Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್‌ಸಿಡಿಸಿಸಿ ಬ್ಯಾಂಕ್ ಕಾರ್ಯಸಾಧನೆಗೆ...

ಎಸ್‌ಸಿಡಿಸಿಸಿ ಬ್ಯಾಂಕ್ ಕಾರ್ಯಸಾಧನೆಗೆ ಸಚಿವರ ಮೆಚ್ಚುಗೆ

ವಾರ್ತಾಭಾರತಿವಾರ್ತಾಭಾರತಿ13 Jun 2025 10:30 PM IST
share
ಎಸ್‌ಸಿಡಿಸಿಸಿ ಬ್ಯಾಂಕ್ ಕಾರ್ಯಸಾಧನೆಗೆ ಸಚಿವರ ಮೆಚ್ಚುಗೆ

ಮಂಗಳೂರು,ಜೂ.13; ಕರ್ನಾಟಕ ರಾಜ್ಯ ಪೊಲೀಸ್ ವಿಶೇಷ ಕಾರ್ಯಪಡೆ ಘಟಕದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಕರ್ನಾಟಕ ಸರಕಾರದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್) ಗೆ ಆಗಮಿಸಿದ್ದು , ಈ ಸಂದರ್ಭದಲ್ಲಿ ಸಚಿವರಿಬ್ಬರು ಎಸ್ ಸಿಡಿಸಿಸಿ ಬ್ಯಾಂಕಿನ ಕಾರ್ಯಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರಕುಮಾರ್ ಅವರು ಸಚಿವರಿಬ್ಬರನ್ನು ಗೌರವಪೂರ್ವಕವಾಗಿ ಸ್ವಾಗತಿಸಿ, ಬ್ಯಾಂಕಿನ ಪ್ರಗತಿಯ ಕುರಿತು ವಿವರಿಸಿದರು.ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಎಸ್ ಸಿಡಿಸಿಸಿ ಬ್ಯಾಂಕ್ ಸುಸಜ್ಜಿತ ಕಟ್ಟಡವನ್ನು ಹೊಂದಿದ್ದು , ಆಧುನಿಕ ತಂತ್ರಜ್ಞಾನದ ಮೂಲಕ 113 ಶಾಖೆಗಳಲ್ಲಿ ಗ್ರಾಹಕರಿಗೆ ಉತ್ಕೃಷ್ಟ ಸೇವೆಯನ್ನು ನೀಡುತ್ತಿದೆ. ಬ್ಯಾಂಕಿನ ಎಲ್ಲಾ ಶಾಖೆಗಳು ಕೋರ್ ಬ್ಯಾಂಕಿಂಗ್ ಸೌಲಭ್ಯದೊಂದಿಗೆ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಉತ್ತಮ ಸೇವೆಯನ್ನು ನೀಡುತ್ತಿದೆ. ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವ ಸ್ವಸಹಾಯ ಸಂಘಗಳ ಕಾರ್ಯ ನಿರ್ವಹಣೆಯಲ್ಲೂ ಬ್ಯಾಂಕ್ ಸಮರ್ಪಕವಾಗಿ ಕಾರ್ಯನಿರ್ವಹಿಸಿ ಸುಮಾರು 40000ಕ್ಕೂ ಹೆಚ್ಚು ನವೋದಯ ಸ್ವಸಹಾಯ ಸಂಘಗಳನ್ನು ಸಂಘಟಿಸಲಾಗಿದೆ. ಮಾತ್ರವಲ್ಲ ಮಂಗಳೂರು ಹಾಗೂ ಉಡುಪಿಯಲ್ಲಿ ಸುಸಜ್ಜಿತ ವಾಹನದಲ್ಲಿ ಮೊಬೈಲ್ ಬ್ಯಾಂಕಿಂಗ್ ಸೇವೆಯನ್ನು ಬ್ಯಾಂಕ್ ನೀಡುತ್ತಿದೆ ಎಂದು ಡಾ. ಎಂ. ಎನ್. ರಾಜೇಂದ್ರಕುಮಾರ್ ಬ್ಯಾಂಕಿನ ಕಾರ್ಯನಿರ್ವಹಣೆಯ ಕುರಿತು ವಿವರಿಸಿದರು

*ಸಚಿವರಿಗೆ ಸನ್ಮಾನ:-ಎಸ್ ಸಿಡಿಸಿಸಿ ಬ್ಯಾಂಕಿಗೆ ಮೊದಲ ಬಾರಿ ಆಗಮಿಸಿದ ಕರ್ನಾಟಕ ಸರಕಾರದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ಹಾಗೂ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರಾದ ಡಾ. ಎಂ. ಎ ಸಲೀಂ ಅವರನ್ನು ಬ್ಯಾಂಕ್ ವತಿಯಿಂದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಗೌರವಿಸಿದರು.

ಈ ಸಂದರ್ಭದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯರುಗಳಾದ ಐವನ್ ಡಿ' ಸೋಜ, ಮಂಜುನಾಥ ಭಂಡಾರಿ, ಬ್ಯಾಂಕಿನ ನಿರ್ದೇಶಕರು ಗಳಾದ ಶಶಿಕುಮಾರ್ ರೈ ಬಾಲ್ಯೋಟ್ಟು, ಸದಾಶಿವ ಉಳ್ಳಾಲ್, ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ನ ಟ್ರಸ್ಟಿ ಮೇಘರಾಜ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X