Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನವೋದಯ ರಜತ ಸಂಭ್ರಮಕ್ಕೆ ರಾಜ್ಯಪಾಲ ಥಾವರ್...

ನವೋದಯ ರಜತ ಸಂಭ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್: ಡಾ.ರಾಜೇಂದ್ರ ಕುಮಾರ್

ಸಮಾವೇಶಕ್ಕೆ ಸಿ.ಎಂ ಸಿದ್ದರಾಮಯ್ಯ, ದೇವೇಂದ್ರ ಫಡ್ನವಿಸ್ ಸಹಿತ ಗಣ್ಯರು ಭಾಗಿ

ವಾರ್ತಾಭಾರತಿವಾರ್ತಾಭಾರತಿ5 May 2025 6:27 PM IST
share
ನವೋದಯ ರಜತ ಸಂಭ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್:  ಡಾ.ರಾಜೇಂದ್ರ ಕುಮಾರ್

ಮಂಗಳೂರು: ಮೇ 10ರಂದು ನಡೆಯಲಿರುವ ನವೋದಯ ಸ್ವಸಹಾಯ ಗುಂಪುಗಳ ಸಮಾವೇಶ "ರಜತ ಸಂಭ್ರಮ” ನೆನಪಿಗಾಗಿ ವಿಶಿಷ್ಟ ರೀತಿಯ ಲಾಂಛನವನ್ನು ಕರ್ನಾಟಕದ ಮಾನ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಿಡುಗಡೆ ಗೊಳಿಸಲಿರುವರು ಎಂದು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಇದರ ಸಂಸ್ಥಾಪಕರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಅವರು ಎಸ್ ಸಿ ಡಿಸಿ ಸಭಾಂಗಣದಲ್ಲಿ ಸೋಮವಾರ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡ ಸುದ್ದಿ ಗೋಷ್ಠಿ ಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಈ ಸಮಾವೇಶ ದೇಶಕ್ಕೆ ಮಾದರಿಯಾಗುವ ಸಮಾವೇಶ ಆಗಲಿದೆ. ಈ ಅರ್ಥಪೂರ್ಣ ರಜತ ಸಂಭ್ರಮವನ್ನು ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿ ದ್ದಾರೆ. ನವೋದಯ ರಜತ ಸಂಭ್ರಮದ ನವೋದಯ ಸ್ವ-ಸಹಾಯ ಗುಂಪುಗಳ ಸದಸ್ಯರುಗಳಿಗೆ ಸವ ಲತ್ತು ವಿತರಣೆಯನ್ನು ಮಹಾರಾಷ್ಟ್ರ ಸರಕಾರದ ಮಾನ್ಯ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇವರು ನೆರವೇರಿಸಲಿದ್ದು, ರಜತ ಸಂಭ್ರಮದ 'ಸಂತೃಪ್ತಿ' ಸ್ಮರಣ ಸಂಚಿಕೆಯ ಬಿಡುಗಡೆಯನ್ನು ಕರ್ನಾಟಕ ಸರಕಾರದ ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇವರು ನೆರವೇರಿಸಲಿರುವರು.

ರಜತ ಸಂಭ್ರಮ ಆಚರಣೆಯ ಸಂದರ್ಭ ಸಹಕಾರಿ ಧ್ವಜಾರೋಹಣವನ್ನು ಕರ್ನಾಟಕ ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರು ಹಾಗೂ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕಯು.ಟಿ. ಖಾದರ್ ಫರೀದ್ ನೆರವೇರಿಸಲಿರುವರು. ಅತ್ಯುತ್ತಮ ನವೋದಯ ಗುಂಪುಗಳಿಗೆ ಪ್ರಶಸ್ತಿ ಪ್ರದಾನವನ್ನು ಕೇಂದ್ರ ಸರಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹು ದಾದ ಇಂಧನ ಖಾತೆಯ ಮಾನ್ಯ ಸಚಿವ ಪ್ರಲ್ಲಾದ್ ವಿ. ಜೋಶಿ ಇವರು ನೆರವೇರಿಸಲಿರುವರು.

ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ 'ನವೋದಯ 'ರಜತ ಸಂಭ್ರಮ' ಸಮಾರಂಭ ವನ್ನು ಆಯೋಜಿ ಸಲಾಗಿದ್ದು ಮೇ ತಿಂಗಳ 10ನೇ ತಾರೀಕು ಪೂರ್ವಾಹ್ನ 10.30ಗಂಟೆಗೆ ಮಂಗಳೂರಿನ ಬಂಗ್ರ ಕೂಳೂರುನಲ್ಲಿರುವ ಗೋಲ್ಡ್ ಫಿಂಚ್ ಸಿಟಿ ಯಲ್ಲಿ ಅದ್ದೂರಿಯಲ್ಲಿ ಹಾಗೂ ಚಾರಿತ್ರಿಕ ರೀತಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.ಈ ಚಾರಿತ್ರಿಕ ಸಮಾವೇಶದಲ್ಲಿ ಸುಮಾರು 1.5 ಲಕ್ಷಕ್ಕೂ ಮಿಕ್ಕಿ ಮಹಿಳೆಯರು ನೀಲಿ ಬಣ್ಣದ ಸಮವಸ್ತ್ರದಲ್ಲಿ ಭಾಗವಹಿಸಲಿದ್ದಾರೆ.

ನವೋದಯ ಸ್ವಸಹಾಯ ಗುಂಪುಗಳು ಗ್ರಾಮೀಣ ಜನರ ಬದುಕಿನಲ್ಲಿ ಆರ್ಥಿಕ ಸ್ವಾವಲಂಬನೆಯನ್ನು ಮೂಡಿಸಿ ಪ್ರಜಾ ಪ್ರಭುತ್ವದ ತಳಹದಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಸಂಘಟನೆ ಹಾಗೂ ಜನಜಾಗೃತಿ ಮೂಲಕ ಜನಸೇವೆಯಲ್ಲಿ ತೊಡಗಿಸಿಕೊಂಡಿದೆ. "ನಮ್ಮಿಂದ ನಮಗಾಗಿ. ನಮಗೋಸ್ಕರ ಸ್ವಸಹಾಯ ಸಂಘಗಳು" ಎಂಬ ಧೋರಣೆ ಹೊಂದಿರುವ ನವೋದಯ ಸ್ವಸಹಾಯ ಗುಂಪುಗಳು ಗ್ರಾಮಾಂತರ ಪ್ರದೇಶಗಳಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಯ ಜೊತೆಗೆ ಸಬಲೀಕರಣದ ಹಾದಿಯಲ್ಲಿ ದಾಪುಗಾಲು ಹಾಕುತ್ತಿದೆ. ಈ ಒಂದು ಉದಾತ್ತವಾದ ಉದ್ದೇಶವನ್ನಿಟ್ಟುಕೊಂಡು ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿದೆ ಎಂದು ಡಾ| ಎಂ. ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

2000ನೇ ಇಸವಿಯ ಜ.29ರಂದು ಕಾರ್ಕಳದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಆಗಿನ ಸಹಕಾರ ಸಚಿವ ಡಿ.ಕೆ.ಶಿವಕುಮಾರ್ ಅವರಿಂದ ಉದ್ಘಾಟಿಸಲ್ಪಟ್ಟ ನವೋದಯ ಸ್ವಸಹಾಯ ಗುಂಪುಗಳ ಕಾರ್ಯ ವಿಸ್ತಾರವು ಇಂದು ರಾಜ್ಯದ 8 ಜಿಲ್ಲೆಗಳಿಗೆ ಪಸರಿಸಿದ್ದು. ಇದರಲ್ಲಿ ಸುಮಾರು 8ರಿಂದ 9ಲಕ್ಷ ಸದಸ್ಯರಿದ್ದು, ಮುಖ್ಯವಾಗಿ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಲ್ಪಿಸಿಕೊ ಟ್ಟಿದೆ. ಮಹಿಳೆಯರು ಪುರುಷರಿಗೆ ಸರಿಸ ಮಾನವಾಗಿ ಬದುಕು ಕಟ್ಟಿಕೊಳ್ಳಲು ಕಾರಣವಾಗಿದೆ. ಆದ ಕಾರಣ ನವೋದಯದ ರಜತ ಸಂಭ್ರಮವನ್ನು ದೇಶಕ್ಕೆ ಮಾದರಿ ಯಾಗಿ ಹಮ್ಮಿಕೊಳ್ಳುವ ಯೋಜನೆ ರೂಪಿಸಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸುಮಾರು 3000ದಷ್ಟು ಬಸ್‌ಗಳಲ್ಲಿ ಜನ ವಿವಿಧ ಕಡೆಗಳಿಂದ ಸಮಾವೇಶದ ಸ್ಥಳಕ್ಕೆ ಆಗಮಿಸಲಿದ್ದಾರೆ.ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ.. ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷರು ಹಾಗೂ ನವೋದಯ ಗ್ರಾಮ ವಿಕಾಸ ಟ್ರಸ್ಟ್(ರಿ.) ಮಂಗಳೂರು ಇದರ ಸಂಸ್ಥಾಪಕರಾದ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಇವರು ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು. ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಲಿರುವರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಚಿವರಾದ ಕೆ. ಎನ್. ರಾಜಣ್ಣ. ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶ ನಾಲಯ, ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹಾಗೂ ಅಬಕಾರಿ ಸಚಿವರಾದ ಆರ್.ಬಿ. ತಿಮ್ಮಾಪುರ ಅವರು ಭಾಗವಹಿಸಲಿದ್ದಾರೆ ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಬ್ಯಾಂಕ್ ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಬ್ಯಾಂಕ್ ನಿರ್ದೇಶಕರಾದ ಭಾಸ್ಕರ್.ಎಸ್. ಕೋಟ್ಯಾನ್, ಶಶಿಕುಮಾರ್ ರೈ ಬಿ.ದೇವಿ ಪ್ರಸಾದ್ ಶೆಟ್ಟಿ ಬೆಳಪು, ಎಂ. ವಾದಿರಾಜ ಶೆಟ್ಟಿ , ಎಸ್. ಬಿ. ಜಯರಾಮ್ ರೈ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಕುಶಾಲಪ್ಪ ಗೌಡ, ಸಹಕಾರ ಸಂಘಗಳ ಉಪನಿಬಂಧಕರಾದ ಎಚ್. ಎನ್. ರಮೇಶ್, ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಾ ಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ..,ನವೋದಯ ಟ್ರಸ್ಟಿಗಳಾದ ಶ್ರೀ ಮೇಘರಾಜ್ ಆರ್. ಜೈನ್, ಸುನಿಲ್ ಕುಮಾರ್ ಬಜಗೋಳಿ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಟ್ರಸ್ಟ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X