ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ನೌಶಾದ್‌ನನ್ನು ಭೇಟಿಯಾದ ಉಸ್ತುವಾರಿ ಸಚಿವರು
ಆಸ್ಪತ್ರೆಯ ಖರ್ಚು ವೆಚ್ಚ ಸರಕಾರದಿಂದ ಭರಿಸುವ ಭರವಸೆ

ಮಂಗಳೂರು: ದುಷ್ಕರ್ಮಿಗಳಿಂದ ಶುಕ್ರವಾರ ಮುಂಜಾವ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯ ಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಡ್ಯಾರ್ ಕಣ್ಣೂರಿನ ನೌಶಾದ್‌ನನ್ನು ಶನಿವಾರ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಅಲ್ಲದೆ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು.
ಬಳಿಕ ಮಾತನಾಡಿದ ಅವರು ಇಂತಹ ಗಲಭೆ ಸಂದರ್ಭ ಕುಟುಂಬಕ್ಕೆ ಆಧಾರ ಸ್ಥಂಭವಾಗಿರುವ ಅಮಾಯ ಕರು ಸಮಸ್ಯೆಗೆ ಸಿಲುಕುತ್ತಾರೆ. ಕಲ್ಲಾಪಿನ ಮಾರ್ಕೆಟ್‌ನಲ್ಲಿ ಕೆಲಸ ಮಾಡಲು ಮನೆಯಿಂದ ಹೊರಟಿದ್ದ ನೌಶಾದ್ ದುಷ್ಕರ್ಮಿಗಳ ಇರಿತಕ್ಕೊಳಗಾಗಿ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತಾಗಿದೆ. ಇದರಿಂದ ನೌಶಾದ್‌ನ ಕುಟುಂಬವು ತತ್ತರಿಸಿದೆ. ಹಾಗಾಗಿ ನೌಶಾದ್‌ನ ಚಿಕಿತ್ಸೆಯ ವೆಚ್ಚವನ್ನು ಸರಕಾರ ಭರಿಸಲಿದೆ ಎಂದರು.
ಈ ಸಂದರ್ಭ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್, ಮಾಜಿ ಮೇಯರ್ ಕೆ. ಅಶ್ರಫ್, ಮಾಜಿ ಕಾರ್ಪೊರೇಟರ್ ಅಶ್ರಫ್ ಬಜಾಲ್, ರಫೀಕ್ ಕಣ್ಣೂರು ಮತ್ತಿತರರು ಹಾಜರಿದ್ದರು.
Next Story





