾಲೇಜು ಸಿಬ್ಬಂದಿ ಅಬ್ದುಲ್ ರಝಾಕ್, ದರ್ಗಾ ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಕಾರ್ಯದರ್ಶಿ ಮುಸ್ತಫಾ ಮದನಿಗರ, ಕೋಶಾಧಿಕಾರಿ ನಾಝೀಮ್ ಮುಕಚೇರಿ, ಸದಸ್ಯ ಝೈನುದ್ದೀನ್ ಮೇಲಂಗಡಿ, ಅಬೂಬಕ್ಕರ್ ಹೈದರಲಿ ನಗರ,ಅರೆಬಿಕ್ ಕಾಲೇಜು ಪ್ರೊಫೆಸರ್ ಇಬ್ರಾಹಿಂ ಅಹ್ಸನಿ, ಆಝಾದ್ ಇಸ್ಮಾಯಿಲ್ ಮತ್ತಿತರರು ಉಪಸ್ಥಿತರಿದ್ದರು.
ದರ್ಗಾ ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ ಸ್ವಾಗತಿಸಿದರು.







