ಕೊಲೆಯಾದ ರಹ್ಮಾನ್, ಹಲ್ಲೆಗೊಳಗಾದ ಶಾಫಿ ಮನೆಗೆ ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ನಿಯೋಗ ಭೇಟಿ

ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಕೊಲೆಯಾದ ಬೆಳ್ಳೂರು ನಿವಾಸಿ ಅಬ್ದುಲ್ ರಹ್ಮಾನ್ ಹಾಗೂ ಹಲ್ಲೆಗೊಳಗಾದ ಖಲಂದರ್ ಶಾಫಿಯವರ ಮನೆಗಳಿಗೆ ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ನಿಯೋಗ ಶನಿವಾರ ಬೇಟಿ ನೀಡಿ, ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿತು.
ಈ ಸಂದರ್ಭದಲ್ಲಿ ಸಂಯುಕ್ತ ಜಮಾಅತ್ ಅಧ್ಯಕ್ಷ ಮುಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು, ಉಪಾಧ್ಯಕ್ಷ ಎಂ.ಎಸ್.ಮುಹಮ್ಮದ್, ಪ್ರಧಾನ ಕಾರ್ಯದರ್ಶಿ ನೋಟರಿ ಅಬೂಬಕರ್ ವಿಟ್ಲ, ಕೋಶಾಧಿಕಾರಿ ಹಾಜಿ.ಪಿ.ಎಸ್.ಅಬ್ದುಲ್ ಹಮೀದ್ ನೆಹರು ನಗರ, ಪ್ರಮುಖರಾದ ಎಫ್.ಎಂ.ಬಶೀರ್ ಫರಂಗಿಪೇಟೆ, ಆಸಿಫ್ ಇಕ್ಬಾಲ್ ಫರಂಗಿಪೇಟೆ, ಆನಿಯಾ ದರ್ಬಾರ್ ಹಂಝ ಬಸ್ತಿಕೋಡಿ, ಹಾಜಿ ಬಿ.ಎ.ಮುಹಮ್ಮದ್ ಬಂಟ್ವಾಳ, ಹಕೀಂ ಕಲಾಯಿ, ಬಿ.ಎಂ.ತುಂಬೆ, ಮಜೀದ್ ಕನ್ಯಾನ, ಇಬ್ರಾಹೀಂ ನವಾಝ್ ಬಡಕಬೈಲು ಮತ್ತಿತರರು ಉಪಸ್ಥಿತರಿದ್ದರು.
Next Story