Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೈಕಂಪಾಡಿಯಲ್ಲಿ ರಸ್ತೆಗೆ ಉರುಳಿದ ಮರ;...

ಬೈಕಂಪಾಡಿಯಲ್ಲಿ ರಸ್ತೆಗೆ ಉರುಳಿದ ಮರ; ತಪ್ಪಿದ ಅನಾಹುತ

ವಾರ್ತಾಭಾರತಿವಾರ್ತಾಭಾರತಿ15 Jun 2025 8:46 PM IST
share
ಬೈಕಂಪಾಡಿಯಲ್ಲಿ ರಸ್ತೆಗೆ ಉರುಳಿದ ಮರ; ತಪ್ಪಿದ ಅನಾಹುತ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿಯಲ್ಲಿ ಇಂದು ಸಂಜೆ ಮಳೆಯೊಂದಿಗೆ ಬೀಸಿದ ಗಾಳಿಗೆ ರಸ್ತೆಯ ಬದಿಯ ಮರವೊಂದು ಧರಶಾಹಿಯಾಗಿದ್ದು, ಸುಮಾರು 20 ನಿಮಿಷಗಳ ಕಾಲ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಸ್ಥಳೀಯರು ರಸ್ತೆಯ ಮೇಲೆ ಬಿದ್ದಿದ್ದ ಮರದ ಗೆಲ್ಲುಗಳನ್ನು ತುಂಡರಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಮರ ಉರುಳುವಾಗ ರಸ್ತೆಯಲ್ಲಿ ವಾಹನಗಳ ಸಂಚಾರ ಕಡಿಮೆ ಇದ್ದ ಕಾರಣ ಭಾರೀ ಅನಾಹುತ ತಪ್ಪಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಮನೆಗಳಿಗೆ ಹಾನಿ: ಮಳೆಯಿಂದಾಗಿ ಜಿಲ್ಲೆಯ ವಿವಿಧೆಡೆ ಹಲವು ಮನೆಗಳಿಗೆ ಹಾನಿ ಸಂಭವಿಸಿದೆ. ಬಜಾಲ್ ಪಕ್ಕಲಡ್ಕ ಎಂಬಲ್ಲಿ ಕೊಟ್ಟಿಗೆ ಮೇಲೆ ಮರ ಬಿದ್ದು ಹಾನಿಯಾಗಿದೆ. ನಗರದ ಬಟ್ಟಗುಡ್ಡೆಯಿಂದ ಸರ್ಕ್ಯೂಟ್ ಹೌಸ್ ಕಡೆ ಹೋಗುವ ರಸ್ತೆ ಪಕ್ಕದ ಧರೆ ಕುಸಿದಿದೆ. ಇಲ್ಲಿ ನಾಲ್ಕೈದು ವರ್ಷಗಳ ಹಿಂದೆ ಧರೆ ಕುಸಿದಿದ್ದಾಗ ಜಲ್ಲಿ ತುಂಬಿದ ಚೀಲಗಳನ್ನಿರಿಸಿ ತಾತ್ಕಾಲಿಕವಾಗಿ ವ್ಯವಸ್ಥೆ ಮಾಡಲಾಗಿತ್ತು. ಅದರ ಬಳಿಕ ಶಾಶ್ವತ ಕಾಮಗಾರಿ ನಡೆಸದೆ ಇದ್ದುದರಿಂದ ಮತ್ತೆ ಕುಸಿದಿದೆ ಎಂದು ತಿಳಿದು ಬಂದಿದೆ.

ಮತ್ತೆ ಮನೆಗಳಿಗೆ ನುಗ್ಗಿದ ನೀರು: ನಿರಂತರ ಮಳೆಯಿಂದ ಬೆಳಗ್ಗೆ ನಗರದ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿತ್ತು. ಮಾಲೆಮಾರ್‌ನಲ್ಲಿ ಅನೇಕ ಮನೆಗಳು ಜಲಾವೃತಗೊಂಡಿದ್ದರೆ, ಭಗವತಿನಗರ, ಅತ್ತಾವರ, ಪಾಂಡೇಶ್ವರದಲ್ಲೂ ಮನೆಗಳಿಗೆ ನೀರು ನುಗ್ಗಿದೆ ಎಂದು ತಿಳಿದುಬಂದಿದೆ. ಮಳೆ ಕಡಿಮೆಯಾದ ಬಳಿಕ ನೀರು ಇಳಿದಿದೆ. ರವಿವಾರ ಮಧ್ಯಾಹ್ನದಿಂದ ಸಂಜೆವರೆಗೆ ಬಿಡುವು ನೀಡಿದ ಮಳೆ ಬಳಿಕ ಮತ್ತೆ ಆರಂಭಗೊಂಡಿತ್ತು.

ಮಂಗಳೂರಿನಲ್ಲಿ ಶನಿವಾರದ ಕೃತಕ ಪ್ರವಾಹ ಬಳಿಕ ಹತೋಟಿಗೆ ಬಂದಿದ್ದರೂ, ರವಿವಾರ ಬೆಳಗ್ಗೆ ತಗ್ಗು ಪ್ರದೇಶದ ಕೆಲವು ಮನೆಗಳಿಗೆ ನೀರು ನುಗ್ಗಿತ್ತು. ಜಿಲ್ಲಾದ್ಯಂತ ಶನಿವಾರ ರಾತ್ರಿಯಿಡೀ ನಿರಂತರ ಮಳೆಯಾಗಿದ್ದರೂ ಮಳೆಯ ತೀವ್ರತೆ ಕೊಂಚ ಕಡಿಮೆ ಇದ್ದುದರಿಂದ ಆತಂಕದ ಪರಿಸ್ಥಿತಿ ಉದ್ಭವಿಸಿಲ್ಲ.

ಗ್ರಾಮೀಣ ಪ್ರದೇಶದ ಕೆಲವೆಡೆ ಕೃಷಿ ಜಮೀನು, ತೋಟಗಳಿಗೆ ನೀರು ನುಗ್ಗಿದೆ. ಸೋಮವಾರವೂ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಅಪಾರ್ಟ್‌ಮೆಂಟ್ ತಡೆಗೋಡೆ ಕುಸಿತ

ಮಳೆಯ ಅಬ್ಬರಕ್ಕೆ ಮಂಗಳೂರಿನ ಕದ್ರಿ ಶಿವಭಾಗ್ ಬಳಿಯ ಅಪಾರ್ಟ್‌ಮೆಂಟ್ ಹಿಂಬದಿಯ ಬೃಹತ್ ಕಾಂಕ್ರಿಟ್ ತಡೆಗೋಡೆ ಕುಸಿದು ಅಪಾರ್ಟ್‌ಮೆಂಟ್‌ನ 2 ಮನೆಗಳಿಗೆ ಹಾನಿಯಾಗಿದೆ. ಬೃಹತ್ ಗುಡ್ಡಕ್ಕೆ ಅಡ್ಡಲಾಗಿ ಕಾಂಕ್ರೀಟಿನಿಂದ ಭಾರೀ ತಡೆಗೋಡೆ ನಿರ್ಮಿಸಲಾಗಿತ್ತು. ನಿರಂತರ ಮಳೆಯಿಂದ ಗುಡ್ಡ ಶಿಥಿಲಗೊಂಡು ತಡೆಗೋಡೆಯನ್ನು ಸೀಳಿ ಭಾರೀ ಪ್ರಮಾಣದ ಕಲ್ಲು- ಮಣ್ಣು ಅಪಾರ್ಟ್‌ಮೆಂಟ್ ನೆಲ ಅಂತಸ್ತಿಗೆ ನುಗ್ಗಿತ್ತು. ಈ ವೇಳೆ ಎರಡು ಫ್ಲ್ಯಾಟ್‌ಗಳ ಬಾಲ್ಕನಿ, ಕಿಟಕಿಯಿಂದ ಭಾರೀ ಮಣ್ಣು ಮನೆಯೊಳಗೆ ಹೋಗಿದೆ. ಎಸಿ ಸೇರಿದಂತೆ ಗೃಹೋಪಯೋಗಿ ವಸ್ತುಗಳಿಗೆ ಹಾನಿಯಾಗಿದೆ. ನೆಲ ಅಂತಸ್ತಿನ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ ಕಾರಿಗೂ ಹಾನಿ ಸಂಭವಿಸಿದೆ.

ಈ ಗುಡ್ಡ ಮತ್ತಷ್ಟು ಕುಸಿಯುವ ಆತಂಕ ಸೃಷ್ಟಿಯಾಗಿದೆ. ತಡೆಗೋಡೆಯ ಮೇಲ್ಭಾಗದಲ್ಲಿರುವ ಮನೆ ಕೂಡ ಅಪಾಯಕ್ಕೆ ಸಿಲುಕಿದೆ ಎಂದು ತಿಳಿದುಬಂದಿದೆ.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X