ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಪಾರದರ್ಶಕ ತನಿಖೆಗೆ ಸಂಸದ ಬ್ರಿಜೇಶ್ ಚೌಟ ಆಗ್ರಹ

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಪಾರದರ್ಶಕ ತನಿಖೆಯಾಗಬೇಕು, ಕೊಲೆ ಪ್ರಕರಣದ ನೈಜ ಕಾರಣ ಗೊತ್ತಾಗಲು ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ(ಎನ್‌ಐಎ) ರಾಜ್ಯ ಸರಕಾರ ಒಪ್ಪಿಸುವಂತೆ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಆಗ್ರಹಿಸಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದೊಂದು ಕೊಲೆ ಪ್ರಕರಣ ಮಾತ್ರವಲ್ಲ, ಕರ್ನಾಟಕವನ್ನು ವಿಷಪೂರಿತಗೊಳಿಸುವ, ರಕ್ತ ಸಿಕ್ತಗೊಳಿಸುವ ಪ್ರಕರಣವಾಗಿದೆ. ರಾಜ್ಯ ಸರಕಾರ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಮತ್ತು ತನಿಖೆಯ ಬಗ್ಗೆ ಜನರ ವಿಶ್ವಾಸ ಗಳಿಸಲು ಈ ಪ್ರಕರಣವನ್ನು ಎನ್‌ಐಎಗೆ ಒಪ್ಪಿಸುವುದು ಸೂಕ್ತ ಎಂದರು.
ಸುದ್ದಿಗೋಷ್ಠಿಯಲ್ಲಿ ಹರಿಕೃಷ್ಣ ಬಂಟ್ವಾಳ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮಾಧ್ಯಮ ಸಂಚಾಲಕ ವಸಂತ ಜೆ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
Next Story





