Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ...

ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್‌ಐಎಗೆ: ಕೇಂದ್ರ ಗೃಹ ಸಚಿವಾಲಯ ಆದೇಶ

ವಾರ್ತಾಭಾರತಿವಾರ್ತಾಭಾರತಿ8 Jun 2025 9:52 PM IST
share
ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್‌ಐಎಗೆ: ಕೇಂದ್ರ ಗೃಹ ಸಚಿವಾಲಯ ಆದೇಶ

ಮಂಗಳೂರು, ಜೂ.8: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ತನಿಖೆಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಶನಿವಾರ ಆದೇಶ ನೀಡಿದೆ.

ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಪದವು ಕ್ರಾಸ್ ಬಳಿ ಮೇ 1ರಂದು ರಾತ್ರಿ ದುಷ್ಕರ್ಮಿಗಳ ತಂಡ ವೊಂದು ಸುಹಾಸ್ ಶೆಟ್ಟಿಯ ಕಾರನ್ನು ಅಡ್ಡಗಟ್ಟಿ ನಡುರಸ್ತೆಯಲ್ಲೇ ಮಾರಕಾಯುಧಗಳಿಂದ ಕೊಚ್ಚಿ ಹಾಕಿ ಪರಾರಿಯಾಗಿತ್ತು. ಗಂಭೀರ ಗಾಯಗೊಂಡಿದ್ದ ಸುಹಾಸ್ ಶೆಟ್ಟಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದನು.

ಈ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಿಲ್ಲೆಯಲ್ಲಿ ಉದ್ವಿಗ್ನ ಸ್ಥಿತಿ ಕಾರಣ ವಾಗಿದ್ದ ಈ ಪ್ರಕರಣದ ತನಿಖೆ ನಡೆಸಿದ ಬಜ್ಪೆ ಪೊಲೀಸರು ಮತ್ತು ಸಿಸಿಬಿ ಪೊಲೀಸರು ಆರೋಪಿ ಸಫ್ವಾನ್ ಸೇರಿದಂತೆ 12 ಮಂದಿ ಆರೋಪಿಗಳನ್ನು ಬಂಧಿಸಿದ್ದರು.

ಬಳಿಕ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಬಿಜೆಪಿ , ಸಂಘಪರಿವಾರದ ಸಂಘಟನೆಗಳು ಆಗ್ರಹಿಸಿತ್ತು. ರಾಜ್ಯಪಾಲರಿಗೂ ಬಿಜೆಪಿ ಮನವಿ ಮಾಡಿತ್ತು.

ಅಲ್ಲದೆ ಬಜ್ಪೆಯಲ್ಲಿ ಎನ್‌ಐಎಗೆ ಒಪ್ಪಿಸುವಂತೆ ರಾಜ್ಯ ಸರಕಾರವನ್ನು ಆಗ್ರಹಿಸಿ ಜನಾಗ್ರಹ ಸಮಾವೇಶ ನಡೆದಿತ್ತು . ಪೊಲೀಸರ ಅನುಮತಿ ಪಡೆಯದೆ ಈ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಭಾಷಣಕಾರರ ಮತ್ತು ಆಯೋಜಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಹತ್ಯೆ ನಡೆದು ತಿಂಗಳಾಗುವ ಮೊದಲೇ ಮೇ 27ರಂದು ಕೊಳತ್ತಮಜಲಿನ ಅಮಾಯಕ ಯುವಕ ಪಿಕ್ ಅಪ್ ಚಾಲಕ ಅಬ್ದುಲ್ ರಹ್ಮಾನ್ ಅವರನ್ನು ಹತ್ಯೆ ಮಾಡಲಾಗಿತ್ತು. ಇವರೊಂದಿಗೆ ಇದ್ದ ಖಲಂದರ್ ಶಾಫಿ ಮೇಲೆ ಇದೇ ವೇಳೆ ಮಾರಣಾಂತಿಕ ಹಲ್ಲೆ ನಡೆದಿದ್ದರೂ, ಅವರು ಆಸ್ಪತ್ರೆ ಸೇರಿ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮುಂದುವರಿದಿರುವಾಗಲೇ ಇದೀಗ ಈ ಪ್ರಕರಣ ಎನ್‌ಐಎಗೆ ಹಸ್ತಾಂತರಿಸಲು ಕೇಂದ್ರ ಗೃಹ ಸಚಿವಾಲಯದಿಂದ ಆದೇಶವಾಗಿದೆ.

ಸುಹಾಸ್ ಕೊಲೆ ವಿಚಾರಕ್ಕೆ ಸಂಬಂಧಿಸಿ ಭಾರತೀಯ ನ್ಯಾಯ ಸಂಹಿತೆ 2023 ರ ಕಲಂ 189(4), 191(2), 191(3), 126(2), 109, 118(1), 103(1), 61(1), 62, 351(2), 351(3), 190 ಮತ್ತು ಶಸ್ತ್ರಾಸ್ತ್ರ ಕಾಯಿದೆ 1959ರ 3(1) 25ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿರುವುದು ಕೇಂದ್ರ ಸರಕಾರಕ್ಕೆ ಮಾಹಿತಿ ಲಭಿಸಿದೆ.

ಮೇ 1ರಂದು ಸುಹಾಸ್ ಶೆಟ್ಟಿ ಕಾರಿನಲ್ಲಿ ಇನ್ನಿತರ ವ್ಯಕ್ತಿಗಳೊಂದಿಗೆ ಪ್ರಯಾಣಿಸುತ್ತಿದ್ದಾಗ ಸಫ್ವಾನ್ ಮತ್ತು ಇತರ ಎಂಟು ಮಂದಿ ಇವರ ಮೇಲೆ ದಾಳಿ ನಡೆಸಿದ್ದರು. ಇದೊಂದು ಸಾರ್ವಜನಿಕ ಸ್ಥಳದಲ್ಲಿ ಭಯವನ್ನು ಉಂಟುಮಾಡುವ ಉದ್ದೇಶದಿಂದ ವ್ಯಕ್ತಿಯೊಬ್ಬರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಿದ ಪ್ರಕರಣವಾಗಿದೆ ಹಾಗೂ ಅಕ್ರಮ ಚಟುವಟಿಕೆ ತಡೆ ಕಾಯಿದೆ (ಯುಎಪಿ) 1967ರ ಕಲಂ 10 ಜೊತೆಗೆ 41, 13, 15, 17, 18 ಮತ್ತು 20 ಅನ್ವಯವಾಗುತ್ತವೆ. ಆರೋಪಿಗಳು ಪಿಎಫ್‌ಐ ಎಂಬ ಕಾನೂನುಬಾಹ್ಯ ಸಂಘಟನೆಯ ಸದಸ್ಯರಾಗಿದ್ದಾರೆ ಎಂಬುದಾಗಿ ಆರೋಪಿಸಲಾಗಿದೆ.

ಈ ಪ್ರಕರಣವು ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯಿದೆ 2008ರ ಅಡಿಯಲ್ಲಿ ಅನುಸೂಚಿತ ಅಪರಾಧ ವಾಗಿದೆ ಎಂಬ ಅಭಿಪ್ರಾಯವನ್ನು ಕೇಂದ್ರ ಸರಕಾರ ವ್ಯಕ್ತಪಡಿಸಿದೆ. ಪ್ರಕರಣದ ತೀವ್ರತೆ, ರಾಷ್ಟ್ರೀಯ ಪರಿಣಾಮಗಳು ಹಾಗೂ ವಿಸ್ತೃತವಾಗಿ ನಡೆಯುತ್ತಿರುವ ಸಂಚನ್ನು ಅನಾವರಣಗೊಳಿಸುವ ಅಗತ್ಯತೆ ಇದೆ ಎಂಬ ಕಾರಣದಿಂದಾಗಿ, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ತನಿಖೆ ವಹಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆಯ ಸಿಟಿಸಿಆರ್ ವಿಭಾಗದ ಅಧೀನ ಕಾರ್ಯದರ್ಶಿ ರಾಜೀವ್ ಕುಮಾರ್ ಅವರು ನೀಡಿರುವ ಆದೇಶದಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯಿದೆ, 2008ರ ಸೆಕ್ಷನ್ 6 ಉಪವಿಭಾಗ (5) ಮತ್ತು ಸೆಕ್ಷನ್ 8ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಬಳಸಿ, ಮೇಲ್ಕಂಡ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೈಗೆತ್ತಿಕೊಳ್ಳಬೇಕೆಂದು ಕೇಂದ್ರ ಸರಕಾರ ನಿರ್ದೇಶನ ನೀಡಿದೆ ಎಂದು ಗೃಹ ಇಲಾಖೆ ಆದೇಶದಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X