Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಿಯಮಗಳನ್ನು ಗಾಳಿಗೆ ತೂರಿದ ಆಡಳಿತ...

ನಿಯಮಗಳನ್ನು ಗಾಳಿಗೆ ತೂರಿದ ಆಡಳಿತ ವ್ಯವಸ್ಥೆ: ಶಾಸಕ ವೇದವ್ಯಾಸ ಕಾಮತ್‌ ಆರೋಪ

ವಾರ್ತಾಭಾರತಿವಾರ್ತಾಭಾರತಿ16 May 2025 7:08 PM IST
share
ನಿಯಮಗಳನ್ನು ಗಾಳಿಗೆ ತೂರಿದ ಆಡಳಿತ ವ್ಯವಸ್ಥೆ: ಶಾಸಕ ವೇದವ್ಯಾಸ ಕಾಮತ್‌ ಆರೋಪ

ಮಂಗಳೂರು : ದ.ಕ.‌ ಜಿಲ್ಲೆಯ ಹಲವಾರು ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿರುವ ಈ ಸಂದರ್ಭದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಎಲ್ಲಾ ನೀತಿ ನಿಯಮಗಳನ್ನು ಗಾಳಿಗೆ ತೂರುವ ಮೂಲಕ ಶಿಷ್ಟಾಚಾರ ಉಲ್ಲಂಘನೆ ಸಹಿತ ಹಲವು ಲೋಪಗಳನ್ನು ಎಸಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದರು.

ಮುಖ್ಯಮಂತ್ರಿಗಳು ಉದ್ಘಾಟನೆಗೊಳಿಸುತ್ತಿರುವ ಎಲ್ಲಾ ಕಾಮಗಾರಿಗಳು ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳಾಗಿದೆ. ಅಂದಿನ ಸಂಸದ ನಳಿನ್ ಕುಮಾರ್ ಕಟೀಲ್ ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದರು. ಪ್ರಸ್ತುತ ಸಂಸದ ಬ್ರಿಜೇಶ್ ಚೌಟ ಆ ಜವಾಬ್ದಾರಿಯನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಪ್ರಧಾನಿಗಳ ಕನಸಿನ ಕೂಸಾದ ಸ್ಮಾರ್ಟ್ ಸಿಟಿಯಿಂದ ಎಲ್ಲಾ ಅನುದಾನಗಳನ್ನು ಪಡೆದುಕೊಂಡು ಪ್ರಧಾನಿಯ ಭಾವಚಿತ್ರವನ್ನು ಹಾಕುವ ಸೌಜನ್ಯವನ್ನೂ ತೋರದೇ ಎಲ್ಲವೂ ನಾವೇ ಮಾಡಿದ್ದು ಎಂದು ಬಿಂಬಿಸಿಕೊಳ್ಳಲು ರಾಜ್ಯ ಕಾಂಗ್ರೆಸ್ ಸರ್ಕಾರ ಹೊರಟಿದೆ. ಜಿಲ್ಲಾಧಿಕಾರಿಗಳ ಕಚೇರಿಯನ್ನೂ ಸಹ ಸಂಪೂರ್ಣಗೊಳಿಸಲು ಸುಮಾರು 20 ಕೋಟಿಗೂ ಅಧಿಕ ಹಣವನ್ನು ಸ್ಮಾರ್ಟ್ ಸಿಟಿ ವತಿಯಿಂದಲೇ ಪಡೆದುಕೊಳ್ಳಲಾಗಿದೆ ಹೊರತು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿದ್ದಲ್ಲ ಎಂದರು.

ನಿಂತು ಹೋಗಿದ್ದ ಉರ್ವ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಪ್ರಾಜೆಕ್ಟ್ ಹೇಗಾದರೂ ಮಾಡಿ ಮರು ಆರಂಭಿಸ ಬೇಕೆಂಬುದು ನನ್ನ ಮಹದಾಸೆಯಾಗಿತ್ತು. ಅದರಂತೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಮ್ಮೆಚೂರ್ ಕಬಡ್ಡಿಯ ಪ್ರಮುಖರಾಗಿದ್ದ ಗಿರಿಧರ್ ಶೆಟ್ಟಿ, ಪುರುಷೋತ್ತಮ ಪೂಜಾರಿ, ರತನ್ ಶೆಟ್ಟಿ ಸೇರಿದಂತೆ ಅನೇಕರನ್ನು ಕೂಡಿಕೊಂಡು, ಸಂಸದರು, ಮಂತ್ರಿಗಳ, ಅಧಿಕಾರಿಗಳ ಸಹಕಾರದೊಂದಿಗೆ ಎಷ್ಟು ಶ್ರಮ ವಹಿಸಿದ್ದೆವು ಎಂಬ ಬಗ್ಗೆ ಈಗ ಉದ್ಘಾಟನೆಗೆ ಹಾತೊರೆಯುತ್ತಿರುವವರಿಗೆ ಅರಿವಿದೆಯಾ? ಉರ್ವ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ಜನಪ್ರತಿನಿಧಿಯೇ ಅಲ್ಲದ ಕಾಂಗ್ರೆಸ್ಸಿನ ವ್ಯಕ್ತಿಯೋರ್ವರು ಮೊನ್ನೆಯೇ ಅನಧಿಕೃತವಾಗಿ ಪೂಜೆ ನಡೆಸಿರುವುದು ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಶಾಸಕ‌ ಕಾಮತ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ನಿಯಮಗಳ ಹೆಸರಿನಡಿ ಮಂಗಳೂರು ನಗರದಲ್ಲಿ ಕೋಲ, ನೇಮ, ಬ್ರಹ್ಮಕಲಶ, ಭಜನಾ ಮಂಗಲೋತ್ಸವ ಗಳಿಗೆ ಶುಭಕೋರಿ ಹಾಕಲಾಗಿದ್ದ ಬ್ಯಾನರ್-ಫ್ಲೆಕ್ಸ್ ಗಳನ್ನು ಕಿತ್ತೆಸೆದಿದ್ದ ಅಧಿಕಾರಿಗಳೇ ಇದೀಗ ಮುಖ್ಯಮಂತ್ರಿಗಳಿಗೆ ಸ್ವಾಗತ ಕೋರಿ ಕಾಂಗ್ರೆಸ್ ನಾಯಕರು ಎಲ್ಲೆಂದರಲ್ಲಿ ಅನಧಿಕೃತವಾಗಿ ಹಾಕಿರುವ ಫ್ಲೆಕ್ಸ್ ಗಳನ್ನು ಮುಟ್ಟುವ ಧೈರ್ಯ ತೋರದೇ ಕೈಕಟ್ಟಿ ಕುಳಿತಿದ್ದಾರೆ. ಹಕ್ಕುಪತ್ರಗಳು ಸಿಗದೆ ಪರಿತಪಿಸುತ್ತಿದ್ದ ಬೆಂಗ್ರೆ, ಬೋಳೂರಿನ ಪರಪು ಹಾಗೂ ಸ್ಮಶಾನ ಪರಿಸರ, ಉರ್ವದ ಕೊರಗಜ್ಜ ಕ್ಷೇತ್ರದ ಪರಿಸರ, ಮೊದಲಾದ ಕಡೆಗಳಲ್ಲೆಲ್ಲಾ ಆರ್.ಅಶೋಕ್ ಕಂದಾಯ ಮಂತ್ರಿಗಳಾಗಿದ್ದಾಗ ಸಮಸ್ಯೆ ನಿವಾರಿಸಿ 2023ರಲ್ಲಿ 690 ಕ್ಕೂ ಅಧಿಕ ಕುಟುಂಬಗಳಿಗೆ ಹಕ್ಕುಪತ್ರವನ್ನು ನೀಡುವ ಕೆಲಸ ಮಾಡಿದ್ದೆ. ಉಳಿದ ಹಕ್ಕುಪತ್ರ ನೀಡುವ ಸಂದರ್ಭದಲ್ಲಿ ಚುನಾವಣೆ ಬಂದ ಕಾರಣ ಎಲ್ಲವೂ ಸ್ಥಗಿತವಾಯಿತು. ಬಳಿಕ ತಹಸಿಲ್ದಾರ್, ಜಿಲ್ಲಾಧಿಕಾರಿಗಳು, ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಪದೇಪದೇ ಆಗ್ರಹ ಮಾಡಿದ ಪರಿಣಾಮ 2023 ರಲ್ಲೇ ಸಿದ್ಧವಾಗಿದ್ದ ಹಕ್ಕು ಪತ್ರಗಳನ್ನು ಇದೀಗ ನೀಡಲಾಗುತ್ತಿದೆ. ಅಭಿವೃದ್ಧಿ ಹಾಗೂ ಜನಕಲ್ಯಾಣ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರ ರಾಜಕಾರಣವನ್ನು ಮಾಡದೇ, ಜನಪರ ಆಡಳಿತಕ್ಕೆ ವಿರೋಧ ಪಕ್ಷಗಳೊಂದಿಗೂ ಕೈಜೋಡಿಸಬೇಕು ಎಂದು ಶಾಸಕರು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X