ಬೆಲೆ ಏರಿಕೆ ಮಾತ್ರ ರಾಜ್ಯ ಸರಕಾರದ ಸಾಧನೆ: ಕಿಶೋರ್ ಕುಮಾರ್ ಆರೋಪ

ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ಹರೇಕಳ, ಪಾವೂರು, ಕೊಣಾಜೆ, ಪಜೀರು, ಸಜೀಪ ನಡು, ಕುರ್ನಾಡು , ಬಾಳೆಪುಣಿ ಗ್ರಾಮ ಪಂಚಾಯತ್ , ಕೋಟೆಕಾರ್ ಪಟ್ಟಣ ಪಂಚಾಯತ್, ಸೋಮೇಶ್ವರ ಪುರಸಭೆ ಮುಂದೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ರಾಜ್ಯ ಸರಕಾರದ ಆಡಳಿತ ಸಂಪೂರ್ಣ ಜನವಿರೋಧಿಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್, ರಸ್ತೆ, ನೀರು, ಆಹಾರ, ವಸತಿ, ಪಡಿತರ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಸರಕಾರ ವಿಫಲವಾಗಿದೆ. ಬೆಲೆ ಏರಿಕೆ ಮಾತ್ರ ಈ ಸರಕಾರದ ಸಾಧನೆಯಾಗಿದೆ ಎಂದರು.
ಈ ಸಂದರ್ಭದಲ್ಲಿ ಮಂಗಳೂರು ಮಂಡಲದ ಅಧ್ಯಕ್ಷ ಜಗದೀಶ ಆಳ್ವ ಮತ್ತು ಯುವ ಮೋರ್ಚಾ ಅಧ್ಯಕ್ಷ ಮುರಲಿ ಕೊಣಾಜೆ ಮಾತನಾಡಿದರು.
Next Story





