Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಯುರೋಪಿಯನ್ ಒಕ್ಕೂಟ - ಭಾರತದೊಂದಿಗೆ...

ಯುರೋಪಿಯನ್ ಒಕ್ಕೂಟ - ಭಾರತದೊಂದಿಗೆ ಉತ್ತಮ ಬಾಂಧವ್ಯವಿದೆ: ಜೋರ್ಡಿ ಸೋಲೆ

ವಾರ್ತಾಭಾರತಿವಾರ್ತಾಭಾರತಿ9 Jun 2025 5:44 PM IST
share
ಯುರೋಪಿಯನ್ ಒಕ್ಕೂಟ - ಭಾರತದೊಂದಿಗೆ ಉತ್ತಮ ಬಾಂಧವ್ಯವಿದೆ: ಜೋರ್ಡಿ ಸೋಲೆ

ಕೊಣಾಜೆ: ಯುರೋಪಿಯನ್‌ ಒಕ್ಕೂಟವು ಭೌಗೋಳಿಕ ಪ್ರದೇಶದಲ್ಲಿ ಚಿಕ್ಕದಾಗಿದ್ದು, ಜಾಗತಿಕ ಜನಸಂಖ್ಯೆ ಯನ್ನು ಶೇ 5.9% ಹೊಂದಿದ್ದು, ಆರ್ಥಿಕವಾಗಿ ಜಾಗತಿಕ ಮಟ್ಟದಲ್ಲಿ ದ್ವೀತಿಯ ಸ್ಥಾನವನ್ನು ಹೊಂದುವು ದರ ಮೂಲಕ ಭಾರತ ಸೇರಿದಂತೆ ಜಾಗತಿಕ ರಾಷ್ಟ್ರಗಳೊಂದಿಗೆ ಉತ್ತಮ ಆರ್ಥಿಕತೆ ಸಹಕಾರ ಮತ್ತು ಸಹಭಾಗಿತ್ವವನ್ನು ಹೊಂದಿದೆ ಎಂದು ಸ್ಪೇನ್ ನ ಮಾಜಿ ಯುರೋಪಿಯನ್‌ ಪಾರ್ಲಿಮೆಂಟ್‌ ಸದಸ್ಯರಾದ ಜೋರ್ಡಿ ಸೋಲೆ ಫರ್ನಾಂಡೊ ಅವರು ಹೇಳಿದರು.

ಅವರು ಮಂಗಳೂರು ವಿವಿಯ ರಾಜ್ಯಶಾಸ್ತ್ರ ವಿಭಾಗದಲ್ಲಿ "ಭೌಗೋಳಿಕ ರಾಜಕೀಯ ವ್ಯವಸ್ಥೆಯಲ್ಲಿ ಯುರೋಪಿಯನ್‌ ಒಕ್ಕೂಟದ ಕ್ರಮ, ಸವಾಲುಗಳು, ಕಾರ್ಯತಂತ್ರಗಳು' ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.

‌‌‌ಯುರೋಪಿಯನ್‌ ಒಕ್ಕೂಟವು ಜಾಗತಿಕ ಮಟ್ಟದಲ್ಲಿ ಶಾಂತಿ ನೆಲೆಸುವಂತೆ ಸಂಘರ್ಷ ನಿವಾರಣೆಗೆ ಸಾಮಾನ್ಯ ವಿದೇಶಾಂಗ ಮತ್ತು ಭದ್ರತಾ ನೀತಿಯನ್ನು ರೂಪಿಸಿಕೊಂಡಿದೆ. ಇದರ ಮೂಲಕ ಯುರೋಪಿ ಯನ್‌ ಒಕ್ಕೂಟವು ಜಾಗತಿಕ ಮಟ್ಟದಲ್ಲಾಗುವ ಸಂಘರ್ಷಗಳನ್ನು ತಡೆದು ಶಾಂತಿಯನ್ನು ರೂಪಿಸುವುದರ ಮೂಲಕ ಮಾನವೀಯ ನೆರವನ್ನು ನೀಡುತ್ತಿದೆ. ಪ್ರಸ್ತುತದಲ್ಲಿ ಯುರೋಪಿಯನ್‌ ಒಕ್ಕೂಟವು 24 ಮಿಲಿಟರಿ ಮತ್ತು ನಾಗರಿಕ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದು ಜಾಗತಿಕ ಮಟ್ಟದಲ್ಲಿ ಒಂದು ಮೌಲ್ಯಧಾರಿತ ಸಂಘಟನೆಯಾಗಿ ಹೊರಹೊಮ್ಮಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹಾಗೆಯೇ ಯುರೋಪಿಯನ್‌ ಒಕ್ಕೂಟವು ಜಾಗತಿಕ ಮಟ್ಟದಲ್ಲಿ ಕಾರ್ಯಚರಣೆಯಲ್ಲಿ ತೊಡಗಿಸಿಕೊಳ್ಳಲು ತನ್ನ 27 ಸದಸ್ಯ ರಾಷ್ಟ್ರಗಳ ಸರ್ವಾನುಮತ ನಿರ್ಣಯ ಅಗತ್ಯವಾಗಿದ್ದು ಮಿಲಿಟರಿ ಕಾರ್ಯಚರಣೆಯಲ್ಲಿ ತೊಡಗಿಸಿಕೊಳ್ಳಲು ಸದಸ್ಯ ರಾಷ್ಟ್ರಗಳ ಮಿಲಿಟರಿ ನೆರೆವು ಅಥವಾ ನ್ಯಾಟೋನ ಬೆಂಬಲವನ್ನು ಪಡೆದು ಕೊಂಡು ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡು ಜಾಗತಿಕ ಮಟ್ಟದಲ್ಲಿ ಶಾಂತಿಯನ್ನು ರೂಪಿಸಿ ಪ್ರಜಾ ಪ್ರಭುತ್ವದ ರಕ್ಷಣೆ ಮಾಡುವುದರ ಜೊತೆಗೆ ಯುರೋಪಿಯನ್ ಒಕ್ಕೂಟ ಸದಸ್ಯ ರಾ಼ಷ್ಟ್ರಗಳ ಜನರ ಹಿತಾಸಕ್ತಿಯನ್ನು ಕಾಪಾಡುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ರಾಜ್ಯಶಾಸ್ತ್ರ ವಿಭಾಗದ ಅಧ್ಯಕ್ಷರಾದ ಪ್ರೊ. ಜಯರಾಜ್‌ ಅಮೀನ್‌ ಅವರು,‌ ಯುರೋಪಿಯನ್‌ ಒಕ್ಕೂಟವು ಜಾಗತಿಕ ಮಟ್ಟದಲ್ಲಿ ಪ್ರಬಲವಾದ ಅರ್ಥಿಕತೆಯನ್ನು ಹೊಂದಿ ರಾಜಕೀಯ ಕ್ಷೇತ್ರದಲ್ಲಿ ಅಂದರೆ ಮಿಲಿಟರಿ ಕ್ಷೇತ್ರದಲ್ಲಿ ಸೀಮಿತವಾದ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದೆ. ಅರ್ಥಿಕವಾಗಿ ಜಾಗತಿಕ ಮಟ್ಟದಲ್ಲಿ ಪ್ರಾಬಲ್ಯವನ್ನು ಸಾಧಿಸಿ ಸಂಘರ್ಷ ನಿವಾರಣೆಯಲ್ಲಿ ತನ್ನದೇ ಆದ ಮಹತ್ವವನ್ನು ಕಂಡುಕೊಂಡಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಡಾ. ವೆಂಕಟೇಶ್‌ ಹೆಚ್‌ ಎಸ್‌, ಹಾಗೂ ರಾಜ್ಯಶಾಸ್ತ್ರ ವಿಭಾಗದ ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದರು. ಲೀನ್‌ ಕಾರ್ಯಕ್ರಮ ನಿರೂಪಿಸಿದರು. ಹಾಗೂ ವರಣ್ಯಾ ನಾಯಕ್‌ ಸ್ವಾಗತಿಸಿದರು ಮತ್ತು ಡಾ. ಸಿ.ಎಮ್‌. ರಾಜ್‌ ಪ್ರವೀಣ್‌ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X