ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ

ಮಂಗಳೂರು, ಜೂ.10: ದ.ಕ. ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದ ಮೂಡಿಸುವ ವರದಿಗಾರಿಕೆಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದಿಂದ ‘ಬ್ರ್ಯಾಂಡ್ ಮಂಗಳೂರು’ ಪ್ರಶಸ್ತಿ ನೀಡಲಾಗುತ್ತಿದೆ. 2024ನೇ ಸಾಲಿನ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವ ಪತ್ರಕರ್ತರು, ದೃಶ್ಯ ಮಾಧ್ಯಮ ವಿವಿಧ ವರದಿಗಾರರು ಅರ್ಜಿ ಸಲ್ಲಿಸ ಬಹುದು. ಪ್ರಶಸ್ತಿ 5,001 ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದೆ.
2024ರ ಜ.1ರಿಂದ ಡಿ.31ರವರೆಗಿನ ವರದಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವವರು ಪತ್ರಿಕೆಯಲ್ಲಿ ಪ್ರಕಟವಾಗಿರುವ ವರದಿಯ ನಾಲ್ಕು ಪ್ರತಿಗಳನ್ನು (ಒಂದು ಮೂಲಪ್ರತಿ ಕಡ್ಡಾಯ) ಸಲ್ಲಿಸಬೇಕು.
ದೃಶ್ಯ ಮಾಧ್ಯಮದ ವರದಿಗಾರರು ಪೆನ್‌ಡ್ರೈವ್‌ನೊಂದಿಗೆ ಪ್ರಕಟವಾದ ದಿನಾಂಕದ ಕುರಿತು ಸೂಕ್ತ ದಾಖಲೆ ಯೊಂದಿಗೆ ಜೂ.18ರೊಳಗೆ ಪ್ರಧಾನ ಕಾರ್ಯದರ್ಶಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ಭವನ, ಲೇಡಿಹಿಲ್ ಉರ್ವ ಮಾರ್ಕೆಟ್ ರಸ್ತೆ, ಮಂಗಳೂರು-6ಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.