Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಅಪರಿಚಿತ ಯುವಕನ ಮೃತದೇಹ...

ಮಂಗಳೂರು: ಅಪರಿಚಿತ ಯುವಕನ ಮೃತದೇಹ ಪತ್ತೆ; ಕೊಲೆ ಶಂಕೆ

ವಾರ್ತಾಭಾರತಿವಾರ್ತಾಭಾರತಿ5 Jun 2025 10:37 PM IST
share
ಮಂಗಳೂರು: ಅಪರಿಚಿತ ಯುವಕನ ಮೃತದೇಹ ಪತ್ತೆ; ಕೊಲೆ ಶಂಕೆ

ಮಂಗಳೂರು, ಜೂ.5: ನಗರದ ಮಾರ್ಕೆಟ್ ರಸ್ತೆಯ ನಿರ್ಮಾಣ ಹಂತದಲ್ಲಿರುವ ಸ್ಮಾರ್ಟ್ ಸಿಟಿ ಮಾರ್ಕೆಟ್ ಕಟ್ಟಡದಲ್ಲಿ ಸುಮಾರು 35ರಿಂದ 40 ವರ್ಷ ಪ್ರಾಯದೊಳಗಿನ ಅಪರಿಚಿತ ಯುವಕನ ಮೃತದೇಹ ಗುರುವಾರ ಬೆಳಗ್ಗೆ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

ಯುವಕನ ಎಡಕಾಲಿನ ಗಂಟಿನ ಕೆಳ ಭಾಗದಲ್ಲಿ ಚರ್ಮ ಹೋದ ಸಣ್ಣ ರಕ್ತಗಾಯವಾಗಿದೆ. ಅಲ್ಲದೆ ಕಾಲಿನ ಗಂಟಿನ ಮೇಲ್ಭಾಗದಲ್ಲಿ ದಪ್ಪವಾಗಿರುವುದು ಕಂಡುಬಂದಿದೆ.

ಮೃತದೇಹದ ಪಕ್ಕದಲ್ಲಿ ಸುಮಾರು 20 ಅಡಿ ಉದ್ದದ ಕಬ್ಬಿಣದ 4 ರಾಡ್‌ಗಳು, ರಕ್ತದ ಕಲೆಗಳು ಕಂಡುಬಂದಿದೆ. ಮೃತದೇಹದ ಪಕ್ಕದಲ್ಲಿ ಗಾಯವಾದ ಸ್ಥಳಕ್ಕೆ ಕಟ್ಟಲು ಉಪಯೋಗಿಸಿದಂತೆ ಕಂಡುಬರುವಂತಹ ರಕ್ತದ ಕಲೆಯಿರುವ ಬೆಡ್‌ಶೀಟ್‌ನ ಒಂದು ಸಣ್ಣ ತುಂಡು ಕೂಡ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಕ್ಕದ ಸಣ್ಣ ಕೋಣೆಯಲ್ಲಿ ಮಲಗಲು ಬೆಡ್‌ಶೀಟ್ ಹಾಸಿರುವುದು ಕಂಡುಬಂದಿದೆ. ಬುಧವಾರ ರಾತ್ರಿ ವೇಳೆ ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಬಂದ ವೇಳೆ ಯಾರೋ ಆತನನ್ನು ಕೊಲೆ ಮಾಡಿ ಹೋಗಿರಬಹುದು ಅಥವಾ ಇನ್ಯಾವುದೋ ಕಾರಣದಿಂದ ಮೃತಪಟ್ಟಿರಬಹುದು ಎಂದು ಮಂಗಳೂರು ಡೆವೆಲಪ್ಪರ್ಸ್ ಪ್ರೈ.ಲಿ. ಕಂಪೆನಿಯ ಹೌಸ್‌ಕೀಪಿಂಗ್ ಸೂಪರ್‌ವೈಸರ್ ಫಕೀರೇಶ್ ಇ.ಟಿ. ನೀಡಿದ ದೂರಿನಂತೆ ಬಂದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಮಾರು 5.9 ಅಡಿ ಎತ್ತರದ, ಎಣ್ಣೆ ಕಪ್ಪು ಮೈಬಣ್ಣದ, ಸಾಧಾರಣ ಶರೀರದ ಈ ವ್ಯಕ್ತಿಯ ಎಡಕಣ್ಣಿನ ಕೆಳಭಾಗದಲ್ಲಿ ಕಪ್ಪುಬಣ್ಣದ ಮಚ್ಚೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X