ಕಲಾವಿದರ ನೋವಿಗೆ ಸ್ಪಂದಿಸುವುದು ಮುಖ್ಯ: ಪ್ರಕಾಶ್ ಶೆಟ್ಟಿ

ಮಂಗಳೂರು: ಕಲಾವಿದರ ನೋವಿಗೆ ಸ್ಪಂದಿಸುವುದು ಮುಖ್ಯ, ಈ ನಿಟ್ಟಿನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕೆಲಸ ಶ್ಲಾಘನೀಯ ಎಂದು ಎಂಆರ್ ಜಿ ಗ್ರೂಪ್ ನ ಸಿಎಂಡಿ ಡಾ.ಕೆ.ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮ ಸಂಭ್ರಮದ ಸಭಾ ಕಾರ್ಯಕ್ರಮ ರವಿವಾರ ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಕಾರ್ಯಕ್ರಮದ ಸಭಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾ ಡುತ್ತಿದ್ದರು.
ಯಕ್ಷಗಾನ ಕಲಾವಿದರು ತಮ್ಮ ಕಷ್ಟವನ್ನು ಬದಿಗಿರಿಸಿ ಜನರಿಗೆ ಮನೋರಂಜನೆ ನೀಡುತ್ತಾರೆ ಎಂದಿಗೂ ಯಾರ ಮುಂದೆಯೂ ಕೈಚಾಚುವುದಿಲ್ಲ. ಅವರ ಸ್ವಾಭಿಮಾನದ ಬದುಕು ಹಾಗಿರುತ್ತದೆ, ಇಂತಹ ಕಲಾವಿ ದರಿಗೆ ನೆರವಾಗಲು ಪಟ್ಲ ಸತೀಶ್ ಶೆಟ್ಟಿ ಯಕ್ಷಧ್ರುವ ಪಟ್ಲ ಟ್ರಸ್ಟ್ ಸ್ಥಾಪಿಸಿ ರಾತ್ರಿ ಹಗಲುಕಲಾವಿದರ ನೋವಿಗೆ ಸ್ಪಂದಿಸಿದರು. ಅವರು ಮಾಡುವ ಒಳ್ಳೆಯ ಕೆಲಸಕ್ಕೆ ಕೈಜೋಡಿಸೋಣ. ಅವರ ಸಮಾಜಮುಖಿ ಚಿಂತನೆ, ಕಾರ್ಯಗಳು ಹೀಗೆಯೇ ಮುಂದುವರಿಯಲಿ“ ಎಂದರು.
2025ನೇ ಸಾಲಿನ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ-ಚಂದ್ರಿಕಾ ಹರೀಶ್ ಶೆಟ್ಟಿ ದಂಪತಿಗಳಿಗೆ ಪ್ರದಾನ ಮಾಡಲಾಯಿತು.
ವೇದಿಕೆಯಲ್ಲಿ ವಕ್ವಾಡಿ ಪ್ರವೀಣ್ ಶೆಟ್ಟಿ, ಪ್ರವೀಣ್ ಭೋಜ ಶೆಟ್ಟಿ, ದುಬೈ ಘಟಕದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ತಲ್ಲೂರ್ ಶಿವರಾಮ ಶೆಟ್ಟಿ, ಬಿಬಿಎಂಪಿ ಅಪರ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ಶಶಿಧರ್ ಶೆಟ್ಟಿ ಬರೋಡ, ಉದ್ಯಮಿ ವೇಣುಗೋಪಾಲ್ ಶೆಟ್ಟಿ ಥಾಣೆ, ಬೆಳ್ಳಾಡಿ ಅಶೋಕ್ ಶೆಟ್ಟಿ, ಕರ್ನಿರೆ ವಿಶ್ವನಾಥ್ ಶೆಟ್ಟಿ, ರವೀಂದ್ರ ನಾಥ್ ಭಂಡಾರಿ, ಶಶಿಧರ್ ಶೆಟ್ಟಿ ಇನ್ನಂಜೆ, ಗಿರೀಶ್ ಶೆಟ್ಟಿ ತೆಳ್ಳಾರ್, ಉಳ್ತೂರು ಮೋಹನ್ ದಾಸ್ ಶೆಟ್ಟಿ, ಪೆರಾರ ಬಾಬಣ್ಣ, ಪುತ್ತಿಗೆ ಮಠ ಯುಎಸ್ ಎ ಅರ್ಚಕ ಕಿರಣ್ ರಾವ್, ಗಿರೀಶ್ ಎಂ ಶೆಟ್ಟಿ ಕಟೀಲ್, ಸುಧಾಕರ ಎಸ್ ಪೂಂಜ ಸುರತ್ಕಲ್, ದಯಾನಂದ ಶೆಟ್ಟಿ ಆಸ್ಟ್ರೇಲಿಯಾ, ಡಾ.ಆರ್.ಕೆ.ಶೆಟ್ಟಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಕದ್ರಿ ನವನೀತ ಶೆಟ್ಟಿ, ಕದ್ರಿ ಪ್ರದೀಪ್ ಆಳ್ವ, ಬಾಳ ಜಗನ್ನಾಥ ಶೆಟ್ಟಿ, ರವಿಚಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲ ಸತೀಶ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಕರ್ನೂರು ಮೋಹನ್ ರೈ ಕಾರ್ಯಕ್ರಮ ನಿರೂಪಿಸಿದರು.