ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಪಿಎಸ್ಐ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಮಂಗಳೂರು: ಕರ್ನಾಟಕದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳ ಮಹಿಳಾ ಮತ್ತು ಪುರುಷ ಯುವ ಅಭ್ಯರ್ಥಿಗಳಿಗೆ 90 ದಿನಗಳ ವಸತಿಯುತ ಸೌಲಭ್ಯದೊಂದಿಗೆ Police Sub Inspector (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
https://sevasindhuservices.karnataka.gov.in
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2025ನೇ ಮೇ 23 ಆಗಿರುತ್ತದೆ. ಅಭ್ಯರ್ಥಿಗಳು ಪದವಿಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳ ಸಾಮಾನ್ಯ ಅರ್ಹತೆ ಮತ್ತು ಇತರ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ ಅಥವಾ ಸಹಾಯವಾಣಿ: 8277799990 ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ದ.ಕ. ಜಿಲ್ಲಾ ಅಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ.