Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಾಹ್ಯಾಕಾಶಕ್ಕೆ ಮಾನವನ ಪಯಣ ಭಾರತದ...

ಬಾಹ್ಯಾಕಾಶಕ್ಕೆ ಮಾನವನ ಪಯಣ ಭಾರತದ ಮುಂದಿನ ಗುರಿ: ಡಾ. ಕಿರಣ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ22 Jun 2025 7:00 PM IST
share
ಬಾಹ್ಯಾಕಾಶಕ್ಕೆ ಮಾನವನ ಪಯಣ ಭಾರತದ ಮುಂದಿನ ಗುರಿ: ಡಾ. ಕಿರಣ್ ಕುಮಾರ್

ಮಂಗಳೂರು, ಜೂ.22: ಮಾನವ ಸಹಿತ ಗಗನಯಾನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಂದಿನ ಮಹತ್ವಾಕಾಂಕ್ಷಿ ಯೋಜನೆಯಾಗಿದೆ ಎಂದು ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಹಾಗೂ ಇಸ್ರೋ ಮಾಜಿ ಅಧ್ಯಕ್ಷ ಪದ್ಮಶ್ರೀ ಡಾ. ಎ. ಎಸ್. ಕಿರಣ್ ಕುಮಾರ್ ಹೇಳಿದ್ದಾರೆ.

ಮಂಗಳೂರಿನ ರಾಮಕೃಷ್ಣ ಮಿಷನ್ ಹಾಗೂ ಸಮತಾ (ರಿ) ಮಹಿಳಾ ಬಳಗ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ರಾಮಕೃಷ್ಣ ಮಠದಲ್ಲಿ ರವಿವಾರ ನಡೆದ ಇಸ್ರೋದ ಪರಂಪರೆ ಮತ್ತು ಅದರಾಚೆ (ಇಸ್ರೋ ಲೆಗಸಿ ಆ್ಯಂಡ್ ಬಿಯಾಂಡ್) ಕಾರ್ಯಕ್ರಮದಲ್ಲಿ ಪ್ರಧಾನ ಉಪನ್ಯಾಸ ನೀಡಿದರು.

ವಿಕ್ರಂ ಸಾರಾಭಾಯಿ ಹಾಗೂ ಹೋಮಿ ಜೆ ಬಾಬಾರಂತಹ ಮಹಾನ್ ವ್ಯಕ್ತಿಗಳ ದೂರದೃಷ್ಟಿಯಿಂದ ಇಸ್ರೋ ಹುಟ್ಟಿಕೊಂಡಿತು. ಇಂದು ಭಾರತದ ಬೆಳವಣಿಗೆಯಲ್ಲಿ ಇಸ್ರೋ ಮಹತ್ತರ ಪಾತ್ರ ವಹಿಸಿದೆ. ದೇಶದ ಸಂಪರ್ಕ ಅಥವಾ ಸಂವಹನ ಕಾರ್ಯಕ್ರಮಗಳ ಬೆಳವಣಿಗೆಯಲ್ಲಾಗಲೀ, ಕೃಷಿ, ಮೀನುಗಾರಿಕೆ, ರಕ್ಷಣೆ, ಹವಾಮಾನ, ನ್ಯಾವಿಗೇಶನ್ ಮುಂದಾದ ಹತ್ತು ಹಲವು ಕ್ಷೇತ್ರಗಳ ಬೆಳವಣಿಗೆಯಲ್ಲಿ ಇದು ಸಹಕಾರಿಯಾಗಿದೆ ಎಂದರು.

ಇಂದು ಸಾಮಾನ್ಯ ಜನರಿಗೂ ದೇಶದ ಅತ್ಯುನ್ನತ ತಂತ್ರಜ್ಞಾನ ಬಳಕೆಗೆ ಲಭಿಸುವಂತೆ ಇಸ್ರೋ ಮಾಡಿದೆ. ಭಾರತ ಕಳೆದ ಹಲವಾರು ವಷರ್ಗಳಿಂದ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಆದ ಸಾಮರ್ಥ್ಯವನ್ನು ಬೆಳೆಸುತ್ತಾ ಬಂದಿದೆ ಹಾಗೂ ಇಂದು ಜಗತ್ತಿನ ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅಗ್ರಗಣ್ಯ ರಾಷ್ಟ್ರಗಳಲ್ಲಿ ಒಂದಾಗಿದೆ.

ಭಾರತದ ಉಪಗ್ರಹಗಳಲ್ಲದೆ 34 ಕ್ಕೂ ಹೆಚ್ಚು ರಾಷ್ಟ್ರಗಳ 450 ಕ್ಕೂ ಹೆಚ್ಚು ಉಪಗ್ರಹಗಳನ್ನು ಭಾರತ ಉಡಾವಣೆ ಮಾಡಿದೆ. ಚಂದ್ರಯಾನ, ಮಂಗಳಯಾನ, ಆದಿತ್ಯ ಮುಂತಾದ ಹಲವಾರು ಉಪಗ್ರಹ ಕಾರ್ಯಕ್ರಮಗಳ ಮೂಲಕ ಭಾರತದ ಸಾಮರ್ಥ್ಯವನ್ನು ಜಗತ್ತು ಇಂದು ಅರಿತುಕೊಂಡಿದೆ.

ದೇಶದ ಬೆಳವಣಿಗೆಯಲ್ಲಿ ಎಲ್ಲರೂ ಪಾಲುದಾದರಾಗಬೇಕಿದೆ ಎಂದು ಅವರು ಹೇಳಿದರು.

ಮಂಗಳೂರು ರಾಮಕೃಷ್ಣ ಮಿಷನ್ ಕಾರ್ಯದರ್ಶಿ ಸ್ವಾಮಿ ಜಿತಕಾಮಾನಂದಜಿ ದಿವ್ಯಸಾನಿಧ್ಯ ವಹಿಸಿದ್ದರು. ಕಾರ್ಯಕ್ರಮದ ಕರ್ಣಾಟಕ ಬ್ಯಾಂಕ್‌ನ ಜನರಲ್ ಮ್ಯಾನೇಜರ್ ಸುಮನಾ ಘಾಟೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಮಂಗಳೂರಿನ ಸಮತಾ ಮಹಿಳಾ ಬಳಗದ ಅಧ್ಯಕ್ಷೆ ಕಾತ್ಯಾಯನಿ ಭಿಡೆ ವಹಿಸಿದ್ದರು. ಐಐಎಸ್‌ಸಿ ಬೆಂಗಳೂರಿನ ಮಾಜಿ ಪ್ರಾಧ್ಯಾಪಕ ಡಾ. ಎಂ. ಎಂ. ನಾಯಕ್, ಸಮತಾ ಮಹಿಳಾ ಬಳಗದ ಗೌರವಾಧ್ಯಕ್ಷೆ ವಿಜಯಲಕ್ಷ್ಮಿರಾವ್ ಹಾಗೂ ಕರ್ನಾಟಕ ವಿಧಾನ ಪರಿಷತ್‌ನ ಸದಸ್ಯ ಡಾ. ಮಂಜುನಾಥ ಭಂಡಾರಿ ಅವರು ಅತಿಥಿಯಾಗಿ ಭಾಗವಹಿಸಿದ್ದರು.

ಸಮತಾ ಬಳಗ ಹಾಗೂ ಮಂಗಳೂರು ರಾಮಕೃಷ್ಣ ಮಿಷನ್ ವತಿಯಿಂದ ಪದ್ಮಶ್ರೀ ಡಾ.ಕಿರಣ್ ಕುಮಾರ್‌ನ್ನು ಸನ್ಮಾನಿಸಲಾಯಿತು. ಸಂವಾದ ಕಾರ್ಯಕ್ರಮವನ್ನು ಸ್ವಚ್ಛ ಮಂಗಳೂರು ಅಭಿಯಾನದ

ಮುಖ್ಯ ಸಂಯೋಜಕ ರಂಜನ್ ಬೆಳ್ಳರ್ಪ್ಪಾಡಿ ನಿರ್ವಹಿಸಿದರು. ಪ್ರಾಧ್ಯಾಪಕ ಸಂತೋಷ್ ಆಳ್ವ ಎಕ್ಕಾರು ಹಾಗೂ ಅನುಪಮಾ ಅನಂತಮೂರ್ತಿ ಕಾರ್ಯಕ್ರಮ ನಿರ್ವಹಿಸಿದರು.

ಸ್ಪೇಸ್ ಆನ್ ವೀಲ್ಸ್ ಪ್ರದರ್ಶನ ಇಸ್ರೋದ ಇತಿಹಾಸ, ಸಾಧನೆಗಳು ಹಾಗೂ ಭವಿಷ್ಯದ ದೃಷ್ಟಿಕೋನದ ಕುರಿತು ಉಪನ್ಯಾಸದ ಜೊತೆಗೆ ಬೆಂಗಳೂರಿನ ಯು. ಆರ್. ರಾವ್ ಉಪಗ್ರಹ ಕೇಂದ್ರ ನಿರ್ವಹಿಸುವ ಚಲಂತ ವಿಜ್ಞಾನ ಪ್ರದರ್ಶನ ‘ಸ್ಪೇಸ್ ಆನ್ ಸ್ಪೇಸ್’ ನಡೆಯಿತು.

ವಿವಿಧ ಶಾಲಾ,ಕಾಲೇಜುಗಳ ಸುಮಾರು 1,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದನ್ನು ವೀಕ್ಷಿಸಿದರು. ಇಸ್ರೋ ಮಾಜಿ ಅಧ್ಯಕ್ಷ ಪದ್ಮಶ್ರೀ ಡಾ. ಎ. ಎಸ್. ಕಿರಣ್ ಕುಮಾರ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

‘‘ಜಗತ್ತಿನ ಎಲ್ಲಾ ದೇಶಗಳು ಮಿಲಿಟರಿ ಅವಶ್ಯಕತೆಗಳಿಗಾಗಿ ಬಾಹ್ಯಾಕಾಶ ಕಾರ್ಯಕ್ರಮಗಳನ್ನು ಪ್ರಾರಂಭಿಸಿದರೆ, ಸಾಮಾನ್ಯ ಜನರ ಅಥವಾ ದೇಶದ ಸಮಸ್ಯೆಗಳ ಪರಿಹಾರಕ್ಕಾಗಿ ಬಾಹ್ಯಾಕಾಶ ಕಾರ್ಯಕ್ರಮ ಪ್ರಾರಂಭಿಸಿದ ಏಕೈಕ ದೇಶ ಭಾರತವಾಗಿದೆ".

*ಪದ್ಮಶ್ರೀ ಡಾ. ಎ. ಎಸ್. ಕಿರಣ್ ಕುಮಾರ್, ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಹಾಗೂ ಇಸ್ರೋ ಮಾಜಿ ಅಧ್ಯಕ್ಷರು





share
ವಾರ್ತಾಭಾರತಿ
ವಾರ್ತಾಭಾರತಿ
Next Story
X