Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ...

ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಎಂಡೋ ಪಾಲನಾ ಕೇಂದ್ರದ ನೂತನ ಕಟ್ಟಡ ವೀಕ್ಷಣೆ - ಅಹವಾಲು ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ18 Jun 2025 10:34 PM IST
share
ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಸಳ್ಯ: ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ,. ತಾಲೂಕು ಆರೋಗ್ಯಾಧಿಕಾರಿ ಡಾ.ತ್ರಿಮೂರ್ತಿ ಹಾಗೂ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಮಂಜುನಾಥ್ ರವರೊಂದಿಗೆ ಆಸ್ಪತ್ರೆಯ ಕುಂದುಕೊರತೆಗಳ ಬಗ್ಗೆ ಸಚಿವರು ಮಾಹಿತಿ ಪಡೆದರು. ಬಳಿಕ ನಂತರ ನೂತನವಾಗಿ ನಿರ್ಮಾಣವಾದ ಎಂಡೋ ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು. ಬಳಿಕ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ತಹಸೀಲ್ದಾರ್ ಮಂಜುಳಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ, ಮುಖಂಡರಾದ ಹರೀಶ್ ಕುಮಾರ್ ಕೆ, ಪಿ.ಸಿ.ಜಯರಾಮ, ರಾಧಾಕೃಷ್ಣ ಬೊಳ್ಳೂರು, ಸುಳ್ಯ ಸೂಡ ಅಧ್ಯಕ್ಷ ಕೆ.ಎಂ.ಮುಸ್ತಾಫ, ಟಿ.ಎಂ.ಶಹೀದ್, ಸರಸ್ವತಿ ಕಾಮತ್, ಜಿ.ಕೃಷ್ಣಪ್ಪ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಂಜಿ, ಅನಿಲ್ ರೈ ಚಾವಡಿಬಾಗಿಲು, ಶಾಹುಲ್ ಹಮೀದ್ ಕುತ್ತಮೊಟ್ಟೆ, ಶ್ರೀಮತಿ ರಾಜೀವಿ ಆರ್.ರೈ, ಪ್ರವೀಣ ರೈ ಮರುವಂಜ, ಶಕುಂತಳಾ ನಾಗರಾಜ್, ಅನುಸೂಯ ಪೆರುವಾಜೆ, ಅಶೋಕ್ ನೆಕ್ರಾಜೆ,ಚಂದ್ರಾ ಕೋಲ್ಚಾರ್, ಚಂದ್ರಶೇಖರ ಪನ್ನೆ, ಮಣಿಕಂಠ ಕಲ್ಲೋಣಿ, ಸಚಿನ್ ರಾಜ್ ಶೆಟ್ಟಿ ಪೆರುವಾಜೆ, ಪ್ರಶಾಂತ್ ರೈ ಮರುವಂಜ, ಪ್ರೇಮ್ ಬೆಳ್ಳಾರೆ, ವಿಶ್ವನಾಥ ರೈ ತಡಎಂಡೋ ಪಾಲನಾ ಕೇಂದ್ರದ ನೂತನ ಕಟ್ಟಡ ವೀಕ್ಷಣೆ - ಅಹವಾಲು ಸ್ವೀಕಾರಗಜೆ, ಆನಂದ ಬೆಳ್ಳಾರೆ, ಶಾಫಿ ಕುತ್ತಮೊಟ್ಟೆ, ಅಬ್ದುಲ್ ಗಫೂರ್, ಶರೀಫ್ ಭಾರತ್ , ಗ್ರಾ.ಪಂ.ಪಿಡಿಒ ಪ್ರವೀಣ್ ಸಿ.ವಿ. ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ತಾಲೂಕು ಆಸ್ಪತ್ರೆಗಳಿಗೆ ಪ್ಲಾಸ್ಮ ಸ್ಟೋರೇಜ್ ಸೆಂಟರ್

ತಾಲೂಕು ಆಸ್ಪತ್ರೆಗಳಲ್ಲಿ ಈಗಾಗಲೇ ಬ್ಲಡ್ ಸ್ಟೋರೇಜ್ ವ್ಯವಸ್ಥೆ ಇದೆ. ಅದೇ ರೀತಿ ಗರ್ಭಿಣಿಯರಿಗೆ ಒದಗಿಸಲು ರಕ್ತದ ಒಂದು ಘಟಕವಾದ ಪ್ಲಾಸ್ಮ ಬೇಕಾಗುತ್ತದೆ. ಆ ನಿಟ್ಟಿನಲ್ಲಿ ರಾಜ್ಯದ 144 ತಾಲೂಕು ಆಸ್ಪತ್ರೆಗಳಲ್ಲಿ ಪ್ಲಾಸ್ಮ ಸ್ಟೋರೇಜ್ ಸೆಂಟರ್ ಒದಗಿಸಲಾಗುವುದು. ಇದಕ್ಕೆ ಟೆಂಡರ್ ಪ್ರಕ್ರಿಯೆ ಹಂತ ದಲ್ಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಅವರು ಬುಧವಾರ ಸುಳ್ಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ತಾಲೂಕು ಆಸ್ಪತ್ರೆಗಳಲ್ಲಿ ಪ್ಲಾಸ್ಮ ಸ್ಟೋರೇಜ್ ಮಾಡಿಕೊಳ್ಳುವುದರಿಂದ ತುರ್ತು ಸಂದರ್ಭದಲ್ಲಿ ಪ್ರಯೋಜನಕ್ಕೆ ಬರುತ್ತದೆ ಎಂದರು. ಸುಳ್ಯ ಆಸ್ಪತ್ರೆಯಲ್ಲಿ ಬ್ಲಡ್ ಬ್ಯಾಂಕ್ ಆರಂಭಿಸಲು ಈಗಾಗಲೇ ಬೇರೆ ಸಂಸ್ಥೆಯ ಸಹಯೋಗದೊಂದಿಗೆ ಮಾತು ಕತೆ ಆರಂಭಿಸಿದ್ದಾರೆ. ಅದಕ್ಕೂ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ. ಸುಳ್ಯ ಆಸ್ಪತ್ರೆಯಲ್ಲಿ ವಿವಿಧ ಸವಲತ್ತು, ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು. ಸುಳ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ ಜಾಸ್ತಿ ಇರುವುದು ಗಮನಕ್ಕೆ ಬಂದಿದೆ, ಈ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದರು

ಸಚಿವರ ಮುಂದೆ ಬೇಸರ ಹೊರ ಹಾಕಿದ ನ.ಪಂ. ಅಧ್ಯಕ್ಷರು:

ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನ.ಪಂ.ನಿಂದ ಹೊರ ಬರುತ್ತಿದ್ದಂತೆ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಸುಳ್ಯ ನಗರ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಎ.ನೀರಬಿದಿರೆ ಬೇಸರ ಹೊರ ಹಾಕಿ, ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ಇತ್ತೀಚೆಗೆ ನಗರ ಪಂಚಾಯಿತಿ ವತಿಯಿಂದ ಗೋವಾಕ್ಕೆ ಅಧ್ಯಯನ ಪ್ರವಾಸಕ್ಕೆ ಹೋಗಿ, ತ್ಯಾಜ್ಯ ನಿರ್ವಹಣಾ ಘಟಕದ ಬಗ್ಗೆ ಮಾಹಿತಿ ಪಡೆದಿದ್ದೇವೆ. ಅದರಂತೆ ಸುಳ್ಯದಲ್ಲೂ ಘಟಕ ಮಾಡಬಹುದೇ ಎಂಬ ಬಗ್ಗೆಯೂ ಮಾಹಿತಿ ಪಡೆದಿದ್ದೇವೆ. ಆದರೆ ಇತ್ತೀಚೆಗೆ ಸುಳ್ಯ ತಾಲೂಕು ಪಂಚಾಯಿತಿಯ ಕೆಡಿಪಿ ಸಭೆಯಲ್ಲಿ ಗೋವಾಕ್ಕೆ ಅಧ್ಯಯನ ಪ್ರವಾಸಕ್ಕೆ ತೆರಳಿರುವುದನ್ನು ಬೇರೆ ರೀತಿಯಲ್ಲಿ ಪ್ರಚಾರ ಮಾಡಿದ್ದು, ಸಭೆಯಲ್ಲೂ ಚರ್ಚಿಸಿದ್ದಾರೆ. ಇದು ಸರಿಯಲ್ಲ ಎಂದರು. ಈ ವೇಳೆ ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ವ್ಯಕ್ತಿಯೂ (ಕಾಂಗ್ರೆಸ್ ಮುಖಂಡ) ಅಲ್ಲಿದ್ದು, ನ.ಪಂ. ಸದಸ್ಯರು ಸಚಿವರ ಮುಂದೆಯೇ ಆ ವ್ಯಕ್ತಿಯ ವಿರುದ್ಧ ಅಸಮಾಧಾನ, ಆಕ್ರೋಶ ಹೊರ ಹಾಕಿದರು. ಸಚಿವರ ಬಳಿ ನೋವು ತೋಡಿಕೊಂಡ ಅಧ್ಯಕ್ಷರು, ಇದಕ್ಕೆ ಸೂಕ್ತ ರೀತಿಯಲ್ಲಿ ನ್ಯಾಯ ಪಡೆದುಕೊಳ್ಳಲಾಗುವುದು ಎಂದರು. ದಿನೇಶ್ ಗುಂಡೂರಾವ್ ಅವರು ಅಧ್ಯಕ್ಷರನ್ನು ಸಮಾಧಾನಿಸಿ, ಯಾರೇ ಆಗಲಿ ವಿನಾಃ ಕಾರಣ ಇನ್ನೊಬ್ಬರ ಬಗ್ಗೆ ಈ ರೀತಿ ಅಪಪ್ರಚಾರ ಮಾಡಬೇಡಿ ಎಂದರು.

ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಬ್ಲಾಕ್ ಪಬ್ಲಿಕ್ ಹೆಲ್ತ್ ಲ್ಯಾಬ್ ಮತ್ತು ನೂತನ ಶವಗಾರ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಉದ್ಘಾಟಿಸಿದರು.

55 ಲಕ್ಷದ ಬ್ಲಾಕ್ ಪಬ್ಲಿಕ್ ಹೆಲ್ತ್ ಲ್ಯಾಬ್, 32 ಲಕ್ಷದಲ್ಲಿ ಐಸೋಲೇಷನ್ ವಾರ್ಡ್, 1.92 ಕೋಟಿ ವೆಚ್ಚದಲ್ಲಿ ಮಾಡಲಾದ ವಿವಿಧ ಕಾಮಗಾರಿಗಳಾದ ನೂತನ ಶವಾಗಾರ, ಹೊರ ರೋಗಿ ವಿಭಾಗದ ನವೀಕರಣ, ಆಸ್ಪತ್ರೆಯ ನವೀಕರಣ, ಡಯಾಲಿಸಿಸ್ ಕೇಂದ್ರದ ನವೀಕರಣ ಕಾಮಗಾರಿಗಳನ್ನು ಅವರು ಉದ್ಘಾಟಿಸಿದರು.

ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಸಚಿವರು ಆಸ್ಪತ್ರೆಯ ಕೆಲಸ ಕಾರ್ಯಗಳ ಪರೀಶೀಲನೆ ನಡೆಸಿದರು. ಐಸಿಯು, ಡಯಾಲಿಸಿಸ್ ಕೇಂದ್ರ, ಐಸೋಲೇಷನ್ ವಾರ್ಡ್, ಲ್ಯಾಬ್‍ಗಳು ಸೇರಿದಂತೆ ಅಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಕೆಲಸ ಕಾರ್ಯಗಳ ಬಗ್ಗೆ ಅವರು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ನ.ಪಂ.ಅಧ್ಯಕ್ಷೆ ಶಶಿಕಲಾ ಎ., ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಹರೀಶ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಪುತ್ತೂರು ಸಹಾಯಕ ಕಮೀಷನರ್ ಸ್ಟೆಲ್ಲಾ ವರ್ಗೀಸ್, ತಹಸೀಲ್ದಾರ್ ಮಂಜುಳಾ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಜಿಲ್ಲಾ ಆರೋಗ್ಯಾಧಿಕಾರಿ ಹೆಚ್.ಆರ್.ತಿಮ್ಮಯ್ಯ, ತಾಲೂಕು ಆರೋಗ್ಯಾಧಿಕಾರಿ ತ್ರಿಮೂರ್ತಿ, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಕರುಣಾಕರ ಕೆ.ವಿ, ಮುಖಂಡರಾದ ಧನಂಜಯ ಅಡ್ಪಂಗಾಯ, ಟಿ.ಎಂ.ಶಹೀದ್ ತೆಕ್ಕಿಲ್, ಜಿ.ಕೃಷ್ಣಪ್ಪ, ಪಿ.ಸಿ.ಜಯರಾಮ, ರಾಧಾಕೃಷ್ಣ ಬೊಳ್ಳೂರು, ನಿತ್ಯಾನಂದ ಮುಂಡೋಡಿ, ಪಿ.ಎಸ್.ಗಂಗಾಧರ, ಗೀತಾ ಕೋಲ್ಚಾರ್, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫ, ಸರಸ್ವತಿ ಕಾಮತ್, ಬೆಟ್ಟ ಜಯರಾಮ ಭಟ್, ಇಕ್ಬಾಲ್ ಎಲಿಮಲೆ, ಸೋಮಶೇಖರ ಕೊಯಿಂಗಾಜೆ, ರಾಧಾಕೃಷ್ಣ ಪರಿವಾರಕಾನ, ಶಹೀದ್ ಪಾರೆ, ಜಿ.ಕೆ.ಹಮೀದ್, ಕೆ.ಗೋಕುಲ್‍ದಾಸ್, ಮಹಮ್ಮದ್ ಕುಂಞಿ ಗೂನಡ್ಕ, ಧರ್ಮಪಾಲ ಕೊಯಿಂಗಾಜೆ, ರಾಧಾಕೃಷ್ಣ ಪರಿವಾರಕಾನ, ರಹೀಂ ಬೀಜದಕಟ್ಟೆ, ರಾಜು ಪಂಡಿತ್, ಭವಾನಿ ಶಂಕರ್ ಕಲ್ಮಡ್ಕ, ಶಾಫಿ ಕುತ್ತಮೊಟ್ಟೆ, ಚೇತನ್ ಕಜೆಗದ್ದೆ, ರಂಜಿತ್ ರೈ ಮೇನಾಲ, ಎಸ್.ಕೆ.ಹನೀಫ, ದಿನೇಶ್ ಅಂಬೆಕಲ್ಲು, ಫವಾಝ್ ಕನಕಮಜಲು ಮತ್ತಿತರರು ಉಪಸ್ಥಿತರಿದ್ದರು.

ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ:

ಈ ಸಂದರ್ಭದಲ್ಲಿ ಆಸ್ಪತ್ರೆಯ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಲಾಯಿತು. ಎಲುಬು ತಜ್ಞರು, ಜನರಲ್ ಸರ್ಜನ್, ತುರ್ತು ಚಿಕಿತ್ಸಾ ವೈದ್ಯರು, ಶುಶೂಷಕಾಧಿಕಾರಿಗಳು, ನೇತ್ರಾಧಿಕಾರಿ, ಕ್ಷಕಿರಣ ತಂತ್ರಜ್ಞರು, ಫಾರ್ಮಸಿಸ್ಟ್, ಪ್ರಯೋಗಶಾಲಾ ತಂತ್ರಜ್ಞರು, ಕಛೇರಿ ಸಹಾಯಕರು ಸೇರಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಬೇಕು, ಹೊಸ ನಗುಮಗು ಅಂಬಲೆನ್ಸ್ ನೀಡಬೇಕು, ಹೆಚ್ಚು ವಸತಿಗೃಹ ಒದಗಿಸಬೇಕು, ಸೆಕ್ಯೂರಿಟಿ ನೇಮಕ ಮಾಡಬೇಕು ಮತ್ತಿತರ ಬೇಡಿಕೆಗಳ ಮನವಿಯನ್ನು ಸಚಿವರಿಗೆ ಸಲ್ಲಿಸಲಾಯಿತು. ಅಲ್ಲದೇ ಹೊರ ಗುತ್ತಿಗೆ ನೌಕರರು, 108 ಅಂಬ್ಯುಲೆನ್ಸ್ ಸಿಬ್ಬಂದಿಗಳು ತಮ್ಮ ಸಮಸ್ಯೆಗಳ ಬಗ್ಗೆ ಮನವಿ ನೀಡಿದರು.

ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ನೂತನ ಕಚೇರಿ ಕಟ್ಟಡ ಉದ್ಘಾಟನೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಂಜಿನಿಯರಿಂಗ್ ಸುಳ್ಯ ಉಪ ವಿಭಾಗದ ನೂತನ ಕಛೇರಿ ಕಟ್ಟಡದ ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಬುಧವಾರ ನೆರವೇರಿಸಿದರು.

ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು. ನಗರ ಪಂಚಾಯಿತಿ ಅಧಕ್ಷೆ ಶಶಿಕಲಾ ಎ.,ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಹರೀಶ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಪುತ್ತೂರು ಸಹಾಯಕ ಕಮೀಷನರ್ ಸ್ಟೆಲ್ಲಾ ವರ್ಗೀಸ್, ತಹಸೀಲ್ದಾರ್ ಮಂಜುಳಾ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚೈತ್ರ ಎಸ್.ಆರ್, ಸಹಾಯಕ ಇಂಜಿನಿಯರ್ ಮಣಿಕಂಠನ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಜನಾರ್ಧನ್, ಮುಖಂಡರಾದ ಧನಂಜಯ ಅಡ್ಪಂಗಾಯ, ಟಿ.ಎಂ.ಶಹೀದ್ ತೆಕ್ಕಿಲ್, ಜಿ.ಕೃಷ್ಣಪ್ಪ, ಪಿ.ಸಿ.ಜಯರಾಮ, ರಾಧಾಕೃಷ್ಣ ಬೊಳ್ಳೂರು, ನಿತ್ಯಾನಂದ ಮುಂಡೋಡಿ, ಪಿ.ಎಸ್.ಗಂಗಾಧರ, ಗೀತಾ ಕೋಲ್ಚಾರ್, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫ, ಸರಸ್ವತಿ ಕಾಮತ್, ಬೆಟ್ಟ ಜಯರಾಮ ಭಟ್, ಇಕ್ಬಾಲ್ ಎಲಿಮಲೆ, ಸೋಮಶೇಖರ ಕೊಯಿಂಗಾಜೆ, ಜಿ.ಕೆ.ಹಮೀದ್, ಕೆ.ಗೋಕುಲ್‍ದಾಸ್, ಮಹಮ್ಮದ್ ಕುಂಞಿ ಗೂನಡ್ಕ, ಧರ್ಮಪಾಲ ಕೊಯಿಂಗಾಜೆ ಮೊದಲಾದವರು ಉಪಸ್ಥಿತರಿದ್ದರು.

ಹುದ್ದೆ ಭರ್ತಿಗೆ ಮನವಿ: ಈ ಸಂದರ್ಭದಲ್ಲಿ ಜನಪ್ರತಿನಿಧಿಗಳ ವತಿಯಿಂದ ಮತ್ತು ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಲಾಯಿತು. ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದಲ್ಲಿ ಮತ್ತು ಗ್ರಾಮೀಣ ಕುಡಿಯುವ ನೀರು ವಿಭಾಗಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಸಹಾಯಕ ಅಭಿಯಂತರರ ಹುದ್ದೆ, ಕಿರಿಯ ಅಭಿಯಂತರರ ಹುದ್ದೆ, ದ್ವಿತೀಯ ದರ್ಜೆ ಸಹಾಯಕರು ಹುದ್ದೆ ಖಾಲಿ ಇದ್ದು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಮನವಿ ಸಲ್ಲಿಸಲಾಯಿತು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X