ಉಪ್ಪಿನಂಗಡಿ| ಕಾರು - ಟ್ಯಾಕ್ಟರ್ ಢಿಕ್ಕಿ: ಓರ್ವನಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಕಾರು ಹಾಗೂ ಟ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಸಮೀಪದ ಪರಕ್ಕಳ ಸೇತುವೆ ಬಳಿ ಜೂ.17ರಂದು ಬೆಳಗ್ಗೆ ನಡೆದಿದೆ.
ಬೆಂಗಳೂರು ಬೊಮ್ಮನಹಳ್ಳಿ ಬಿಲೇಕಹಳ್ಳಿ ನಿವಾಸಿ ವೆಂಕಟೇಶ್(30) ಗಾಯಗೊಂಡವರಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರು ಮಗು ಸಹಿತ ಇಬ್ಬರೊಂದಿಗೆ ಬೆಂಗಳೂರಿನಿಂದ ಕಾರಿನಲ್ಲಿ ಧರ್ಮಸ್ಥಳಕ್ಕೆ ಬರುತ್ತಿದ್ದ ವೇಳೆ ಪರಕ್ಕಳ ಸೇತುವೆ ಬಳಿ ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಗುತ್ತಿಗೆ ಕಂಪೆನಿಗೆ ಸೇರಿದ ಟ್ಯಾಕ್ಟರ್‍ಗೆ ಡಿಕ್ಕಿಯಾಗಿದೆ ಎಂದು ವರದಿಯಾಗಿದೆ.
ಘಟನೆಯಲ್ಲಿ ವೆಂಕಟೇಶ್ ಗಂಭೀರ ಗಾಯಗೊಂಡಿದ್ದು, ಉಳಿದವರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story





