ಗುಂಡ್ಯ: ಕೆಎಸ್ಸಾರ್ಟಿಸಿ ಬಸ್ - ಲಾರಿ ನಡುವೆ ಅಪಘಾತ

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ಸು ಹಾಗೂ ಈಚರ್ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಮೇ 20ರಂದು ಬೆಳಿಗ್ಗೆ ನಡೆದಿದೆ.
ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮತ್ತು ಬೆಂಗಳೂರಿನಿಂದ ಉಡುಪಿಗೆ ಜ್ಯೂಸ್ ಸಾಗಾಟ ಮಾಡುತ್ತಿದ್ದ ಈಚರ್ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು ಅದೃಷ್ಟವಶಾತ್ ಯಾರಿಗೂ ಅಪಾಯವಾಗಿಲ್ಲ. ಈ ಘಟನೆಯಿಂದ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ತಕ್ಷಣವೇ ಸ್ಥಳೀಯರು ಹಾಗೂ ನೆಲ್ಯಾಡಿ ಹೊರಠಾಣೆಯ ಪೆÇಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು. ಎರಡು ದಿನದ ಹಿಂದೆ ಇದೇ ಜಾಗದಲ್ಲಿ ಕೆಎಸ್‍ಆರ್‍ಟಿಸಿ ಬಸ್ಸು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 2 ತಾಸು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
Next Story





