ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಎನ್‌ಐಎ ತನಿಖಾ ತಂಡ ಮಂಗಳೂರಿಗೆ ಆಗಮನ

ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ (ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ಮಂಗಳೂರಿಗೆ ಆಗಮಿಸಿರುವ ಬಗ್ಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಚಿತಪಡಿಸಿದ್ದಾರೆ.
ಕೆಲವು ದಿನಗಳ ಹಿಂದೆ ಈ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆ ಎನ್ಐಎ ತನಿಖೆಗೆ ವಹಿಸಿ ಆದೇಶ ಹೊರಡಿಸಿತ್ತು.
ಬೆಂಗಳೂರು ಎನ್ಐಎ ಘಟಕದ 10 ಮಂದಿ ಅಧಿಕಾರಿಗಳು ಮಂಗಳೂರಿಗೆ ಬಂದು, ಹತ್ಯೆ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಡಿವೈಎಸ್ಪಿ ಪವನ್ ಕುಮಾರ್ ನೇತೃತ್ವದಲ್ಲಿ ಇಬ್ಬರು ಇನ್ಸ್ ಪೆಕ್ಟರ್ ಮತ್ತು ಸಿಬ್ಬಂದಿ ಸಹಿತ ತಂಡ ಮಂಗಳೂರಿಗೆ ಬಂದಿದೆ. ಮಂಗಳೂರು ಸಿಸಿಬಿ ಮತ್ತು ಇತರ ಅಧಿಕಾರಿಗಳಿಂದಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.
Next Story





