Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೇಶದ ಸೈನಿಕರ ಆತ್ಮಸ್ಥೈರ್ಯವನ್ನೇ...

ದೇಶದ ಸೈನಿಕರ ಆತ್ಮಸ್ಥೈರ್ಯವನ್ನೇ ಇಮ್ಮಡಿಗೊಳಿಸಿದೆ: ಸಂಸದ ಬ್ರಿಜೇಶ್ ಚೌಟ

ವಾರ್ತಾಭಾರತಿವಾರ್ತಾಭಾರತಿ13 May 2025 10:11 PM IST
share
ದೇಶದ ಸೈನಿಕರ ಆತ್ಮಸ್ಥೈರ್ಯವನ್ನೇ ಇಮ್ಮಡಿಗೊಳಿಸಿದೆ: ಸಂಸದ ಬ್ರಿಜೇಶ್ ಚೌಟ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಪಂಜಾಬ್‌ನ ಆದಂಪುರ ವಾಯುನೆಲೆಗೆ ಭೇಟಿ ನೀಡಿ ವಾಯುಸೇನೆಯ ಯೋಧರು, ಸೇನಾಧಿಕಾರಿಗಳನ್ನು ಅಭಿನಂದಿಸಿ ಬೆನ್ನು ತಟ್ಟಿರುವುದು ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯಲ್ಲಿ ದೇಶದ ಸೈನಿಕರ ಆತ್ಮಸ್ಥೈರ್ಯವನ್ನೇ ಇಮ್ಮಡಿಗೊಳಿಸುವ ಜತೆಗೆ ಪಾಕಿಸ್ತಾನಕ್ಕೂ ದೊಡ್ಡ ಎಚ್ಚರಿಕೆ ಸಂದೇಶ ರವಾನಿಸಿದಂತಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹೇಳಿದ್ದಾರೆ.

ಪ್ರಧಾನಮಂತ್ರಿ ಮೋದಿ ಅವರು ದೇಶದ ಪ್ರಮುಖ ವಾಯುನೆಲೆಗೆ ಪಾಕಿಸ್ತಾನದ ವಿರುದ್ಧದ ಸಂಘರ್ಷ ನಡೆಯುತ್ತಿರುವಾಗಲೇ ಭೇಟಿ ನೀಡಿರುವುದು ಗಮನಾರ್ಹ ಬೆಳವಣಿಗೆ. ಇದರೊಂದಿಗೆ ಅವರು ಕಾರ್ಯಾ ಚರಣೆ ಮುಂಚೂಣಿಯಲ್ಲಿರುವ ನಮ್ಮ ಸೈನಿಕರು, ಸೇನಾಧಿಕಾರಿಗಳಿಗೆ ಮತ್ತಷ್ಟು ಧೈರ್ಯ, ಆತ್ಮಬಲವನ್ನು ತುಂಬಿದ್ದಾರೆ. ಎಂದು ಬ್ರಿಜೇಶ್ ಅಭಿಪ್ರಾಯಪಟ್ಟಿದ್ದಾರೆ.

ಯುದ್ಧಭೂಮಿಯಲ್ಲಿ ತಮ್ಮ ಜೀವವನ್ನೇ ಮುಡುಪಾಗಿಟ್ಟು ಹೋರಾಡುವ ಯೋಧರ ಶೌರ್ಯ, ತ್ಯಾಗ ಮತ್ತು ಪರಿಶ್ರಮವನ್ನು ಗುರುತಿಸಿ ಗೌರವಿಸಿದಾಗ ಸೈನಿಕರ ಮತ್ತು ಸೇನೆಯ ಆತ್ಮವಿಶ್ವಾಸ ಮತ್ತಷ್ಟು ವೃದ್ದಿಸು ತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಮ್ಮ ಸಶಸ್ತ್ರ ಪಡೆಗಳು ಮತ್ತಷ್ಟು ಬಲಶಾಲಿ ಮತ್ತು ಸನ್ನದ್ಧವಾಗಿದ್ದು, ವಿಶ್ವದಲ್ಲಿ ಶ್ರೇಷ್ಠ ಮಟ್ಟದಲ್ಲಿವೆ. ಆದಂಪುರ ವಾಯುನೆಲೆಗೆ ಭೇಟಿ ನೀಡುವ ಮೂಲಕ ಪ್ರಧಾನಮಂತ್ರಿಗಳು ವಾಯು ಯೋಧರಿಗೆ ಆತ್ಮಸ್ಥೈರ್ಯ ಹೆಚ್ಚಿಸಿದ್ದರೆ ಅತ್ತ, ಪಾಕಿಸ್ತಾನದಂತಹ ಶತ್ರುಗಳಲ್ಲಿ ನಡುಕ ಹುಟ್ಟಿಸಿದ್ದಾರೆ ಎಂದಿದ್ದಾರೆ.

ನಮ್ಮ ಸೇನಾ ಪಡೆಗಳು ವಿಶ್ವದ ಅತ್ಯುತ್ತಮ ಮಿಲಿಟರಿ ಸಾಧನಗಳನ್ನು ಹೊಂದಿದ್ದು, ಇದೀಗ ನಾವು ‘ಆಪರೇಷನ್ ಸಿಂಧೂರ್’ ಮೂಲಕ ನಮ್ಮ ಮಿಲಿಟರಿ ಸಾಮರ್ಥ್ಯ, ಶಕ್ತಿ ಹಾಗೂ ತಂತ್ರಜ್ಞಾನವನ್ನು ಇಡೀ ಜಗತ್ತಿಗೆ ಸಾಬೀತುಪಡಿಸಿದ್ದೇವೆ. ಆತ್ಮನಿರ್ಭರ್ ಭಾರತ್ ಮತ್ತು ಮೇಕ್ ಇನ್ ಇಂಡಿಯಾ ಉಪಕ್ರಮಗಳ ಮೂಲಕ ರಕ್ಷಣಾ ವಲಯದಲ್ಲಿ ಸಾಧಿಸಲಾದ ಸ್ವದೇಶೀಕರಣ ಮತ್ತು ಆಧುನೀಕರಣದ ಒಂದು ಸ್ಪಷ್ಟ ಚಿತ್ರಣವನ್ನು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಸಂದರ್ಭದಲ್ಲಿ ವಿಶ್ವವು ಕಂಡಿದೆ ಎಂದು ಚೌಟ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X