ದ.ಕ.ಜಿಲ್ಲೆಯ ವಿದ್ಯಮಾನ: ಕೆಪಿಸಿಸಿಗೆ ವರದಿ ಹಸ್ತಾಂತರ

ಮಂಗಳೂರು, ಜೂ.19: ದ.ಕ.ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಲವು ಅಹಿತಕರ ಘಟನೆಗಳ ವಾಸ್ತವ ಅಂಶಗಳ ಬಗ್ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನಿಯುಕ್ತಿಗೊಳಿಸಿದ್ದ ಎಐಸಿಸಿ ಪ್ರಧಾನ ಕಾರ್ಯ ದರ್ಶಿ ಸೈಯದ್ ನಾಸೀರ್ ಹುಸೇನ್ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ, ಶಾಸಕ ಮಂಜುನಾಥ ಭಂಡಾರಿ ನೇತೃತ್ವದ ನಿಯೋಗವು ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ವರದಿ ಸಲ್ಲಿಸಿದೆ.
ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿ ಎಲ್ಲಾ ಧರ್ಮ, ಸಮುದಾಯದ ಮುಖಂಡರುಗಳನ್ನು ಭೇಟಿ ಮಾಡಿ ತಯಾರಿಸಿದ ವರದಿಯನ್ನು ಕೆಪಿಸಿಸಿ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.
ಈ ಸಂದರ್ಭ ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್. ಸುದರ್ಶನ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್ , ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು.
Next Story





