Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಧ್ಯಪ್ರದೇಶ ಬಿಜೆಪಿ ಸಚಿವನ ವಿರುದ್ಧ...

ಮಧ್ಯಪ್ರದೇಶ ಬಿಜೆಪಿ ಸಚಿವನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಬಂಧಿಸಲು ಆಗ್ರಹ

ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ವಿವಾದಾತ್ಮಕ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ14 May 2025 6:34 PM IST
share
ಮಧ್ಯಪ್ರದೇಶ ಬಿಜೆಪಿ ಸಚಿವನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಬಂಧಿಸಲು ಆಗ್ರಹ

ಮಂಗಳೂರು: ಆಪರೇಶನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಧ್ಯಪ್ರದೇಶ ಬಿಜೆಪಿ ಸಚಿವನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಎಂಎಲ್ಸಿ ಮಂಜುನಾಥ ಭಂಡಾರಿ ಒತ್ತಾಯಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೇಶಕ್ಕಾಗಿ ಪ್ರಾಣ ತ್ಯಾಗಕ್ಕೆ ತಯಾರಾಗಿದ್ದ ಆಕೆ ಕರ್ನಾಟಕದ ವೀರ ಸೊಸೆ. ಆಕೆಯ ವಿರುದ್ಧ ಈ ರೀತಿಯ ಅವಹೇಳನಕಾರಿ ಮಾತುಗಳನ್ನಾಡುವ ಬಿಜೆಪಿ ನಾಯಕರ ಮನಸ್ಥಿತಿಯನ್ನು ಇದು ತೋರಿಸುತ್ತದೆ ಎಂದರು.

ಭಾರತ- ಪಾಕಿಸ್ತಾನ ಯುದ್ಧದ ಕುರಿತು ಚಕ್ರವರ್ತಿ ಸೂಲಿಬೆಲೆ ಸುಳ್ಳು ಹಾಗೂ ಪ್ರಚೋದನಾತ್ಮಕ ಭಾಷಣ ಮಾಡಿದ್ದು, ಅವರ ಮೇಲೂ ದೇಶದ್ರೋಹದ ಕೇಸು ದಾಖಲಿಸಬೇಕು. ಯುದ್ಧದ ಬಗ್ಗೆ ಈ ಈತಿಯ ಹೇಳಿಕೆ ನೀಡಲು ಇವರೇನು ವಕ್ತಾಕರರೇ, ಈ ರೀತಿ ಪ್ರಚೋದನಕಾರಿಯಾಗಿ ಮಾತನಾಡುವವರ ಮೇಲೆ ದೇಶ ದ್ರೋಹದ ಪ್ರಕರಣ ದಾಖಲಿಸಬೇಕಲ್ಲವೇ ಮಂಜುನಾಥ ಭಂಡಾರಿ ಪ್ರಶ್ನಿಸಿದರು.

ಭಾರತ ಮತ್ತು ಪಾಕ್ ನಡುವಿನ ಕದನ ವಿರಾಮದ ಬಗ್ಗೆ ಜನತೆಗೆ ಸ್ಪಷ್ಟ ಮಾಹಿತಿ ನೀಡಲು ಸಂಸತ್ತು ಸಭೆ ಕರೆಯಬೇಕು. ಪಾಕಿಸ್ತನ ನಾವು ವಿಜಯ ಸಾಧಿಸಿದ್ದೇವೆ ಎನ್ನುತ್ತಿದೆ. ಅಮೆರಿಕ ಅಧ್ಯಕ್ಷ ತಾವು ಯುದ್ಧ ನಿಲ್ಲಿಸಿದ್ದಾಗಿ ಹೇಳುತ್ತಿದ್ದಾರೆ. ಸಿಮ್ಲಾ ಒಪ್ಪಂದದ ಪ್ರಕಾರ ಯಾವುದೇ ತೃತೀಯ ರಾಷ್ಟ್ರ ಮಧ್ಯಸ್ಥಿಕೆ ವಹಿಸು ವಂತಿಲ್ಲ. ಹಾಗಿದ್ದರೆ ಅಮೆರಿಕಕ್ಕೆ ನಮ್ಮನ್ನು ಮಾರಿಕೊಳ್ಳಲಾಗಿದೆಯೇ ಎಂಬ ಬಗ್ಗೆ ಸ್ಪಷ್ಟನೆ ದೊರೆಯ ಬೇಕಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಯುದ್ಧದ ವಿರುದ್ಧ ಮಾತನಾಡಿದಾಗ ಅವರ ಮೇಲೆ ಎಲ್ಲರೂ ಮುಗಿಬಿದ್ದರು. ಈಗ ಟ್ರಂಪ್ ಯುದ್ಧ ನಿಲ್ಲಿಸಿದಾಗ ಅವರೆಲ್ಲಾ ಏನು ಹೇಳುತ್ತಾರೆ ಎಂದು ಮಂಜುನಾಥ ಭಂಡಾರಿ ಪ್ರಶ್ನಿಸಿದರು.

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಮಾಜಿ ರೌಡಿ ಶೀಟರ್ ಆಯ್ಕೆ ಮಾಡಿ ರುವ ಕುರಿತು ಬಿಜೆಪಿ ಆರೋಪಗಳಿಗೆ ಪ್ರತಿಕ್ರಿಯಿಸಿದ ಮಂಜುನಾಥ ಭಂಡಾರಿ, ಪೊಲೀಸ್ ವೆರಿಫಿಕೇಶನ್ ನಡೆದ ಬಳಿಕವೇ ಈ ಆಯ್ಕೆ ಕಾನೂನು ಪ್ರಕಾರವಾಗಿ ನಡೆದಿದೆ. 2008ರ ಬಳಿಕ ಅವರ ಮೇಲೆ ಯಾವುದೇ ರೀತಿಯ ಪ್ರಕರಣ ದಾಖಲಾಗಿಲ್ಲ. ಅಲ್ಲದೆ ರೌಡಿ ಶೀಟ್‌ನಿಂದ ಅವರ ಹೆಸರು ತೆಗೆಯಲಾಗಿದೆ ಎಂದರು.

ದೇಶದ ಅತೀ ದೊಡ್ಡ ಜಿಲ್ಲಾಧಿಕಾರಿ ಕಚೇರಿ ಸಿಎಂ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲೆಯ ಬಹು ವರ್ಷಗಳ ಕನಸಾಗಿರುವ ಎರಡು ಪ್ರಮುಖ ಯೋಜನೆಗಳಾದ ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಮತ್ತು ಅಂತಾರಾಷ್ಟ್ರೀಯ ದರ್ಜೆಯ ಒಳಾಂಗಣ ಕ್ರೀಡಾಂಗಣವನ್ನು ಮೇ 16ರಂದು ಸ್ವತಃ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ದೇಶದಲ್ಲೇ ಅತಿ ದೊಡ್ಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎಂದು ಮಂಜುನಾಥ ಭಂಡಾರಿ ಹೇಳಿದರು.

2016ರಲ್ಲಿ ಆಗಿನ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣಕ್ಕೆ ಶಿಲಾನ್ಯಾಸ ನೆರವೇರಿಸಿದ್ದರು. ನಂತರದ 2 ವರ್ಷಗಳ ಕಾಲ ಕಾಮಗಾರಿ ಭರದಿಂದ ನಡೆದರೂ ಬಳಿಕ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುದಾನವನ್ನೇ ನೀಡದೆ ಕಾಮಗಾರಿ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸ್ಪೀಕರ್ ಯು.ಟಿ. ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮುತುವರ್ಜಿಯಿಂದ ಹೆಚ್ಚುವರಿ 20 ಕೋಟಿ ಅನುದಾನ ನೀಡಿ ಒಟ್ಟು ಸುಮಾರು 75 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯನ್ನು ಸಂಪೂರ್ಣಗೊಳಿಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಮಾಜಿ ಸಚಿವ ರಮಾನಾಥ ರೈ ಅವರ ಕೊಡುಗೆ. ಅವರು ಅರಣ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅವಧಿಯಲ್ಲಿ ಅರಣ್ಯ ಜಮೀನನ್ನು ಇತರ ಉದ್ದೇಶಗಳಿಗೆ ನೀಡಲು ಕಾನೂನು ತೊಡಕಿದ್ದರೂ ೬ ಎಕರೆ ಜಮೀನು ಮಂಜೂರಾತಿ ಮಾಡಿ ಸರ್ಕಾರದಿಂದ ಒಪ್ಪಿಗೆ ಪಡೆದು ಇದೀಗ ಅತ್ಯುತ್ತಮ ರೀತಿಯಲ್ಲಿ ಕಾಮಗಾರಿ ನಡೆದಿದೆ. ಬಹುತೇಕ ಕಚೇರಿಗಳು ಒಂದೇ ಕಡೆ ಕಾರ್ಯ ನಿರ್ವಹಿಸುವುದರಿಂದ ಜನರಿಗೆ ಅನುಕೂಲವಾಗಲಿದೆ ಎಂದು ಭಂಡಾರಿ ತಿಳಿಸಿದರು.

8 ಸಾವಿರ ಆರ್‌ಟಿಸಿ ವಿತರಣೆ

ದ.ಕ. ಜಿಲ್ಲೆಯ ಸುಮಾರು 30 ಸಾವಿರ ಜನರಿಗೆ ತಮ್ಮ ಭೂಮಿಯ ಆರ್‌ಟಿಸಿ ಇರಲಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಪೋಡಿ ಅಭಿಯಾನ ನಡೆಸಿ ಇದುವರೆಗೆ 8 ಸಾವಿರ ಆರ್‌ಟಿಸಿಗಳನ್ನು ಸಿದ್ಧಪಡಿಸ ಲಾಗಿದೆ. ಈ ಫಲಾನುಭವಿಗಳೆಲ್ಲರಿಗೂ ಡಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲೇ ಆರ್‌ಟಿಸಿಗಳನ್ನು ವಿತರಿಸುವ ಕಾರ್ಯ ನಡೆಯಲಿದೆ. ಬೆಳ್ತಂಗಡಿ, ಬಂಟ್ವಾಳದಲ್ಲಿ ತಲಾ 2 ಸಾವಿರ ಮಂದಿ, ಮೂಡುಬಿದಿರೆ ಯಲ್ಲಿ 1.5 ಸಾವಿರ, ಮಂಗಳೂರಲ್ಲಿ 1 ಸಾವಿರ ಸೇರಿದಂತೆ ಜಿಲ್ಲಾದ್ಯಂತ ಫಲಾನುಭವಿಗಳನ್ನು ಗುರುತಿಸಿ ಕರೆತರಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ಜಿ.ಎ. ಬಾವ, ರಕ್ಷಿತ್ ಶಿವರಾಂ, ಎಂ.ಎಸ್. ಮುಹಮ್ಮದ್, ಶಾಹುಲ್ ಹಮೀದ್, ಇಬ್ರಾಹಿಂ ನವಾಝ್, ಬಶೀರ್ ಕಣ್ಣೂರು, ಸುಹಾನ್ ಆಳ್ವ, ಶುಭೋದಯ ಆಳ್ವ, ನಝೀರ್ ಬಜಾಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X