ಕೆಎಸ್ಸಾರ್ಟಿಸಿ ತರಬೇತಿಗೆ ಅರ್ಜಿ ಆಹ್ವಾನ

ಮಂಗಳೂರು, ಮೇ 5 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದ ವತಿಯಿಂದ ಶಿಶಿಕ್ಷು ಅಧಿನಿಯಮದ ಅನ್ವಯ ಪೂರ್ಣ ಅವಧಿಯ ತಾಂತ್ರಿಕ/ಪಾಸಾ ವೃತ್ತಿಯಲ್ಲಿ ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ 15ರವರೆಗೆ ಅವಧಿ ವಿಸ್ತರಿಸಲಾಗಿದೆ. ಮೇ 20ರಂದು ಬೆಳಗ್ಗೆ 10ಕ್ಕೆ ಮೂಲ ದಾಖಲಾತಿಯೊಂದಿಗೆ ಶಿಶಿಕ್ಷು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗಲು ಕೆಎಸ್ಸಾರ್ಟಿಸಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





