ವಿದೇಶಿ ವಿವಿಗಳಲ್ಲಿ ವ್ಯಾಸಂಗ: ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಮಂಗಳೂರು, ಜೂ.23: ಪ್ರಸಕ್ತ (2025-26ನೇ) ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ವಿದೇಶಿ ವಿವಿಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಲಾಗಿದೆ.
ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ನಂ-16ಸಿ, ಮೌಲಾನಾ ಅಬ್ದುಲ್ ಕಲಾಂ ಆಜಾದ್ ಭವನ, ಮಿಲ್ಲರ್ ಟ್ಯಾಂಕ್ ಬೆಡ್ ರಸ್ತೆ, ವಸಂತನಗರ, ಬೆಂಗಳೂರು-560052ಕ್ಕೆ ಸಲ್ಲಿಸಬೇಕು. ಹಾರ್ಡ್ ಕಾಪಿಯನ್ನು ಸಲ್ಲಿಸುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ಇ-ಮೇಲ್ ಮೂಲಕ ತಿಳಿಸಲಾಗುವುದು.
ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‌ಸೈಟ್ dom.karnataka.gov.in/dakshina_kannada/public ಅಥವಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ದ.ಕ. ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





