ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಮಕ್ಕಳ ಹೃದ್ರೋಗಶಾಸ್ತ್ರ ಕಾರ್ಯಗಾರ

ಮಂಗಳೂರು: ದೇಶದಲ್ಲಿ ಇತ್ತೀಚಿಗೆ ಮಕ್ಕಳಲ್ಲಿ ಹೃದ್ರೋಗ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿದ್ದು, ಇದರ ಮಾಹಿತಿ, ಜಾಗೃತಿ, ಮುಂಜಾಗೃತ ಕ್ರಮ, ಆಧುನಿಕ ಚಿಕಿತ್ಸಾ ವಿಧಿವಿಧಾನಗಳ ಬಗ್ಗೆ ಈ ವೈದ್ಯಕೀಯ ಕಾರ್ಯಗಾರವನ್ನು ಆಯೋಜಿಸಲಾಗಿದೆ ಎಂದು ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷ ಡಾ. ಹಾಜಿ ಯು.ಕೆ. ಮೋನು ಮಾಹಿತಿ ನೀಡಿದ್ದಾರೆ.
ಕಣಚೂರು ವೈದ್ಯಕೀಯ ಶಿಕ್ಷಣ ಕಾಲೇಜಿನಲ್ಲಿ ಶಿಶು ಮತ್ತು ಮಕ್ಕಳ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ನಿರಂತರ ವೈದ್ಯಕೀಯ ಶಿಕ್ಷಣದ ಅಂಗವಾಗಿ ಎರಡು ದಿನಗಳ ಮಕ್ಕಳ ಹೃದ್ರೋಗ ಶಾಸ್ತ್ರ ಶಿಕ್ಷಣ, ಆರೈಕೆ, ಮತ್ತು ಚಿಕಿತ್ಸೆಯ ಬಗ್ಗೆ ಶನಿವಾರ ಕಾಲೇಜಿನ ಡ್ರೋಮ್ ಸಭಾಂಗಣದಲ್ಲಿ ಜರುಗಿದ ರಾಜ್ಯ ಮಟ್ಟದ ವೈದ್ಯಕೀಯ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಅಬ್ದುಲ್ ರಹಮಾನ್ ವೈದ್ಯರು ನಿರಂತರ ಅಧ್ಯಯನ, ಸಂಶೋಧನೆಯಲ್ಲಿ ತೊಡಗಿಕೊಂಡು ತಮ್ಮ ವೈದ್ಯಕೀಯ ಜ್ಞಾನವನ್ನು ವೃದ್ದಿಸಿ, ಜನಮನ್ನಣೆಗೆ ಪಾತ್ರರಾಗಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕೊಚ್ಚಿನ್ ನಗರ ಮೂಲದ ಡಾ. ಕೃಷ್ಣ ಕುಮಾರ್ ಹಾಗೂ ಬೆಂಗಳೂರು ನಗರ ಮೂಲದ ಡಾ. ಸೇಜಲ್ ಶಾರವರು ಹೃದ್ರೋಗ ಶಾಸ್ತ್ರ ಕ್ಷೇತ್ರಕ್ಕೆ ಸಲ್ಲಿಸಿದ ಅನುಪಮ ಸೇವೆ, ನೀಡಿದ ಅಮೂಲ್ಯ ಕೊಡುಗೆ ಮತ್ತು ಸಾಧಿಸಿದ ಅಮೋಘ ಸಾಧನೆಯನ್ನು ಪರಿಗಣಿಸಿ ಸನ್ಮಾನಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ. ಶಹನವಾಜ್ ಮಣಿಪಾಡಿಯವರು ಕಾರ್ಯಗಾರದ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು.
ವೇದಿಕೆಯಲ್ಲಿ ಕಣಚೂರು ವೈದ್ಯಕೀಯ ವಿಜ್ಞಾನ ಸಲಹಾ ಸಮಿತಿ ಸದಸ್ಯ ಡಾ. ಎಮ್.ವಿ. ಪ್ರಭು, ಮಕ್ಕಳ ಶಾಸ್ತ್ರ ವಿಭಾಗದ ಡಾ. ಶಂಶಾದ್ ಎ. ಖಾನ್, ಸಂಸ್ಥೆಯ ಆಡಳಿತ ಅಧಿಕಾರಿ ಡಾ. ರೋಹನ್ ಮೋನಿಸ್, ವೈದ್ಯಕೀಯ ಸಹ ಅಧೀಕ್ಷಕ ಡಾ. ಅಂಜನ್ ಕುಮಾರ್, ಕಾರ್ಯಗಾರದ ಸಲಹೆಗಾರರಾದ ಡಾ. ಪ್ರೇಮ್ ಆಳ್ವ ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ಡಾ. ಚೇತನ್ ತಾಂಡೆಲ್ ವಂದಿಸಿದರು.
ಈ ಕಾರ್ಯಗಾರದಲ್ಲಿ ಸುಮಾರು 150 ವೈದ್ಯಕೀಯ ಪ್ರತಿನಿಧಿಗಳು ಭಾಗವಹಿಸಿದ್ದರು. ಡಾ. ವರ್ಷ ಸ್ವಾಗತಿಸಿದರು ಮತ್ತು ಡಾ. ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು.







