ಎಸ್‌ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಮಂಗಳೂರು ಜೂ.5: ಪ್ರಸಕ್ತ (2025-26ನೇ) ಸಾಲಿನಲ್ಲಿ ದ.ಕ.ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ಮೂಲ ನಿವಾಸಿ ಕೊರಗ ಸಮುದಾಯದ ಎಸೆಸ್ಸೆಲ್ಸಿ ಮತ್ತು ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಎಸೆಸ್ಸೆಲ್ಸಿ 10,000 ರೂ., ಪಿಯುಸಿ ಮತ್ತು ತತ್ಸಮಾನ ಕೋರ್ಸುಗಳಿಗೆ 12,000 ರೂ., ಎಲ್ಲಾ ಪದವಿ ಕೋರ್ಸುಗಳಿಗೆ 15,000 ರೂ, ಎಲ್ಲಾ ಸ್ನಾತಕೋತ್ತರ ಕೋರ್ಸುಗಳಿಗೆ 18,000 ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಜು.31 ಕೊನೆಯ ದಿನವಾಗಿದೆ.
ಅರ್ಜಿಯನ್ನು ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ (ಗ್ರೇಡ್-12) ಕಚೇರಿಯಿಂದ ಪಡೆದು ಸಲ್ಲಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಸಮನ್ವಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





