Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯ ಕಾಂಗ್ರೆಸ್ ಸರಕಾರ ಜನರ ನಿರೀಕ್ಷೆ...

ರಾಜ್ಯ ಕಾಂಗ್ರೆಸ್ ಸರಕಾರ ಜನರ ನಿರೀಕ್ಷೆ ಹುಸಿಗೊಳಿಸಿದೆ: ಡಾ. ಪ್ರಕಾಶ್

ಕುಡುಪು ಗುಂಪು ಹತ್ಯೆ ಪ್ರಕರಣದ ಮರು ತನಿಖೆ ಮತ್ತು ಕೋಮುವಾದಿ ಶಕ್ತಿಗಳ ನಿಗ್ರಹಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ23 Jun 2025 8:51 PM IST
share
ರಾಜ್ಯ ಕಾಂಗ್ರೆಸ್ ಸರಕಾರ ಜನರ ನಿರೀಕ್ಷೆ ಹುಸಿಗೊಳಿಸಿದೆ: ಡಾ. ಪ್ರಕಾಶ್

ಮಂಗಳೂರು, ಜೂ.23: ಕೋಮುವಾದಿ ಶಕ್ತಿಗಳನ್ನು ಮಟ್ಟಹಾಕುವಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ವಿಫಲಗೊಂಡಿವೆ. ಜನರ ನಿರೀಕ್ಷೆಯನ್ನು ಕಾಂಗ್ರೆಸ್ ಸರಕಾರ ಹುಸಿಗೊಳಿಸಿದೆ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಡಾ. ಪ್ರಕಾಶ್ ಆರೋಪಿಸಿದರು.

ಕುಡುಪು ಗುಂಪು ಹತ್ಯೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕು, ಸಂತ್ರಸ್ತ ಕುಟುಂಬಗಳಿಗೆ ಪರಿಹಾರಧನ ಒದಗಿಸಬೇಕು, ಗುಂಪು ಹತ್ಯೆ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ ಅಂದಿನ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್‌ರನ್ನು ತನಿಖೆಗೊಳಪಡಿಸಬೇಕು, ಕೋಮುವಾದಿ ಶಕ್ತಿಗಳ ನಿಗ್ರಹಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು, ಕಳೆದೊಂದು ದಶಕಗಳಲ್ಲಿ ನಡೆದಿರುವ ಮತೀಯ ದ್ವೇಷದ ಹತ್ಯೆ, ಪ್ರತೀಕಾರದ ಕೊಲೆ ತನಿಖೆಗೆ ಸಿಟ್ ರಚಿಸಬೇಕು, ಕಳೆದ ಮೂರು ದಶಕಗಳಲ್ಲಿ ನಡೆದಿರುವ ಎಲ್ಲಾ ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿ ಸಿಪಿಎಂ ದ.ಕ.ಜಿಲ್ಲಾ ಸಮಿತಿಯು ಸೋಮವಾರ ನಗರದ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಜಿಲ್ಲಾದ್ಯಂತ ಕೋಮುವಾದಿ ಶಕ್ತಿಗಳ ಅಟ್ಟಹಾಸ ಹೆಚ್ಚುತ್ತಿರುವಾಗಲೇ ಸಿಪಿಎಂ ಪಕ್ಷವು ಕಠಿಣ ಕ್ರಮಕ್ಕೆ ಆಗ್ರಹಿಸಿದ್ದವು. ಆದರೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದಿಂದ ಜಿಲ್ಲೆಯಲ್ಲಿ ಕೋಮುಗಲಭೆ, ಕೊಲೆ, ಪ್ರತೀಕಾರದ ಕೊಲೆ ನಡೆದವು. ಇದಕ್ಕೆ ಸ್ಪೀಕರ್ ಯು.ಟಿ.ಖಾದರ್ ಕೂಡ ಹೊಣೆಗಾರರಾಗಿದ್ದಾರೆ ಎಂದು ಡಾ. ಪ್ರಕಾಶ್ ಆರೋಪಿಸಿದರು.

ಇದೀಗ ವಿಶೇಷ ನಿಗ್ರಹ ಪಡೆ ರಚಿಸಲಾಗಿದೆ. ಇದು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಮತೀಯವಾದಿಗಳು ತಲೆ ಎತ್ತದಂತೆ ನೋಡಿಕೊಳ್ಳಬೇಕು. ಎಲ್ಲಾ ಪ್ರಕರಣಗಳ ಸಮಗ್ರ ತನಿಖೆಗೆ ಸಿಟ್ ರಚಿಸಬೇಕು ಎಂದ ಪ್ರಕಾಶ್, ಹಿಂದು ಧರ್ಮಕ್ಕೂ ಹಿಂದುತ್ವಕ್ಕೂ ಯಾವುದೆ ಸಂಬಂಧ ಇಲ್ಲ. ಹಿಂದುತ್ವ ಎಂಬುದು ಮತಬೇಟೆಗಾಗಿರುವ ರಾಜಕೀಯ ಪರಿಕಲ್ಪನೆಯಾಗಿದೆ. ತನ್ನ ರಾಜಕೀಯ ಉದ್ದೇಶವನ್ನು ಈಡೇರಿಸಲು ಅದು ಮುಸ್ಲಿಮರನ್ನು ಗುರಿಯಾಗಿಸುತ್ತಿದೆ. ಹಿಂದುತ್ವವನ್ನು ಎಲ್ಲರೂ ಜೊತೆಗೂಡಿ ಸೋಲಿಸಬೇಕು ಎಂದರು.

ಸಿಪಿಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮಾತನಾಡಿ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಹಲವಾರು ಕೋಮು ದ್ವೇಷದ ಕೊಲೆ, ಪ್ರತೀಕಾರದ ಕೊಲೆಗಳು ನಡೆದಿವೆ. ಬಹುತೇಕ ಪ್ರಕರಣಗಳ ಆರೋಪಿಗಳು ವರ್ಷದ ಒಳಗಡೆ ಜಾಮೀನು ಪಡೆದು ರಾಜೋರೋಷವಾಗಿ ತಿರುಗಾಡು ತ್ತಿದ್ದಾರೆ. ಕಳೆದ ಮೂರು ದಶಕದ ಅವಧಿಯಲ್ಲಿ ಇಂತಹ ಕನಿಷ್ಟ ಮೂವತ್ತಕ್ಕೂ ಹೆಚ್ಚು ಕೊಲೆಗಳು ಇಲ್ಲಿ ನಡೆದಿವೆ. ಇವರಿಗೆ ರಾಜಕೀಯ ಆಶ್ರಯ ನೀಡುವವರು ಯಾರು? ಈ ಕೊಲೆಗಳ ಹಿಂದಿನ ಪಿತೂರಿ ದಾರರು ಯಾರು?, ರಾಜಕೀಯ ಫಲಾನುಭವಿಗಳು ಯಾರು? ಎಂಬುದು ಬಯಲಾಗಬೇಕಿದೆ. ಇದರ ಸತ್ಯಗಳು ಜನತೆಯ ಅರಿವಿಗೆ ಬರಬೇಕಾಗಿದೆ. ಈ ಬಗ್ಗೆ ರಾಜ್ಯ ಸರಕಾರ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಿಪಿಎಂ ರಾಜ್ಯ ನಾಯಕ, ಕೆ.ಯಾದವ ಶೆಟ್ಟಿ, ದೇವಿ ಮಂಡ್ಯ, ಜಿಲ್ಲಾ ನಾಯಕರಾದ ಸುನಿಲ್ ಕುಮಾರ್ ಬಜಾಲ್, ಕೃಷ್ಣಪ್ಪಕೊಂಚಾಡಿ, ಸುಕುಮಾರ್ ತೊಕ್ಕೋಟು, ಬಿಎಂ ಭಟ್, ಸದಾಶಿವದಾಸ್, ಜಯಂತಿ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಪ್ರಮೀಳಾ ಶಕ್ತಿನಗರ, ರಮಣಿ ಮೂಡುಬಿದಿರೆ, ಸಂತೋಷ್ ಬಜಾಲ್, ಬಿ.ಕೆ. ಇಮ್ತಿಯಾಝ್, ವಸಂತಿ ಕುಪ್ಪೆಪದವು, ಮನೋಜ್ ವಾಮಂಜೂರು, ರಫೀಕ್ ಹರೇಕಳ ಮತ್ತಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X