Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಶ್ರಫ್ ಕಿನಾರ ವಿರುದ್ಧ ಪ್ರಕರಣ ದಾಖಲು:...

ಅಶ್ರಫ್ ಕಿನಾರ ವಿರುದ್ಧ ಪ್ರಕರಣ ದಾಖಲು: ಎಸ್.ಎಂ.ಎ ಖಂಡನೆ

ವಾರ್ತಾಭಾರತಿವಾರ್ತಾಭಾರತಿ9 Jun 2025 11:22 PM IST
share
ಅಶ್ರಫ್ ಕಿನಾರ ವಿರುದ್ಧ ಪ್ರಕರಣ ದಾಖಲು: ಎಸ್.ಎಂ.ಎ ಖಂಡನೆ

ಮಂಗಳೂರು : ಸರ್ಕಾರ ಮತ್ತು ಪೊಲೀಸರ ನಡೆಯನ್ನು ಪ್ರಶ್ನಿಸುವ ಸಂದೇಶವೊಂದನ್ನು ಫಾರ್ವರ್ಡ್ ಮಾಡಿದ ಕಾರಣಕ್ಕೆ ಸಮಾಜ ಸೇವಕ, ಸುನ್ನೀ ಸಂಘಟಕ, ದ. ಕ. ಜಿಲ್ಲಾ ವಖ್ಫ್ ಸಲಹಾ ಸಮಿತಿ ಉಪಾಧ್ಯಕ್ಷ ಅಶ್ರಫ್ ಕಿನಾರ ಅವರ ಮೇಲೆ ಕೇಸು ದಾಖಲಿಸಿರುವುದನ್ನು ಸುನ್ನಿ ಮ್ಯಾನೇಜ್ ಮೆಂಟ್ ಅಸೋಸಿಯೇಶನ್ ರಾಜ್ಯ ಸಮಿತಿ ಖಂಡಿಸಿದೆ.

ಅಭಿಪ್ರಾಯ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಮೂಲಭೂತ ಹಕ್ಕು. ಆಡಳಿತಗಾರರ ತಪ್ಪುಗಳನ್ನು ಟೀಕಿಸಬೇಕಾದುದು ಜವಾಬ್ದಾರಿಯುತ ನಾಗರಿಕರ ಕರ್ತವ್ಯ. ಬಕ್ರೀದ್ ದಿನ ಬಲಿದಾನಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆದುಕೊಂಡ ರೀತಿ ಮತ್ತು ಸರಕಾರದ ಅನಾಸ್ಥೆಯನ್ನು ಪ್ರಶ್ನಿಸುವ ವಾಟ್ಸಪ್ ಸಂದೇಶವನ್ನು ಅವರು ಹಂಚಿಕೊಂಡಿದ್ದಾರೆ. ಅದರಲ್ಲಿ ಮುಖ್ಯಮಂತ್ರಿಗಳನ್ನೋ, ವಿಧಾನ ಸಭಾಧ್ಯಕ್ಷರನ್ನೋ ಉಲ್ಲೇಖಿಸಿಲ್ಲ. ಆದಾಗ್ಯೂ ಮುಖ್ಯಮಂತ್ರಿ ಮತ್ತು ಸ್ಪೀಕರ್ ಅವರನ್ನು ಅವಹೇಳಿಸಿದ ಆರೋಪ ಹೊರಿಸಲಾಗಿದೆ. ಇದರ ಹಿಂದೆ ಯಾವುದೋ ಷಡ್ಯಂತ್ರಗಳಿದ್ದು, ಈ ಬಗ್ಗೆ ಪೊಲೀಸ್ ಅಧಿಕಾರಿ ಗಳು ತನಿಖೆ ನಡೆಸಿ ಸತ್ಯಾವಸ್ಥೆಯನ್ನು ಹೊರತರಬೇಕು ಎಂದು ಎಸ್.ಎಂ.ಎ. ಆಗ್ರಹಿಸಿದೆ.

ಉಲಮಾ ಕೋರ್ಡಿನೇಷನ್ ಅಧೀನದಲ್ಲಿ ನಡೆದ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಪ್ರತಿಭಟನಾ ಸಮ್ಮೇಳನದ ಸಂಚಾಲಕ ಸೇರಿದಂತೆ ವಿವಿಧ ಸಮಾಜ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅಶ್ರಫ್ ಕಿನಾರ ಅವರು ಬಡವರು, ರೋಗಿಗಳು, ಅಪಘಾತಕ್ಕೀಡಾದವರು ಸೇರಿದಂತೆ ನೊಂದವರ ಪರವಾಗಿ ರಾತ್ರಿ ಹಗಲೆನ್ನದೆ ದುಡಿಯುತ್ತಿದ್ದಾರೆ. ಅಂತಹವರ ಮೇಲೆ ಕ್ಷುಲ್ಲಕ ಆರೋಪ ಹೊರಿಸಿ ದುರ್ಬಲಗೊಳಿಸುವುದು ಸರಿಯಲ್ಲ. ಬಹಿರಂಗ ವೇದಿಕೆಗಳಲ್ಲಿ ಮತ ವಿಭಾಗಗಳನ್ನು ಪರಸ್ಪರ ಎತ್ತಿ ಕಟ್ಟುವಂತೆ ಉದ್ರೇಕಕಾರಿ ಭಾಷಣ ಮಾಡಿದವರನ್ನು ಬಂಧಿಸಲು ಆಸಕ್ತಿ ತೋರದ ಪೊಲೀಸರು, ವಾಟ್ಸಪ್ ಸಂದೇಶ ಒಂದರ ಹಿಂದೆ ಬಿದ್ದು ಕೇಸು ದಾಖಲಿಸಿರುವುದು ಹಾಸ್ಯಾಸ್ಪದ. ತಕ್ಷಣ ಅವರ ಮೇಲಿನ ಕೇಸ್ ವಾಪಾಸ್ ಪಡೆಯ ಬೇಕೆಂದು ಸಮಿತಿ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ, ಪ್ರಧಾನ ಕಾರ್ಯದರ್ಶಿ ಜೆಪ್ಪು ಅಬ್ದುರ್ರಹ್ಮಾನ್ ಮದನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X