ಗಾಂಜಾ ಸೇವನೆ ಪ್ರಕರಣ: ಆರೋಪಿ ಸೆರೆ

ಮಂಗಳೂರು: ನಗರದ ಪಡೀಲ್ ಬಸ್ ತಂಗುದಾಣದ ಬಳಿ ಗಾಂಜಾ ಸೇವೆ ಮಾಡಿದ ಆರೋಪದ ಮೇರೆಗೆ ಅಬ್ದುಲ್ ತೌಸೀಫ್ ಎಂಬಾತನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಿಚಾರಣೆ ವೇಳೆ ತಾನು ಮಾದಕ ವಸ್ತು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದು, ವೈದ್ಯಕೀಯ ತಪಾಸಣೆಗೆ ಒಳಪಡಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





