ಸುರತ್ಕಲ್: ನಿಯಂತ್ರಣ ಕಳೆದುಕೊಂಡು ಎನ್‌ಐಟಿಕೆ ಮೇಲ್ಸೇತುವೆಯಿಂದ ಬಿದ್ದ ಕಾರು

ಸುರತ್ಕಲ್: ಭಾರೀ ಮಳೆಗುತ್ತಿದ್ದ ಪರಿಣಾಮ ಕಾರೊಂದು ನಿಯಂತ್ರಣ ಕಳೆದುಕೊಂಡು ಎನ್‌ಐಟಿಕೆ ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಘಟನೆ ರವಿವಾರ ಮಧ್ಯಾಹ್ನ ವರದಿಯಾಗಿದೆ.
ಮಂಗಳೂರಿನಿಂದ ಉಡುಪಿ ಕಡೆ ತೆರಳುತ್ತಿದ್ದ ಕಾರನ್ನು ಕುಂದಾಪುರ ನಿವಾಸಿ ಪ್ರತ್ಯಕ್ಷ ಎಂಬವರು ಚಲಾಯಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅಪಘಾತದಿಂದ ಅವರಿಗೆ ಯಾವುದೇ ಪ್ರಾಣಾಪಾರವಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರತ್ಯಕ್ಷ ಅವರು ಕೆಲಸದ ನಿಮಿತ್ತ ಮಂಗಳೂರಿಗೆ ಹೋಗಿ ಕುಂದಾಫುರಕ್ಕೆ ಹಿಂದಿರುಗುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 66ರ ಎನ್‌ಐಟಿಕೆ ಬಳಿ ಏಕಾಏಕಿ ಬ್ರೇಕ್ ಹಾಕಿದ್ದಾರೆ. ಇದರಿಂದ ನಿಯಂತ್ರಣ ಕಳೆದುಕೊಂಡ ಕಾರು ಮೇಲ್ಸೇತುವೆಯಿಂದ ಕೆಳಗಿದ್ದ ಸರ್ವಿಸ್ ರಸ್ತೆಗೆ ಹಾರಿ ಮಗುಚಿ ಬಿದ್ದಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Next Story





