Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಹಾಸ್ ಶೆಟ್ಟಿ, ಅಶ್ರಫ್ ಕೊಲೆ ಪ್ರಕರಣ|...

ಸುಹಾಸ್ ಶೆಟ್ಟಿ, ಅಶ್ರಫ್ ಕೊಲೆ ಪ್ರಕರಣ| ವೈಜ್ಞಾನಿಕ ಸಾಕ್ಷ್ಯಗಳ ಆಧಾರದಲ್ಲಿಯೇ ತನಿಖೆ: ಕಮಿಷನರ್ ಸುಧೀರ್ ರೆಡ್ಡಿ

"ಯಾವುದೇ ರೀತಿಯ ಸಾಕ್ಷ್ಯವಿದ್ದರೆ ಒದಗಿಸಿ, ಕಾನೂನಿಗಿಂತ ಯಾರೂ ಮೇಲಲ್ಲ"

ವಾರ್ತಾಭಾರತಿವಾರ್ತಾಭಾರತಿ23 Jun 2025 5:09 PM IST
share
ಸುಹಾಸ್ ಶೆಟ್ಟಿ, ಅಶ್ರಫ್ ಕೊಲೆ ಪ್ರಕರಣ| ವೈಜ್ಞಾನಿಕ ಸಾಕ್ಷ್ಯಗಳ ಆಧಾರದಲ್ಲಿಯೇ ತನಿಖೆ: ಕಮಿಷನರ್ ಸುಧೀರ್ ರೆಡ್ಡಿ

ಮಂಗಳೂರು, ಜೂ. 23: ಬಜ್ಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಹಾಗೂ ಕುಡುಪುವಿನ ಅಶ್ರಫ್ ಸಾಮೂಹಿಕ ಹತ್ಯೆ ಪ್ರಕರಣಗಳಲ್ಲಿ ಪೊಲೀಸರು ಘಟನೆಯ ವೈಜ್ಞಾನಿಕ ಸಾಕ್ಷ್ಯಾಧಾರದಲ್ಲಿಯೇ ತನಿಖೆ ನಡೆಸಿದ್ದಾರೆ. ಯಾವುದೇ ರೀತಿಯ ಸಾಕ್ಷ್ಯಾಧಾಗಳಿದ್ದಲ್ಲಿ ಅದನ್ನು ನೇರವಾಗಿ ಒದಗಿಸಿ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಹೇಳಿದ್ದಾರೆ.

ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬಜ್ಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಹಾಗೂ ಕುಡುಪುವಿನಲ್ಲಿ ನಡೆದ ಅಶ್ರಫ್ ಕೊಲೆ ಪ್ರಕರಣಗಳಿಗೆ ಸಂಬಂಧಿಸಿ ಪೊಲೀಸರು ನಡೆಸಿರುವ ತನಿಖೆಯ ಸಮಗ್ರ ವಿವರ ನೀಡಿ ಅವರು ಮಾತನಾಡಿದರು.

ಸುಹಾಸ್ ಶೆಟ್ಟಿ ಪ್ರಕರಣ ಸದ್ಯ ಎನ್‌ಐಎಗೆ ವಹಿಸಲಾಗಿದ್ದು, ಅಶ್ರಫ್ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ 100ಕ್ಕೂ ಅಧಿಕ ಮಂದಿಯನ್ನು ವಿಚಾರಣೆಗೊಳಪಡಿಸಲಾಗಿದೆ. ಹಾಗಾಗಿ ಸಾರ್ವಜನಿಕರಿಗೆ ಯಾವುದೇ ರೀತಿಯ ಅನುಮಾನ, ಸಂಶಯ ಬೇಡ. ಪೊಲೀಸರ ತನಿಖೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವುದು ಬಿಟ್ಟು, ಸಾಕ್ಷ್ಯಾಧಾರಗಳಿದ್ದಲ್ಲಿ ನೇರವಾಗಿ ನಮಗೆ ತಂದು ಕೊಡಿ. ಕಾನೂನಿಗಿಂತ ಯಾರೂ ಮೇಲಲ್ಲ. ನಾವು ಯಾವುದೇ ಪುರಾವೆಗಳನ್ನು ಕಡೆಗಣಿಸುವುದಿಲ್ಲ. ಆದರೆ ತನಿಖೆಗೆ ದಿಕ್ಕು ತಪ್ಪಿಸುವ ರೀತಿಯಲ್ಲಿ, ಸಾರ್ವಜನಿಕರನ್ನು ತಪ್ಪು ದಾರಿಗೆ ಎಳೆಯುವ ಕಾರ್ಯವನ್ನು ಯಾರಾದರೂ ನಡೆಸಿದರೂ ಅವರೂ ಕಾನೂನಿನ ಪ್ರಕಾರ ಆರೋಪಿಗಳಾಗುತ್ತಾರೆ. ಪೊಲೀಸರು ಪಾರದರ್ಶಕವಾಗಿ ಈ ಎರಡೂ ಪ್ರಕರಣಗಳಲ್ಲಿ ಕ್ರಮಗಳನ್ನು ಕೈಗೊಂಡಿದ್ದಾರೆ. ಇತರ ಪ್ರಕರಣಗಳಲ್ಲಿಯೂ ಪೊಲೀಸರು ಕಾನೂನು ಬದ್ಧವಾಗಿಯೇ ಕ್ರಮ ವಹಿಸುತ್ತಾರೆ. ಯಾವುದೇ ಅಮಾಕರಿಗೆ ಸಮಸ್ಯೆ ಆಗದು. ಹಾಗೆಯೇ ತಪ್ಪಿತಸ್ಥರನ್ನು ಬಿಡಲಾಗದು ಎಂದು ಕಮಿಷನರ್ ಸುಧೀರ್ ಶೆಟ್ಟಿ ಸ್ಪಷ್ಟಪಡಿಸಿದರು.


ಸುಹಾಶ್ ಶೆಟ್ಟಿ ಪ್ರಕರಣದಲ್ಲಿಯೂ ಮೂರ್ನಾಲ್ಕು ರೀತಿಯ ಅನುಮಾನಗಳು ಸಾಮಾಜಿಕ ವಲಯದಿಂದ ವ್ಯಕ್ತವಾಗಿತ್ತು. ಸ್ಥಳವನ್ನು ನಿಗದಿಪಡಿಸಿಕೊಂಡು ಪೂರ್ವನಿಗದಿತವಾಗಿ ಯೋಜನೆ ರೂಪಿಸಲಾಗಿತ್ತು. ಆರೋಪಿಗಳು ತಪ್ಪಿಸಿಕೊಂಡು ಹೋಗುವಲ್ಲಿ ಮಹಿಳೆಯರಿಬ್ಬರು ಸಹಕರಿಸಿದ್ದು, ಅ ಅವರನ್ನು ತನಿಖೆಗೊಳಪಡಿಸಿಲ್ಲ. ಸಿಸಿಟಿವಿಯಲ್ಲಿ ನೋಡುವಾಗ 50ಕ್ಕೂ ಅಧಿಕ ಜನರು ಸೇರಿದ್ದು ಅವರನ್ನೆಲ್ಲಾ ಬಂಧಿಸಿಲ್ಲ ಎಂಬ ಆರೋಪ ವ್ಯಕ್ತವಾಗಿತ್ತು. ಆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿಯ ಕಾರು ಘಟನಾ ಸ್ಥಳದಲ್ಲಿ ಹಾದು ಹೋಗುವಾಗಿನಿಂದಿನ, ಆ ಜಾಗದಲ್ಲಿ ಅದಕ್ಕೂ ಸ್ವಲ್ಪ ಹೊತ್ತಿನ ಮುಂಚೆ ನಡೆದ ಘಟನೆಯ ವೇಳೆ ನಡೆದಿದ್ದ ಅಪಘಾತ ಪ್ರಕರಣ ವೀಕ್ಷಿಸಲು ಕುತೂಹಲದಿಂದ ಸೇರಿದ್ದವರು, ಸುಹಾಸ್ ಶೆಟ್ಟಿಯನ್ನು ಫಾಲೋ ಮಾಡಿಕೊಂಡು ಬಂದ ವಾಹನ ಸೇರಿದಂತೆ ಎಲ್ಲಾ ರೀತಿಯ ಸಾಕ್ಷ್ಯಗಳನ್ನು ಪರಿಗಣಿಸಿ, ವಿಚಾರಣೆಗೊಳಪಡಿಸಲಾಗಿದೆ. ಅನುಮಾನಗಳ ಬಗ್ಗೆಯೂ ಸಂಬಂಧಪಟ್ಟವರಿಗೆ ವೀಡಿಯೋ ದಾಖಲೆಗಳ ಮೂಲಕ ಮಾಹಿತಿ ಒದಗಿಸಲಾಗಿದೆ.

ಅಶ್ರಫ್ ಕೊಲೆ ಪ್ರಕರಣದಲ್ಲಿಯೂ ಪೊಲೀಸಗೆ ಪ್ರಾಥಮಿಕಾಗಿ ದೊರಕಿದ ಮೃತನ ಫೋಟೋದ ಬಳಿ ಇದ್ದ ಆರೋಪಿಗಳ ಚಪ್ಪಲಿ ಹಾಗೂ ಶೂಗಳನ್ನು ಆಧರಿಸಿ ಪತ್ತೆ ಹಚ್ಚುವ ಕಾರ್ಯ ಪೊಲೀಸರಿಂದ ಆಗಿದೆ. ಈ ಪ್ರಕರಣದಲ್ಲಿಯೂ ಕೆಲ ಆರೋಪಿಗಳು ಮೃತಪಟ್ಟ ವ್ಯಕ್ತಿಗೆ ಹಲ್ಲೆ ನಡೆಸುತ್ತಿದ್ದ ವೇಳೆ ದೂರದಲ್ಲಿ ಕ್ರಿಕೆಟ್ ಆಟ ನಡೆಯುತ್ತಿತ್ತು. ಆದರೆ ಅಲ್ಲಿ ಸೇರಿದ್ದವರನ್ನು ಆರೋಪಿಗಳೆಂದು ಪರಿಗಣಿಸಲು ಆಗುವುದಿಲ್ಲ. ಪ್ರಮುಖ ಆರೋಪಿಗಳ ಹೇಳಿಕೆಯ ಆಧಾರದಲ್ಲಿ ತನಿಖೆ ಆಗಿದೆ. ಆರಂಭದಲ್ಲಿ ಪೊಲೀಸರಿಂದ ಆಗಿರುವ ಲೋಪಕ್ಕೆ ಸಂಬಂಧಿಸಿ ಪೊಲೀಸರ ಮೇಲೂ ಕ್ರಮ ಆಗಿದೆ. ಹಾಗಿದ್ದರೂ ಪ್ರಕರಣವನ್ನು ಸಂಪೂರ್ಣವಾಗಿ ವೈಜ್ಞಾನಿಕ ಸಾಕ್ಷ್ಯಗಳ ಆಧಾರದಲ್ಲಿಯೇ ತನಿಖೆ ನಡೆಸಲಾಗುತ್ತಿದೆ. ನಾನು ಇನ್ನೂ ಎರಡು ದಿನ ಕಚೇರಿಯಲ್ಲೇ ಇರುತ್ತೇನೆ. ಯಾರೇ ಈ ಪ್ರಕರಣದ ಬಗ್ಗೆ ಸಾಕ್ಷ್ಯ ಇದ್ದರೆ ತಂದು ಒದಗಿಸಿ ಎಂದು ಕಮಿಷನರ್ ಸುಧೀರ್ ರೆಡ್ಡಿ ಹೇಳಿದರು.

ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳ ಬಗ್ಗೆಯೂ ಸ್ಪಷ್ಟ ಸಂದೇಶ ನೀಡಿದ ಕಮಿಷನರ್ ಸುಧೀರ್ ರೆಡ್ಡಿ, ಯಾವುದೇ ರೀತಿಯ ಸಾಕ್ಷ್ಯವಿಲ್ಲದೆ ಪೊಲೀಸರ ಕಾರ್ಯಾಚರಣೆ ಬಗ್ಗೆ ಆಕ್ಷೇಪ, ಅನುಮಾನ ವ್ಯಕ್ತಪಡಿಸಿದಾಗ ನೋಟೀಸು ನೀಡಿ ವಿಚಾರಣೆ ನಡೆಸಲಾಗುತ್ತದೆ. ಸಾಕ್ಷ್ಯ ಇದ್ದಲ್ಲಿ ನೀಡಬೇಕು. ಅದು ಬಿಟ್ಟು ಯಾವುದೋ ಅನುಮಾನದಲ್ಲಿ ಹೇಳಿದರೆ ಕಾನೂನಿನಲ್ಲಿ ಅದಕ್ಕೆ ಅವಕಾಶ ಇರುವುದಿಲ್ಲ. ಮಂಗಳೂರಿನ ಎಲ್ಲ ನಾಗರಿಕರ ಸುರಕ್ಷತೆಯನ್ನು ಕಾಪಾಡುವ ಜತೆಗೆ ನ್ಯಾಯ ಒದಗಿಸುವುದು ಪೊಲೀಸರಾದ ನಮ್ಮ ಕರ್ತವ್ಯ. ಅದನ್ನು ನಾವು ನಿರ್ವಹಿಸುತ್ತೇವೆ ಎಂದರು.

ಡಿಸಿಪಿಗಳಾದ ರವಿಶಂಕರ್, ಸಿದ್ಧಾರ್ಥ್ ಗೋಯಲ್ ಉಪಸ್ಥಿತರಿದ್ದರು.

ದ್ವೇಷ ಭಾಷಣ: ಸ್ಟೇಜ್ ಮೇಲಿಂದ ಎಳೆದು ತರಲೇನು ಸಮಸ್ಯೆ ಇಲ್ಲ

ದ್ವೇಷ ಭಾಷಣ ಮಾಡುವವರಿಗೆ ಸುಲಭವಾಗಿ ಜಾಮೀನು ದೊರೆಯುತ್ತದೆ ಎಂಬ ಅನುಮಾನ, ಆತಂಕ ಸಾರ್ವಜನಿಕರಿಗೆ ಬೇಡ. ದ್ವೇಷ ಭಾಷಣ ಮಾಡುವ ಸ್ಟೇಜ್‌ನಿಂದಲೇ ಅಂತಹವರನ್ನು ಎಳೆದುಕೊಂಡರು ಬರಲು ಪೊಲೀಸರಿಗೆ ಯಾವುದೇ ಸಮಸ್ಯೆ ಇಲ್ಲ. ಸತ್ಯದ ಪರವಾಗಿ ಮತ್ತು ಪಾರದರ್ಶಕವಾಗಿ ಪೊಲೀಸರು ಕಾರ್ಯ ನಿರ್ವಹಿಸುತ್ತಾರೆ. ಈ ಬಗ್ಗೆ ಸಾರ್ವಜನಿಕರಿಗೆ ಯಾವುದೇ ಸಂದೇಹ ಬೇಡ ಎಂದು ಕಮಿಷನರ್ ಸುಧೀರ್ ರೆಡ್ಡಿ ಹೇಳಿದರು.

ಕಾನೂನಿನಡಿ ದ್ವೇಷ ಭಾಷಣಕ್ಕೆ ಸಂಬಂಧಿಸಿ ನ್ಯಾಯಾಲಯದಿಂದ ಜಾಮೀನು ಸಿಗಬಹುದು. ಆದರೆ, ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆಯಾಗುವ ಪ್ರಕರಣದಡಿ ಈ ರಿತಿ ದ್ವೇಷ ಭಾಷಣಗಳನ್ನು ಪುನಾರವರ್ತನೆ ಮಾಡುವವರಿಗೂ ಕಾನೂನಿನಡಿ ಸೂಕ್ತ ಕ್ರಮ ಆಗುತ್ತದೆ. ಪ್ರಜಾಪ್ರಭುತ್ವದಲ್ಲಿ ಮಾತನಾಡಲು ಅವಕಾಶ ಇದೆ. ಆದರೆ ಮಾತು ಹಾದಿ ತಪ್ಪಿದರೆ ಅದಕ್ಕೆ ಸೂಕ್ತವಾದ ಕ್ರಮವೂ ಭಾರತೀಯ ದಂಡ ಸಂಹಿತೆಯಲ್ಲಿದೆ ಎಂದವರು ಹೇಳಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X