Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಮಾಯಕರ ಹತ್ಯೆಗೆ ಪ್ರಚೋದನೆ ನೀಡುವ...

ಅಮಾಯಕರ ಹತ್ಯೆಗೆ ಪ್ರಚೋದನೆ ನೀಡುವ ಸೂತ್ರಧಾರಿಗಳನ್ನು ಮಟ್ಟ ಹಾಕಬೇಕಾಗಿದೆ: ಬಿ.ಕೆ.ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ5 Jun 2025 4:23 PM IST
share
ಅಮಾಯಕರ ಹತ್ಯೆಗೆ ಪ್ರಚೋದನೆ ನೀಡುವ ಸೂತ್ರಧಾರಿಗಳನ್ನು ಮಟ್ಟ ಹಾಕಬೇಕಾಗಿದೆ: ಬಿ.ಕೆ.ಹರಿಪ್ರಸಾದ್

ಮಂಗಳೂರು, ಜೂ.5: ಸರ್ವಧರ್ಮ ಸಮಭಾವದ ದ.ಕ. ಜಿಲ್ಲೆಯಲ್ಲಿ ಅಮಾಯಕರ ಹತ್ಯೆಗೆ ಪ್ರಚೋದನೆ ನೀಡುವ ಸೂತ್ರಧಾರಿಗಳ ವಿರುದ್ಧ ಸೂಕ್ತ ಕ್ರಮ ಅಗತ್ಯ ಎಂದು ಕರ್ನಾಟಕ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅಭಿಪ್ರಾಯಿಸಿದ್ದಾರೆ.

ಉಲಮಾ ಕೋ ಆರ್ಡಿನೇಷನ್ ಕರ್ನಾಟಕ ಇದರ ನಾಯಕರೊಂದಿಗೆ ಗುರುವಾರ ನಗರದ ಕಂಕನಾಡಿ ಜಂಇಯ್ಯತುಲ್ ಫಲಾಹ್ ಹಾಲ್ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಹತ್ಯೆಗಳ ಹಿಂದೆ ಕಾಣದ ಕೈಗಳ ಕೈವಾಡವಿದೆ. ಹತ್ಯೆಯ ಪಾತ್ರಧಾರಿಗಳು ಸಿಕ್ಕಿ ಬೀಳುತ್ತಾರೆ. ಆದರೆ ಸೂತ್ರಧಾರಿಗಳು ತಪ್ಪಿಸಿಕೊಳ್ಳುತ್ತಿದ್ದಾರೆ. ಸೂತ್ರಧಾರಿಗಳ ಬಗ್ಗೆ ಎಚ್ಚರ ಅಗತ್ಯ. ಕೋಮು ಸೌಹಾರ್ದಕ್ಕೆ ಹೆಸರಾದ ಈ ಜಿಲ್ಲೆಯಲ್ಲಿ ಶೇ.90ರಷ್ಟು ಮಂದಿ ವಿಶ್ವಾಸದಿಂದ ಬದುಕುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಇಲ್ಲಿ ನಡೆಯುತ್ತಿರುವ ಅಮಯಾಕರ ಹತ್ಯೆಯಿಂದಾಗಿ ಸೌಹಾರ್ದಕ್ಕೆ ಧಕ್ಕೆಯಾಗುತ್ತದೆ. ಇಲ್ಲಿನ ಶಾಂತಿ, ಸೌಹಾರ್ದವನ್ನು ಉಳಿಸಿ ಬೆಳೆಸಲು ಸರ್ವಧರ್ಮದ ಮುಖಂಡರನ್ನು ಸೇರಿಸಿ ಸಭೆ ನಡೆಸಲಾಗುವುದು ಎಂದರು.

ಉಲಮಾಗಳು ಸಲ್ಲಿಸಿರುವ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಮುಖ್ಯ ಮಂತ್ರಿಗೆ ಎರಡು ದಿನಗಳ ಒಳಗಾಗಿ ಸಲ್ಲಿಸಿ ಈ ನಿಟ್ಟಿನಲ್ಲಿ ಅವರಲ್ಲಿ ಚರ್ಚಿಸಲಾಗುವುದು ಎಂದು ಬಿ.ಕೆ.ಹರಿಪ್ರಸಾದ್ ತಿಳಿಸಿದರು.

ಎಂಎಸ್ ಎಂ ಅಬ್ದುಲ್ ರಶೀದ್ ಝೈನಿ ಮತ್ತು ಅನಿಸ್ ಕೌಸರಿ ಮನವಿಯಲ್ಲಿರುವ ವಿಚಾರಗಳನ್ನು ಸಭೆಯ ಮುಂದಿಟ್ಟರು. ಎನ್ಕೆಎಂ ಶಾಫಿ ಸಅದಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಉಲಮಾ ಕೋ ಆರ್ಡಿನೇಷನ್ ಸಮಿತಿಯ ಪ್ರಮುಖರಾದ ಸೈಯದ್ ಇಸ್ಮಾಯೀಲ್ ತಂಙಳ್ ಮದನಿ, ಮುಹಿಯುದ್ದೀನ್ ಕಾಮಿಲ್ ಸಖಾಫಿ ತೋಕೆ, ಅಶ್ರಫ್ ಸಅದಿ ಮಲ್ಲೂರು, ಕೆ.ಎಂ.ಉಸ್ಮಾನುಲ್ ಫೈಝಿ ತೋಡಾರ್, ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಮನಪಾ ಮಾಜಿ ಸದಸ್ಯ ಅಬ್ದುಲ್ ರವೂಪ್ ಮತ್ತಿತರರು ಭಾಗವಹಿಸಿದ್ದರು.

ಉಲಮಾ ಕೋ ಆರ್ಡಿನೇಷನ್ ಕರ್ನಾಟಕ ಸಲ್ಲಿಸಿದ ಮನವಿಯ ಹೈಲೈಟ್ಸ್

*ಕೋಮು ವಿಷ ಹರಡುವ ಜನ ಪ್ರತಿನಿಧಿಗಳಿಗೆ ಯಾವುದೇ ಕಾರಣಕ್ಕೂ ಜಾಮೀನು ಮತ್ತು ತಡೆಯಾಜ್ಞೆ ಸಿಗದಂತೆ ನೋಡಿಕೊಂಡು, ಅವರಿಗೆ ಅವರ ಹುದ್ದೆಗಳಿಂದ ತೆರವುಗೊಳಿಸುವುದರ ಸಮೇತ ಮಾದರಿಯೋಗ್ಯ ಶಿಕ್ಷೆ ನೀಡಬೇಕು

*ಹಲ್ಲೆ, ಕೊಲೆ, ದೊಂಬಿಗಳಿಗೆ ಕಾರಣವಾಗುವ 'ದ್ವೇಷ ಭಾಷಣಕಾರರು’ ವರ್ಷಗಟ್ಟಲೆ ಜೈಲಿನಲ್ಲೇ ಇರುವಂತಹ ನಿಯಮ ಜಾರಿ ಮಾಡಬೇಕು

*ಇತ್ತೀಚೆಗೆ ಕೊಲೆಯಾದ ಅಮಾಯಕ ಕೊಳತ್ತಮಜಲು ಅಬ್ದುಲ್ ರಹ್ಮಾನ್ ಹಂತಕರನ್ನು ಮತ್ತು ಅದರ ಹಿಂದಿರುವ ಶಕ್ತಿಗಳನ್ನ ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಮೃತರ ಕುಟುಂಬಕ್ಕೆ ಸರಕಾರದ ವತಿಯಿಂದ ಕನಿಷ್ಠ ಐವತ್ತು ಲಕ್ಷ ರೂಪಾಯಿ ಪರಿಹಾರ ನೀಡಬೇಕು. ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖಲಂದರ್ ಶಾಫಿಯವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರ ಭರಿಸಬೇಕು ಅಲ್ಲದೆ ಅವರಿಗೆ ಹತ್ತು ಲಕ್ಷ ರೂ. ಪರಿಹಾರ ನೀಡಬೇಕು.

*ಗುಂಪು ಹತ್ಯೆಗೆ ಬಲಿಯಾದ ಕೇರಳದ ವಯಾನಾಡ್ ನ ಅಶ್ರಫ್ ಹಂತಕರನ್ನು ತಕ್ಷಣ ಬಂಧಿಸಿ ಜೈಲಿಗೆ ಅಟ್ಟಬೇಕು. ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕು.

*ವರ್ಷಗಳ ಹಿಂದೆ ಎನ್ಆರ್ಸಿ ಪ್ರತಿಭಟನೆಯ ವೇಳೆ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಪ್ರಕರಣದಲ್ಲಿ ಈಗಲೂ ಅಮಾಯಕ ಮುಸ್ಲಿಮ್ ಯುವಕರು ಕೋರ್ಟ್, ಪೊಲೀಸ್ ಸ್ಟೇಷನ್ ಗಳಿಗೆ ಅಲೆದಾಡುತ್ತಿದ್ದಾರೆ. ಅಮಾಯಕರಿಗೆ ಶೀಘ್ರ ನ್ಯಾಯ ಒದಗಿಸಬೇಕು

*ಜೂನ್ ಏಳರಂದು ಮುಸಲ್ಮಾನರ ಪವಿತ್ರ ಬಕ್ರೀದ್ ಬರುತ್ತಿದ್ದು, ಮೃಗ ಬಲಿದಾನವು ಅದರಲ್ಲಿ ಪ್ರಮುಖವಾಗಿದೆ. ಅಲ್ಲಲ್ಲಿ ಕೋಮುವಾದಿಗಳು ಅಕ್ರಮ, ಹಿಂಸೆಗಳನ್ನು ಮಾಡುತ್ತಿದ್ದು, ಮುಸ್ಲಿಮ್ ಸಮುದಾಯವು ಭಯ ಭೀತವಾಗಿದೆ. ಹಬ್ಬದ ಧಾರ್ಮಿಕ ಆಚರಣೆಗಳ ಸುಗಮ ನಿರ್ವಹಣೆಗೆ ರಕ್ಷಣೆ ಒದಗಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X