ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರಾಗಿ ಅಶ್ರಫ್ ಕೆ.ಸಿ ರೋಡ್ ಆಯ್ಕೆ

ತೊಕ್ಕೊಟ್ಟು: ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕರು ಮತ್ತು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಶೆಟ್ಟಿ ಬೋಳಿಯಾರ್ ಅವರ ಶಿಫಾರಸ್ಸಿನ ಮೇರೆಗೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಲ್ಪ ಸಂಖ್ಯಾತರ ಘಟಕದ ನೂತನ ಅಧ್ಯಕ್ಷರಾಗಿ ಅಶ್ರಫ್ ಕೆಸಿ ರೋಡ್ ಅವರು ಆಯ್ಕೆಯಾದರು.
ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶಾಹುಲ್ ಹಮೀದ್ ಅವರು ಉಳ್ಳಾಲ ಬ್ಲಾಕ್ ನೂತನ ಅಧ್ಯಕ್ಷರಾದ ಅಶ್ರಫ್ ಕೆ.ಸಿ ರೋಡ್ ಅವರಿಗೆ ನೇಮಕಾತಿ ಪತ್ರ ವಿತರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ದ. ಕ ಜಿಲ್ಲಾ ಉಸ್ತುವಾರಿ ಕಲ್ಯಾಣ್ ತೇಜಸ್ವಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಜ್, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಹಾಗೂ ಮೈಸೂರು ಉಸ್ತುವಾರಿ ಸಿ. ಎಂ ರವೂಫ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಆಲ್ವಿನ್ ಪ್ರಕಾಶ್, ಕೋಶಾಧಿಕಾರಿ ಹಾಜಿ ಮಹಮ್ಮದ್ ಬಪ್ಪಳಿಗೆ, ಉಳ್ಳಾಲ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಅಬ್ದುಲ್ ಸಲಾಂ ಕೆಸಿ ರೋಡ್, ಮಂಗಳೂರು ವಿಧಾನಸಭಾ ಕ್ಷೇತ್ರದ ಎನ್.ಎಸ್.ಯು.ಐ ಅಧ್ಯಕ್ಷರಾದ ಸಾಹಿಲ್ ಮಂಚಿಲ ಉಪಸ್ಥಿತರಿದ್ದರು.







