Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನನ್ನ ವಿರುದ್ಧ ಬಿಜೆಪಿ ಪ್ರೇರಿತ ಪಿತೂರಿ...

ನನ್ನ ವಿರುದ್ಧ ಬಿಜೆಪಿ ಪ್ರೇರಿತ ಪಿತೂರಿ ಹಾಗೂ ಗೊಂದಲ ಸೃಷ್ಟಿ : ಯು ಟಿ ಖಾದರ್

ಫಾಝಿಲ್ ಕುಟುಂಬದವರ ಪಾತ್ರವಿಲ್ಲ ಎಂದು ನಾನು ಹೇಳಿಲ್ಲ: ಸ್ಪೀಕರ್ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ3 May 2025 11:28 PM IST
share
ನನ್ನ ವಿರುದ್ಧ ಬಿಜೆಪಿ ಪ್ರೇರಿತ ಪಿತೂರಿ ಹಾಗೂ ಗೊಂದಲ ಸೃಷ್ಟಿ : ಯು ಟಿ ಖಾದರ್

ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವು, ಕೊಲೆಯ ಹಿಂದೆ ಮತೀಯ ಕಾರಣವಿದೆಯೆಂಬ ವದಂತಿಗಳಿಂದ, ಸ್ಥಳೀಯ ಮಟ್ಟದಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನುಂಟು ಮಾಡಿತ್ತು. ಆಗ ನಾನು ಮಾಧ್ಯಮದ ಪ್ರಶ್ನೆಗೆ ಉತ್ತರಿಸುವ ಸಂದರ್ಭದಲ್ಲಿ, ಈ ಘಟನೆ ರೌಡಿಗಳ ನಡುವಿನ ಗ್ಯಾಂಗ್ ವಾರ್ ಆಗಿರಬಹುದೆಂಬ ಶಂಕೆಯನ್ನು ವ್ಯಕ್ತಪಡಿಸಿದ್ದೇನೆ. ಜೊತೆಗೆ, ಆರೋಪಿಗಳ ಬಂಧನದ ನಂತರವೇ ಈ ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ಬೆಳಕಿಗೆ ಬರುತ್ತದೆ ಎಂದು ನಾನು ಸ್ಪಷ್ಟವಾಗಿ ಹೇಳಿದ್ದೆ.

ಘಟನೆ ನಡೆದ ಕೂಡಲೇ, ಅದು ‘ಫಾಝಿಲ್ ಹತ್ಯೆಗೆ ಪ್ರತೀಕಾರ’ ಎಂಬ ಸುದ್ದಿ ಹಬ್ಬುತ್ತಿದ್ದಂತೆ, ಫಾಝಿಲ್ ತಂದೆ ಮತ್ತು ಸಹೋದರರು ನನಗೆ ಕಾಲ್ ಮಾಡಿ ಈ ಘಟನೆಯಲ್ಲಿ ತಮ್ಮ ಯಾವುದೇ ಪಾತ್ರವಿಲ್ಲ ಎಂದು ಹೇಳಿಕೊಂಡಿದ್ದನ್ನು, ನಾನು ಮಾಧ್ಯಮದೊಂದಿಗೆ ಉಲ್ಲೇಖ ಮಾಡಿದ್ದೆನೇ ಹೊರತು, ಈ ಕೃತ್ಯದಲ್ಲಿ ಅವರ ಪಾತ್ರವಿಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಜೊತೆಗೆ, ಅದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಹಂತಕರ ಬಂಧನಕ್ಕೆ ಪ್ರಯತ್ನಿಸುತ್ತಿದ್ದು, ಬಂಧನದ ನಂತರ, ವಿಚಾರಣೆಯ ಮೂಲಕ ಈ ಕೃತ್ಯದಲ್ಲಿ ಯಾರೆಲ್ಲಾ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಶಾಮೀಲಾಗಿದ್ದಾರೆ ಎಂದು ತಿಳಿದು ಬರಲಿದೆ ಹಾಗೂ ಅಪರಾಧಿಗಳಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ನೀಡಲಾಗುವುದು ಎಂಬುದನ್ನೂ ಸ್ಪಷ್ಟಪಡಿಸಿದ್ದೆ.

ಘಟನೆ ನಡೆದ ಬಳಿಕ, ಆರೋಪಿಗಳ ಬಂಧನಕ್ಕೆ ಮುಂಚೆಯೇ ಪ್ರಕರಣವನ್ನು ಕೋಮು ದೃಷ್ಟಿಯಲ್ಲಿ ಚಿತ್ರೀಕರಿಸಿ, ಸಮಾಜದಲ್ಲಿ ಅಶಾಂತಿ ಉಂಟು ಮಾಡಿ ಎರಡು ಧರ್ಮಗಳ ನಡುವೆ ಗಲಭೆ ಎಬ್ಬಿಸಿ, ರಾಜಕೀಯ ಲಾಭ ಪಡೆಯಲು ಸ್ಥಳೀಯ ನಾಯಕರು ಪ್ರಯತ್ನಿಸುತ್ತಿದ್ದರು. ಅಂತಹ ಸಮಯದಲ್ಲಿ, ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡಲು ನಾನು ಪ್ರಯತ್ನಿಸಿದ್ದೇನೆಯೇ ಹೊರತು, ಯಾರ ಪರವಾಗಿಯೂ ಆಗಲಿ, ಯಾರ ವಿರೋಧವಾಗಿಯೂ ಆಗಲಿ ಮಾತನಾಡುವ ಉದ್ದೇಶ ನನ್ನದಾಗಿರಲಿಲ್ಲ.

ಈ ಪ್ರಕರಣದಲ್ಲಿ ರಾಜಕೀಯ ಲಾಭ ಪಡೆಯಲು ವಿಫಲವಾದವರು ನನ್ನ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ವ್ಯಾಖ್ಯಾನಿಸಿ ಅಪಪ್ರಚಾರ ಮಾಡುತ್ತಿರುವುದು ಅವರ ಅಜ್ಞಾನದ ಸಂಕೇತವಷ್ಟೇ ಅಲ್ಲ, ಅದು ಜನಪ್ರತಿನಿಧಿಗಳ ಜವಾಬ್ದಾರಿ ಮತ್ತು ಸಂವಿಧಾನಾತ್ಮಕ ಮೌಲ್ಯಗಳಿಗೆ ವಿರುದ್ಧವಾಗಿದೆ. ಇಂತಹ ವ್ಯಾಖ್ಯಾನಗಳು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಪ್ರಯತ್ನವೇ ಹೊರತು ಇದರಿಂದ ಯಾರಿಗೂ ಪ್ರಯೋಜನವಿಲ್ಲ. ಹಾಗಾಗಿ ಇಂತಹ ಕಠಿಣ ಸನ್ನಿವೇಶದಲ್ಲಿ ಎಲ್ಲರೂ ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟು, ಜವಾಬ್ದಾರಿಯುತವಾಗಿ ನಡೆದುಕೊಂಡು ಸಮಾಜದಲ್ಲಿ ಶಾಂತಿ ಸಾಮರಸ್ಯ ಕಾಪಾಡಲು ಪ್ರಯತ್ನಿಸಬೇಕೆಂದು ನಾನು ವಿನಂತಿಸುತ್ತಿದ್ದೇನೆ. ಜಿಲ್ಲೆಯ ಶಾಂತಿ ಹಾಗೂ ಅಭಿವೃದ್ಧಿ ಬಯಸುವ ಜನರಿಗೆ ಸ್ಪಷ್ಟೀಕರಣ.

-ಯು.ಟಿ.ಖಾದರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X