Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹೆದ್ದಾರಿ ಬದಿ ಕಸ ಎಸೆಯುವವರ ಮೇಲೆ ನಿಗಾ...

ಹೆದ್ದಾರಿ ಬದಿ ಕಸ ಎಸೆಯುವವರ ಮೇಲೆ ನಿಗಾ ವಹಿಸಲು ತಂಡಗಳ ರಚನೆ

ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು; ನಮ್ಮೊಂದಿಗೆ ನೀವು ಅಭಿಯಾನ ಯಶಸ್ವಿಗೆ ಕರೆ

ವಾರ್ತಾಭಾರತಿವಾರ್ತಾಭಾರತಿ13 May 2025 7:34 PM IST
share
ಹೆದ್ದಾರಿ ಬದಿ ಕಸ ಎಸೆಯುವವರ ಮೇಲೆ ನಿಗಾ ವಹಿಸಲು ತಂಡಗಳ ರಚನೆ

ಮಂಗಳೂರು: ರಾ.ಹೆ. 73ರ ಇಕ್ಕೆಲಗಳಲ್ಲಿ ತ್ಯಾಜ್ಯ ಬೀಳುವುದನ್ನು ತಡೆಗಟ್ಟಲು ಮಂಗಳೂರು ತಾಲೂಕಿನ ಅಡ್ಯಾರ್, ಬಂಟ್ವಾಳ ತಾಲೂಕಿನ ತುಂಬೆ, ಪುದು ಹಾಗೂ ಕಳ್ಳಿಗೆ ಗ್ರಾಪಂಗಳನ್ನು ಆಯ್ಕೆ ಮಾಡಲಾಗಿದೆ. ಈ ವ್ಯಾಪ್ತಿಯ ರಸ್ತೆ ಬದಿಗಳಲ್ಲಿ ಬೀಳುವ ತ್ಯಾಜ್ಯಗಳನ್ನು ತಡೆಗಟ್ಟಲು ಗಸ್ತು ಪಡೆ ಹಾಗೂ ಬ್ಲಾಕ್ ಸ್ಪಾಟ್‌ಗಳಲ್ಲಿ ನಿಲ್ಲಲು 5 ಜನರ ತಂಡವನ್ನು ರಚಿಸಲಾಗುವುದು ಎಂದು ದ.ಕ.ಜಿಪಂ ಉಪ ಕಾರ್ಯದರ್ಶಿ ಜಯಲಕ್ಷ್ಮಿ ರಾಯಕೊಡ ಸೂಚಿಸಿದರು.

ದ.ಕ.ಜಿಪಂ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 73ರ ಇಕ್ಕೆಲಗಳಲ್ಲಿ ತ್ಯಾಜ್ಯ ಬೀಳುವುದನ್ನು ನಿಯಂತ್ರಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದ.ಕ. ಜಿಲ್ಲೆಯ ರಾಜ್ಯ ಮತ್ತು ಗ್ರಾಮೀಣ ಭಾಗದ ರಸ್ತೆ ಬದಿಯ ತ್ಯಾಜ್ಯ ಬೀಳುವುದನ್ನು ತಡೆಯುವ ಸಲು ವಾಗಿ ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು; ನಮ್ಮೊಂದಿಗೆ ನೀವು ಅಭಿಯಾನ ಯಶಸ್ವಿಯಾಗಿ ಕೈಗೊಳ್ಳು ವಂತೆ ಸೂಚನೆ ನೀಡಿದ ಜಯಲಕ್ಷ್ಮಿ ರಾಯಕೊಡ ಬ್ಲಾಕ್ ಸ್ಪಾಟ್‌ನಲ್ಲಿ ನಿಲ್ಲಲು ಪರಿಸರ ಮತ್ತು ಸ್ವಚ್ಛತೆ ವಿಷಯದಲ್ಲಿ ಕಾಳಜಿ ಇರುವವರು ಭಾಗವಹಿಸಬಹುದು. ಈ ಅಭಿಯಾನವು 3 ತಿಂಗಳಿನವರೆಗೆ ನಡೆಯ ಲಿದೆ. ಈ ವೇಳೆ ಜನರನ್ನು ಮಾಹಿತಿ, ಶಿಕ್ಷಣ ಹಾಗೂ ಸಂವಹನ ನೀಡಿ ತ್ಯಾಜ್ಯ ಬಿಸಾಡುವವರ ಮೇಲೆ ನಿಗಾ ವಹಿಸಿ ಕ್ರಮ ಕೈಗೊಳ್ಳಬೇಕು ಎಂದರು.

ಬಂಟ್ವಾಳ ತಾಪಂ ಇಒ ಮಾತನಾಡಿ ರಾ.ಹೆ.ಗಳ ಕಸ ನಿರ್ವಹಣೆಗೆ ತೊಡಗುವ ಮೊದಲು ವಾಣಿಜ್ಯ ಮಳಿಗೆಗಳಲ್ಲಿ ಹಾಗೂ ಪ್ರತೀ ಮನೆಗಳಲ್ಲಿ ಕಸ ವಿಂಗಡಿಸಿ ಕೊಡುವಂತೆ ಕ್ರಮವಹಿಸಬೇಕಿದೆ. ಶೇ.100 ಮನೆಗಳಿಂದ ಸರಿಯಾದ ಕ್ರಮದಲ್ಲಿ ತ್ಯಾಜ್ಯ ಸಂಗ್ರಹವಾದರೆ ಮಾತ್ರ ರಸ್ತೆ ಬದಿಗಳಲ್ಲಿ ಕಸ ಬೀಳುವು ದನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದಾಗಿದೆ ಎಂದರು.

ಮಂಗಳೂರು ತಾಪಂ ಇಒ ಮಾತನಾಡಿ ರಸ್ತೆ ಬದಿಯಲ್ಲಿ ಕಸ ಬೀಳುವ ಪ್ರದೇಶವನ್ನು ಗುರುತಿಸಿ ಅದರ ಮೇಲೆ ನಿಗಾವಹಿಸಬೇಕಿದೆ. ಅವರ ಮೇಲೆ ಕ್ರಮ ಜರುಗಿಸಬೇಕು ಎಂದರು.

ಸಭೆಯಲ್ಲಿ ಕಳ್ಳಿಗೆ ಗ್ರಾಪಂ ಅಧ್ಯಕ್ಷ ಪುರುಷೋತ್ತಮ, ಅಡ್ಯಾರ್ ಗ್ರಾಪಂ ಅಧ್ಯಕ್ಷ ಅಬ್ದುಲ್ ಜಲೀಲ್, ತುಂಬೆ ಗ್ರಾಪಂ ಉಪಾಧ್ಯಕ್ಷ ಗಣೇಶ್, ಹಸಿರು ದಳದ ನಾಗರಾಜ್ ಆರ್. ಅಂಚನ್, ಜಿಲ್ಲಾ ಸ್ವಚ್ಛ ಭಾರತ್ ಮಿಷನ್ (ಗ್ರಾ) ಸಮಾಲೋಚಕರು ಉಪಸ್ಥಿತರಿದ್ದರು.

ಕಸ ಬೀಳುವ ಪ್ರದೇಶ ಗುರುತಿಸಿ ಆ ಪ್ರದೇಶದಲ್ಲಿ ಬೆಳಗ್ಗೆ 5ರಿಂದ 8ಗಂಟೆಯವರಗೆ ಹಾಗೂ ಸಂಜೆ 6ರಿಂದ 9ಗಂಟೆಯವರೆಗೆ ಪರಿಸರ ಮತ್ತು ಸ್ವಚ್ಛತೆಯಲ್ಲಿ ಆಸಕ್ತಿ ಇರುವ 5 ಜನ ಸ್ವಯಂ ಸೇವಕರನ್ನು ನಿಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ. ಈ ವೇಳೆ ತ್ಯಾಜ್ಯ ಬಿಸಾಡುವವರನ್ನು ಗುರುತಿಸಿ ಅವರಿಗೆ ಮನವರಿಕೆ ಮಾಡಲು ಉದ್ದೇಶಿಸಿದೆ. ಅಲ್ಲದೆ ಸ್ವಚ್ಛತೆ ಜಾಗೃತಿ ಮೂಡಿಸುವ ಸಲುವಾಗಿ ವಾಹನದಲ್ಲಿ ಮೈಕ್ ಮೂಲಕ ವ್ಯಾಪಕ ಪ್ರಚಾರ, ತ್ಯಾಜ್ಯ ಬೀಳುವುದನ್ನು ತಡೆಹಿಡಿಯಲು ಗಸ್ತು ಪಡೆ ರಚಿಸಲು ದ.ಕ. ಜಿಲ್ಲಾ ಸ್ವಚ್ಛ ಭಾರತ್ ಮಿಷನ್ (ಗ್ರಾ) ಸಿದ್ಧತೆ ನಡೆಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X