ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ

ಮಂಗಳೂರು, ಜೂ.18: ಪ್ರಸಕ್ತ ಸಾಲಿನ 2025-26ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ((IIT, IIM, IIIT, NIT, IISER, AIIMS, NLU, INI & IuSLA) ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಕೋರ್ಸ್ ಅವಧಿಯಲ್ಲಿ ಒಂದು ಬಾರಿಗೆ 2 ಲಕ್ಷ ರೂ.ಗಳ ಪ್ರೋತ್ಸಾಹ ಧನಕ್ಕೆ ಅರ್ಜಿಯನ್ನು ಅಹ್ವಾನಿಸಲಾಗಿದೆ.
ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/ ಮೂಲಕ ಆನ್‌ಲೈನ್‌ನಲ್ಲಿ ಸೆಪ್ಟಂಬರ್ 30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ https://dom.karnataka.gov.in ನ್ನು ಗಮನಿಸಬಹುದು ಅಥವಾ ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story





