Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. 'ನವೋದಯ ರಜತ ಸಂಭ್ರಮ' ಐತಿಹಾಸಿಕ...

'ನವೋದಯ ರಜತ ಸಂಭ್ರಮ' ಐತಿಹಾಸಿಕ ಸಮಾವೇಶಕ್ಕೆ ಸಿದ್ಧತೆ ಪೂರ್ಣ: ಡಾ.ಎಂ.ಎನ್.ರಾಜೇಂದ್ರ ಕುಮಾರ್

*ಮೇ 10ರಂದು ಸಮಾರಂಭ *ಒಂದೂವರೆ ಲಕ್ಷ ಪ್ರತಿನಿಧಿಗಳ ನಿರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ8 May 2025 3:56 PM IST
share
ನವೋದಯ ರಜತ ಸಂಭ್ರಮ ಐತಿಹಾಸಿಕ ಸಮಾವೇಶಕ್ಕೆ ಸಿದ್ಧತೆ ಪೂರ್ಣ: ಡಾ.ಎಂ.ಎನ್.ರಾಜೇಂದ್ರ ಕುಮಾರ್

ಮಂಗಳೂರು, ಮೇ.8: ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಮೇ 10ರಂದು ನಡೆಯಲಿರುವ ನವೋದಯ ಸ್ವಸಹಾಯ ಗುಂಪುಗಳ ಸಮಾವೇಶ 'ರಜತ ಸಂಭ್ರಮ' ರಾಜ್ಯದ ಐತಿಹಾಸಿಕ ಸಮಾವೇಶವಾಗಲಿದೆ. ಸಮಾವೇಶದಲ್ಲಿ ಸುಮಾರು 1.5 ಲಕ್ಷಕ್ಕೂ ಮಿಕ್ಕಿ ಮಹಿಳೆಯರು ನೀಲಿಬಣ್ಣದ ಸಮವಸ್ತ್ರದಲ್ಲಿ ಭಾಗವಹಿಸಲಿರುವುದು ರಾಜ್ಯದಲ್ಲೇ ಪ್ರಥಮ. ಈ ಹಿನ್ನೆಲೆಯಲ್ಲಿ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಸಂಸ್ಥಾಪಕರಾದ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಅವರು ಗುರುವಾರ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಈ ಸಮಾವೇಶ ಮಹಿಳಾ ಸಬಲೀಕರಣ, ಸಶಕ್ತತೆಯ ಹಿನ್ನೆಲೆಯಲ್ಲಿ ಇತರರಿಗೂ ಮಾದರಿ ಆಗಬೇಕು ಎನ್ನುವುದು ನಮ್ಮ ಆಶಯ. ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಫರೀದ್, ಕೇಂದ್ರ ಸರಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ಸಚಿವ ಪ್ರಹ್ಲಾದ್ ವಿ. ಜೋಶಿ ಮೊದಲಾದವರು ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದರು.

ನವೋದಯ ಸ್ವಸಹಾಯ ಗುಂಪುಗಳು ಗ್ರಾಮೀಣ ಜನರ ಬದುಕಿನಲ್ಲಿ ಆರ್ಥಿಕ ಸ್ವಾವಲಂಬನೆಯನ್ನು ಮೂಡಿಸಿ ಪ್ರಜಾಪ್ರಭುತ್ವದ ತಳಹದಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಮಾಂತರ ಪ್ರದೇಶಗಳಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಯ ಜೊತೆಗೆ ಸಬಲೀಕರಣದ ಹಾದಿಯಲ್ಲಿ ಸಾಗುತ್ತಿದೆ. ಈ ಒಂದು ಉದಾತ್ತವಾದ ಉದ್ದೇಶವ ನ್ನಿಟ್ಟುಕೊಂಡು ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ ಕಾರ್ಯಕ್ರ ಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.

*ಎಲ್ಲರನ್ನೂ ಒಳಗೊಳ್ಳುವ ಸಮಾವೇಶ

ನವೋದಯ ಸ್ವ ಸಹಾಯ ಸಂಘದಲ್ಲಿ ಜಾತಿ, ಮತ ಭೇದವಿಲ್ಲದೆ ಎಲ್ಲಾ ಜನರನ್ನು ಒಳಗೊಂಡ ಸಮಾವೇಶ ಎಂದು ಸಮಾವೇಶದ ಸಂಘಟಕ ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದರು.

2000ನೇ ಇಸವಿಯ ಜನವರಿ 29ರಂದು ಕಾರ್ಕಳದಲ್ಲಿ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಆಗಿನ ಸಹಕಾರ ಸಚಿವ ಡಿ.ಕೆ.ಶಿವಕುಮಾರ್ ಅವರಿಂದ ಉದ್ಘಾಟಿಸಲ್ಪಟ್ಟ ನವೋದಯ ಸ್ವಸಹಾಯ ಗುಂಪುಗಳ ಕಾರ್ಯವ್ಯಾಪ್ತಿ ಇಂದು ರಾಜ್ಯದ ಎಂಟು ಜಿಲ್ಲೆಗಳಿಗೆ ಪಸರಿಸಿದ್ದು. ಇದರಲ್ಲಿ ಸುಮಾರು ಐದು ಲಕ್ಷಕ್ಕೂ ಹೆಚ್ಚು ಸದಸ್ಯರಿದ್ದಾರೆ. ಮುಖ್ಯವಾಗಿ ಇದು ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಲ್ಪಿಸಿಕೊಟ್ಟಿದೆ. ನವೋದಯದ ರಜತ ಸಂಭ್ರಮವನ್ನು ದೇಶಕ್ಕೆ ಮಾದರಿಯಾಗಿ ಹಮ್ಮಿಕೊಳ್ಳುವ ಯೋಜನೆ ರೂಪಿಸಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷರು ಹಾಗೂ ನವೋದಯ ಗ್ರಾಮ ವಿಕಾಸ ಟ್ರಸ್ಟ್ ಸಂಸ್ಥಾಪಕರೂ ಆಗಿರುವ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಿ.ವೀರೇಂದ್ರ ಹೆಗ್ಗಡೆ ಹಾಗೂ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿರುವರು.

ಮುಖ್ಯ ಅತಿಥಿಗಳಾಗಿ ಸಹಕಾರ ಸಚಿವ ಕೆ.ಎನ್.ರಾಜಣ್ಣ. ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಭಾಗವಹಿಸಲಿದ್ದಾರೆ ಎಂದು ದೇವಿಪ್ರಸಾದ್ ತಿಳಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಬ್ಯಾಂಕ್ ನಿರ್ದೇಶಕರಾದ ಭಾಸ್ಕರ್.ಎಸ್. ಕೋಟ್ಯಾನ್, ಶಶಿಕುಮಾರ್ ರೈ, ಎಂ.ವಾದಿರಾಜ ಶೆಟ್ಟಿ, ಎಸ್.ಬಿ.ರಾಜೇಶ್ ರಾವ್, ಕುಶಾಲಪ್ಪ ಗೌಡ, ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ., ನವೋದಯದ ಟ್ರಸ್ಟಿಗಳಾದ ಮೇಘರಾಜ್ ಆರ್. ಜೈನ್, ಸುನೀಲ್ ಕುಮಾರ್ ಬಜಗೋಳಿ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಉದ್ಯಮಿ ಪುಷ್ಪರಾಜ್ ಜೈನ್, ನವೋದಯ ಚಾರಿಟೇಬಲ್ ಟ್ರಸ್ಟ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಬೃಹತ್ ಸಭಾಂಗಣ

ರಜತ ಸಂಭ್ರಮ ಸಮಾರಂಭಕ್ಕಾಗಿ ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಒಂದೂವರೆ ಲಕ್ಷ ಜನರು ಪಾಲ್ಗೊಳ್ಳಬಹುದಾದ ಬೃಹತ್ ಸಭಾಂಗಣ ನಿರ್ಮಿಸಲಾಗಿದೆ. ಮೂರು ಸಾವಿರ ಬಸ್ ಹಾಗೂ 750 ಕಾರುಗಳ ವ್ಯವಸ್ಥೆ ಮಾಡಲಾಗಿದೆ. ಊಟದ ವ್ಯವಸ್ಥೆಗಾಗಿ ಸ್ಥಳದಲ್ಲಿ 160 ಕೌಂಟರ್ ಗಳನ್ನು ಸಿದ್ಧಪಡಿಸಲಾಗಿದೆ. ನವೋದಯ ಸ್ವ ಸಹಾಯ ಗುಂಪುಗಳ ವಸ್ತು ಪ್ರದರ್ಶನದ ವ್ಯವಸ್ಥೆಯೂ ಇರಲಿದೆ ಎಂದು ದೇವಿಪ್ರಸಾದ್ ಶೆಟ್ಟಿ ಸಮಾವೇಶದ ಸಿದ್ಧತೆಯ ಬಗ್ಗೆ ವಿವರಿಸಿದರು.

ಪಡುಬಿದ್ರೆ ಬಂಟರ ಸಭಾಂಗಣ, ವಾಮಂಜೂರು, ಬಂಟ್ವಾಳ ಬಂಟರ ಭವನ, ಫರಂಗಿಪೇಟೆಯ ಯಶಸ್ವಿ ಹಾಲ್ ನಲ್ಲಿ ಸಮಾವೇಶಕ್ಕೆ ಆಗಮಿಸುವವರಿಗೆ ಆಹಾರದ ಪೊಟ್ಟಣ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X