Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರಾಕೃತಿಕ ವಿಕೋಪ ಎದುರಿಸಲು ಸದ್ಯ...

ಪ್ರಾಕೃತಿಕ ವಿಕೋಪ ಎದುರಿಸಲು ಸದ್ಯ ಪ್ರಮುಖ ಆದ್ಯತೆ: ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

ವಾರ್ತಾಭಾರತಿವಾರ್ತಾಭಾರತಿ19 Jun 2025 5:04 PM IST
share
ಪ್ರಾಕೃತಿಕ ವಿಕೋಪ ಎದುರಿಸಲು ಸದ್ಯ ಪ್ರಮುಖ ಆದ್ಯತೆ: ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

ಮಂಗಳೂರು, ಜೂ.19: ಸದ್ಯ ಮಳೆಗಾಲ ಆಗಿರುವುದರಿಂದ ಜಿಲ್ಲೆಯಲ್ಲಿ ಪ್ರಾಕೃತಿಕವಾಗಿ ಸಂಭವಿಸುವ ವಿಕೋಪಗಳನ್ನು ಯಾವುದೇ ಸಾವು ನೋವು, ಆಸ್ತಿ ಪಾಸ್ತಿಗಳಿಗೆ ನಷ್ಟ ಆಗದಂತೆ ಎದುರಿಸಲು ಬೇಕಾದ ಎಲ್ಲಾ ರೀತಿಯ ಅಗತ್ಯ ಕ್ರಮಗಳ ಬಗ್ಗೆ ಪ್ರಮುಖ ಆದ್ಯತೆ ನೀಡಲಾಗುವುದು ಎಂದು ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹೇಳಿದ್ದಾರೆ.

ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ದರ್ಶನ್ ಅವರನ್ನು ಅವರ ಕಚೇರಿಯಲ್ಲಿ ಗುರುವಾರ ಭೇಟಿಯಾದ ಪತ್ರಕರ್ತರ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು.

ಈಗಾಗಲೇ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಉಂಟಾಗಿರುವ ಹಾನಿಗಳ ಬಗ್ಗೆ ಮಾಹಿತಿ ಪಡೆದು ಕೊಂಡಿದ್ದೇನೆ. ಹಿಂದಿನ ಪ್ರವಾಹದ ಸಂದರ್ಭ ಆಗಿದ್ದಂತಹ ರಸ್ತೆ ಸಂಪರ್ಕ ಕಡಿತ, ಹಾನಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಗುಡ್ಡಕಾಡು ಪ್ರದೇಶಗಳ ಜನವಸತಿಗಳಲ್ಲಿ ಸಂಭಾವ್ಯ ಅನಾಹುತಗಳ ಬಗ್ಗೆ ಮಾಹಿತಿ ಪಡೆದು ತುರ್ತು ರಕ್ಷಣಾ ಕ್ರಮಗಳಿಗೆ ಕ್ರಮ ವಹಿಸಲಾಗುವುದು. ದ.ಕ. ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ್ ಅವರ ನೇತೃತ್ವದಲ್ಲಿ ಈಗಾಗಲೇ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಿಡಿಒಗಳನ್ನು ಮೇಲುಸ್ತುವಾರಿಯಾಗಿಸಿ ಪ್ರಾಕೃತಿಕ ವಿಕೋಪಗಳ ಬಗ್ಗೆ ನಿಗಾ ವಹಿಸಲಾಗು ತ್ತಿದೆ. ಅದರ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದೇನೆ. ಮುಂದಿನ ನಾಲ್ಕೈದು ದಿನಗಳ ಕಾಲ ಅಷ್ಟಾಗಿ ಮಳೆ ಇರದು ಎಂಬ ಮಾಹಿತಿ ಹವಾಮಾನ ಇಲಾಖೆಯಿಂದ ದೊರಕಿದೆ. ನಂತರ ಬರುವ ಮಳೆಯ ಸಂದರ್ಭ ನಷ್ಟ ಆಗದಂತೆ ಎಲ್ಲ ಇಲಾಖೆಗಳ ಸಮನ್ವಯತೆಯೊಂದಿಗೆ ಯಾವ ರೀತಿಯಲ್ಲಿ ಸಮಸ್ಯೆ ಬಗೆಹರಿಸಬಹುದು ಎಂಬ ಬಗ್ಗೆ ಗಮನ ಹರಿಸಲಾಗುವುದು ಎಂದವರು ಹೇಳಿದರು.

ಅಕ್ರಮ ಮರಳುಗಾರಿಕೆ ತಡೆಗೆ ಕ್ರಮ

ಸಾಗರದಲ್ಲಿ ಉಪ ವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಅಲ್ಲಿಯೂ ಕೆಲವೊಂದು ಮರಳು ಸಂಬಂಧಿ ವಿಷಯಗಳ ಬಗ್ಗೆ ಕಾರ್ಯ ನಿರ್ವಹಿಸಿದ್ದೇನೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ ಬಳಿಕ ಈ ಬಗ್ಗೆ ಸೂಕ್ತ ನಿರ್ಧರಿಸಲಾಗುವುದು. ಅಕ್ರಮ ಮರಳುಗಾರಿಕೆ ತಡೆಯುವುದು ಪ್ರಮುಖ ಆದ್ಯತೆ ಪೊಲೀಸ್ ಅಧಿಕಾರಿಗಳ ಜತೆಗೆ ಜಿಲ್ಲಾಧಿಕಾರಿಯಾಗಿ ನನಗೂ ಇದೆ. ಅದರ ಬಗ್ಗೆ ಯಾವ ಕ್ರಮ ಕೈಗೊಳ್ಳಬೇಕೆನ್ನುವ ಬಗ್ಗೆ ಶೀಘ್ರವಾಗಿ ಚರ್ಚಿಸಲಾಗುವುದು ಎಂದು ಜಿಲ್ಲೆಯ ಅಕ್ಮ ಮರಳುಗಾರಿಕೆ ಬಗ್ಗೆ ಅವರು ಪ್ರತಿಕ್ರಿಯಿಸಿದರು.

ದ.ಕ. ಜಿಲ್ಲೆಗೆ ಇದೇ ಮೊದಲ ಬಾರಿಗೆ ಅಧಿಕಾರಿಯಾಗಿ ಬಂದಿದ್ದೇನೆ. ಆರಂಭದಲ್ಲಿಯೇ ದ.ಕ. ಜಿಲ್ಲೆಯ ಜನತೆಯ ಪ್ರೀತಿ, ವಿಶ್ವಾಸ ದೊರಕಿದೆ. ದ.ಕ. ಜಿಲ್ಲೆ ಉತ್ತಮ ಆಡಳಿತ ಹೊಂದಿರುವ ಜಿಲ್ಲೆ. ಇಲ್ಲಿನ ಜನರ ಬಗ್ಗೆಯೂ ಇತರ ಜಿಲ್ಲೆಗಳಲ್ಲಿ ಬಹಳಷ್ಟು ಹೆಗ್ಗಳಿಕೆ ಇದೆ. ಚಿಕ್ಕಮಗಳೂರುನಲ್ಲಿ ಇದ್ದ ಸಂದರ್ಭ ಇಲ್ಲಿಯ ಬಗ್ಗೆ ಕೇಳಿ ತಿಳಿದುಕೊಂಡಿದ್ದು ಬಿಟ್ಟರೆ ಹೆಚ್ಚಿನ ಒಡನಾಟ ದ.ಕ. ಜಿಲ್ಲೆಯ ಬಗ್ಗೆ ನನಗೆ ಇಲ್ಲ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಜಿಲ್ಲೆಯ ಬಗ್ಗೆ ಅರಿತುಕೊಂಡು ಏನು ಅಗತ್ಯವಿದೆ ಹಾಗೂ ಏನು ಅವಕಾಶಗಳಿವೆ ಎಂಬುದನ್ನು ತಿಳಿದು ಅಧಿಕಾರಿಗಳ ಮೂಲಕ ಪ್ರಮುಖ ಇಲಾಖೆಗಳ ಪರಿಶೀಲನಾ ಸಭೆ ನಡೆಸಲಿದ್ದೇನೆ. ಮುಲ್ಲೈ ಮುಗಿಲನ್ ಅವರಿಗೆ ದೊರೆತ ಬೆಂಬಲವನ್ನು ಸಾರ್ವಜನಿಕರಿಂದ ನಾನೂ ಬಯಸುವುದಾಗಿ ನೂತನ ಜಿಲ್ಲಾಧಿಕಾರಿ ತಿಳಿಸಿದರು.

ಕೋಮು ಸೂಕ್ಷ್ಮವಾಗಿ ಗುರುತಿಸಿಕೊಡಿರುವ ದ.ಕ. ಜಿಲ್ಲೆಯಲ್ಲಿ ಕಾರ್ಯ ನಿರ್ವಹಣೆಯ ದೂರದೃಷ್ಟಿ ಹೇಗಿರುತ್ತದೆ ಎಂಬ ಪ್ರಶ್ನೆಗೆ ಪ್ರತಿಯಿಕ್ರಿಯಿಸಿದ ಅವರು, ಈಗಷ್ಟೇ ಬಂದಿದ್ದೇನೆ. ಈ ಸಮಯದಲ್ಲಿ ಆ ಬಗ್ಗೆ ನಾನು ಏನೂ ಹೇಳಲಾಗದು. ಆದರೂ ಈಗಾಗಲೇ ಜಿಲ್ಲೆಯಲ್ಲಿ ಪೊಲೀಸ್ ಕಮಿಷನರ್, ಎಸ್ಪಿಯವರು ಈಗಾಗಲೇ ಜಿಲ್ಲೆಯಲ್ಲಿ ಅಗತ್ಯ ಕ್ರಮ ವಹಿಸಿದ್ದಾರೆ. ಕೆಲ ಸಮಯದ ಹಿಂದೆ ಜಿಲ್ಲೆಯಲ್ಲಿ ಇದ್ದ ಪರಿಸ್ಥಿತಿ ಈಗಿಲ್ಲ. ಇದೇ ರೀತಿಯ ಶಾಂತಿಯ ವಾತಾವರಣವನ್ನು ನಾವು ಕಾಪಾಡಿಕೊಂಡು ಬಂದಲ್ಲಿ ನಮ್ಮ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಲಿದೆ. ಈ ರೀತಿಯ ಶಾಂತಿಯುತ ಪರಿಸ್ಥಿತಿಯನ್ನು ಮುಂದುವರಿಸಲು ಸಾರ್ವಜನಿಕರು ಸಹಕರಿಸಬೇಕು ಎಂಬುದು ನನ್ನ ಬೇಡಿಕೆಯಾಗಿದೆ.

ನೂತನ ಜಿಲ್ಲಾಧಿಕಾರಿ ದರ್ಶನ್ ಎಚ್.ವಿಯವರು ಕರ್ನಾಟಕದ ಚಿತ್ರದುರ್ಗ ಜಿಲ್ಲೆಯವರು. 2016ನೇ ಸಾಲಿನ ಐಎಎಸ್ ಅಧಿಕಾರಿ. ರಾಯಚೂರಿನಲ್ಲಿ ಐಎಎಸ್ ಪ್ರೊಬೆಷನರಿಯಾಗಿ ಕಾರ್ಯ ಆರಂಭಿಸಿ, ಸಾಗರದಲ್ಲಿ ಉಪ ವಿಭಾಗಾಧಿಕಾರಿ (ಎಸಿ)ಯಾಗಿ, ಕೋಲಾರ ಜಿ.ಪಂ. ಸಿಇಒ ಆಗಿ, ಬಳಿಕ ಸುಮಾರು ಎರಡೂವರೆ ವರ್ಷಗಳ ಕಾಲ ಬೆಳಗಾವಿ ಜಿ.ಪಂ. ಸಿಇಒ ಆಗಿ, ತುಮಕೂರು ನಗರಸಭೆ ಆಯುಕ್ತ, ಬೆಂಗಳೂರಿನಲ್ಲಿ ಐಟಿಬಿಟಿ ನಿರ್ದೇಶಕನಾಗಿ, ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತರು ಮತ್ತು ಹೆಚ್ಚುವರಿ ಜಿಲ್ಲಾ ಅಧಿಕಾರಿಯಾಗಿ ಸೇವಾನುಭವ ಹೊಂದಿದ್ದಾರೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X