Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೃತಕ ನೆರೆ ಆವೃತವಾಗುವ ಪಂಪ್‌ವೆಲ್...

ಕೃತಕ ನೆರೆ ಆವೃತವಾಗುವ ಪಂಪ್‌ವೆಲ್ ವೃತ್ತದಲ್ಲಿ ದ.ಕ. ಡಿಸಿಯಿಂದ ಪರಿಸ್ಥಿತಿಯ ಅವಲೋಕನ

ವಾರ್ತಾಭಾರತಿವಾರ್ತಾಭಾರತಿ17 Jun 2025 7:07 PM IST
share
ಕೃತಕ ನೆರೆ ಆವೃತವಾಗುವ ಪಂಪ್‌ವೆಲ್ ವೃತ್ತದಲ್ಲಿ ದ.ಕ. ಡಿಸಿಯಿಂದ ಪರಿಸ್ಥಿತಿಯ ಅವಲೋಕನ

ಮಂಗಳೂರು: ಪಂಪುವೆಲ್ ಮೇಲ್ಸೇತುವೆ ನಿರ್ಮಾಣ ಸಂದರ್ಭ ಸಂಬಂಧಿಸಿದ ಇಂಜಿನಿಯರ್ ಗಳು ಮಾಡಿಕೊಂಡಿರುವ ಎಡವಟ್ಟು ಗಳಿಂದ ಸ್ಥಳೀಯ ನಿವಾಸಿಗಳು ಪ್ರತಿ ವರ್ಷದ ಮಳೆಗಾಲದಲ್ಲಿ ಸಮಸ್ಯೆ ಎದುರಿಸುವಂತಾಗಿದೆ.

ಪಂಪ್‌ವೆಲ್‌ ಮೇಲ್ಸೇತುವೆಯ ಅಡಿಭಾಗದಲ್ಲಿರುವ ಪ್ರದೇಶಕ್ಕೆ ಅಷ್ಟ ದಿಕ್ಕುಗಳ ನೀರು ಧುಮ್ಮಿಕ್ಕಿ ಬರುತ್ತದೆ. ಕಂಕನಾಡಿ ಹಳೇ ರಸ್ತೆ, ಬೈಪಾಸ್ ರಸ್ತೆ, ನಂತೂರು ರಸ್ತೆ, ಬೆಂಗಳೂರು ರಸ್ತೆ ಹಾಗೂ ತೊಕ್ಕೊಟ್ಟು ರಸ್ತೆಗಳೆಲ್ಲ - ಪಂಪುವೆಲ್ ವ್ರತ್ತದಿಂದ ಮೇಲಿವೆ. ಅಲ್ಲಿಂದ ಹರಿದು ಬರುವ ನೀರು ಹೊರಗೆ ಹರಿದು ಹೋಗುವ ಚರಂಡಿ ಸಾಮರ್ಥ್ಯ ಕಡಿಮೆ ಇದೆ. ಇಲ್ಲಿ ಚರಂಡಿ ಇನ್ನಷ್ಟು ಆಳ ಮಾಡಿದರೆ ಸಮಸ್ಯೆ ಇನ್ನಷ್ಟು ಬಿಗಡಾಯಿಸುತ್ತದೆ.

ಚರಂಡಿ ಅಗಲಗೊಳಿಸಿದರೆ ಅನುಕೂಲವಾಗುತ್ತದೆ. ಅಗಲಗೊಳಿಸಲು ಸ್ಥಳಾವಕಾಶದ ಕೊರತೆ ಇದೆ. ನೆರೆ ನೀರು ಸುಮಾರು 3.5 ಕಿ.ಮೀ ಹರಿದು ನದಿ ಸೇರುತ್ತದೆ. ಪಂಪ್‌ವೆಲ್ ಸಂಪರ್ಕಿಸುವ ರಸ್ತೆಯ ಉಭಯ ಕಡೆಗಳಲ್ಲಿ ದುಬಾರಿ ಬಹು ಅಂತಸ್ತಿನ ಕಟ್ಟಡಗಳು ಇವೆ. ಇಷ್ಟು ದೂರ ಸ್ಥಳ ಸ್ವಾಧೀನಗೊಳಿಸಿ ಅಗತ್ಯ ಚರಂಡಿ ನಿರ್ಮಾಣ ಅತ್ಯಂತ ದುಬಾರಿಯಾಗಲಿದೆ.

ಮಳೆಯ ನೀರು ಹರಿದು ಹೋಗಿ ನದಿ ಸೇರುವ ಪ್ರತಿ ಡ್ರೈನೇಜ್ ಚರಂಡಿಯ ಒಳಗೆ; ವಿವಿಧ ಇಲಾಖೆಗಳ ಬಹಳ ಕೇಬಲ್ಗಳು ಹಾಗೂ ಪೈಪ್ಗಳು ಇದ್ದು ಇವುಗಳಿಂದಾಗಿಯೇ ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗುತ್ತಿಲ್ಲ. ಮಳೆ ನೀರಿನ ಜೊತೆ ಕಸಕಡ್ಡಿಗಳು, ಪ್ಲಾಸ್ಟಿಕ್ ಪೇಪರ್ ಹಾಗೂ ಇತರ ವಸ್ತುಗಳು ಬಂದು ಚರಂಡಿಯ ಒಳಗಿರುವ ಈ ಪೈಪ್ ಹಾಗೂ ಕೇಬಲ್ ಗಳಿಗೆ ತಾಗಿನಿಂತು ನೀರು ಶಾಶ್ವತವಾಗಿ ಸರಾಗವಾಗಿ ಹರಿದು ಹೋಗಲು ಅಡ್ಡಿಯನ್ನುಂಟು ಮಾಡುತ್ತವೆ. ಆದುದರಿಂದ ಸಂಬಂಧ ಪಟ್ಟವರಿಗೆ ಪತ್ರವನ್ನು ನೀಡಿ ಮೂರು ದಿನಗಳೊಳಗೆ ಚರಂಡಿ ಒಳಗಿನ ಕೇಬಲ್ ಹಾಗೂ ಪೈಪುಗಳನ್ನು ಬೇರೆ ರಹದಾರಿಯ ಮೂಲಕ ಹಾಕಲು ತಿಳಿಸಿ ಎಂದು ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ಸೂಚಿಸಿದರು.

ನಂತೂರಿನಿಂದ ಬಂದ ರಸ್ತೆ ಪಂಪುವೆಲ್ ಬಂದು ಮುಟ್ಟುವಲ್ಲಿ ಇರುವ ಸೇತುವೆಯು ತೀರಾ ಕೆಳಮಟ್ಟ ದಲ್ಲಿದ್ದು ಮಳೆ ನೀರು ಸರಾಗವಾಗಿ ಹೋಗಲು ಅಡ್ಡಿಯನ್ನುಂಟುಮಾಡುತ್ತದೆ ಈ ಸೇತುವೆಯ ಎತ್ತರವನ್ನು ಹೆಚ್ಚಿಸಬೇಕು ಎಂಬ ಅಭಿಪ್ರಾಯವೂ ಕೇಳಿ ಬಂತು.

ನಾಲ್ಕೂ ದಿಕ್ಕುಗಳಿಂದ ಪಂಪುವೆಲ್ ವ್ರತ್ತಕ್ಕೆ ಹರಿದು ಬರುವ ಮಳೆ ನೀರನ್ನು ಅರ್ಧದಲ್ಲೇ ಪ್ರತೇಕಿಸಲು ಸಾಧ್ಯವೇ ಎಂದು ತಜ್ಞರ ಅಭಿಪ್ರಾಯ ಪಡೆದು ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಹೇಳಿದ್ದಾರೆ.

ಜೂನ್ 17 ರಂದು, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ರವಿಚಂದ್ರ ನಾಯಕ್, ಸ್ಥಳೀಯ ಮಾಜಿ ಕೋರ್ಪರೇಟರ್ ಸಂದೀಪ್ ಗರೋಡಿ, ಮಂಗಳೂರು ಮಹಾನಗರ ಪಾಲಿಕೆಯ ಸೂಪರಿಂಟೆಂಡೆಂಟ್ ಇಂಜಿನಿಯರ್ ನರೇಶ್ ಶೆಣೈ, ಉಪ ಆಯುಕ್ತರು ಅಭಿವೃದ್ಧಿ, ಸಹಾಯಕ ಕಾರ್ಯ ಪಾಲ ಅಭಿಯಂತರದ ರಾಜೇಶ್ ಕುಮಾರ್ ಮತ್ತು ಶಿವಲಿಂಗಪ್ಪ, ರಸ್ತೆ ಸಾರಿಗೆ ಸಲಹಾ ಸಮಿತಿಯ ಸದಸ್ಯರಾದ ಗೋಪಾಲಕೃಷ್ಣ ಭಟ್, ಸಮಾಜ ಸೇವಕ ಅಮ್ರುತ್ ಪ್ರಭು ಗಂಜೀಮಠ ಇವರ ಜೊತೆ ಜಿಲ್ಲಾಧಿಕಾರಿ ಪರಿಸ್ಥಿತಿಯ ಅವಲೋಕನ ನಡೆಸಿದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X