Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪೆಟ್ ಶಾಪ್‌ಗಳ ನೋಂದಣಿ ಕಡ್ಡಾಯ: ದಕ ಡಿಸಿ...

ಪೆಟ್ ಶಾಪ್‌ಗಳ ನೋಂದಣಿ ಕಡ್ಡಾಯ: ದಕ ಡಿಸಿ ದರ್ಶನ್ ಎಚ್

ವಾರ್ತಾಭಾರತಿವಾರ್ತಾಭಾರತಿ24 Jun 2025 8:14 PM IST
share
ಪೆಟ್ ಶಾಪ್‌ಗಳ ನೋಂದಣಿ ಕಡ್ಡಾಯ: ದಕ ಡಿಸಿ ದರ್ಶನ್ ಎಚ್

ಮಂಗಳೂರು, ಜೂ.24: ದ.ಕ.ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆಯು ಜಿಲ್ಲಾಧಿಕಾರಿ ದರ್ಶನ್ ಎಚ್. ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆಯಿತು.

ಈ ಸಂದರ್ಭ ಮಾತನಾಡಿದ ಡಿಸಿ ಪ್ರಾಣಿ ಹಿಂಸೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸು ತ್ತಿರುವ ಮುದ್ದು ಪ್ರಾಣಿಗಳ ಮಾರಾಟ ಮಳಿಗೆ ಕಡ್ಡಾಯವಾಗಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಸೊಸೈಟಿಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಎಸ್‌ಪಿಸಿಎ ನೋಂದಣಿ ಪಡೆಯದೆ ಕಾರ್ಯನಿರ್ವಹಿಸುತ್ತಿರುವ ಪೆಟ್ ಶಾಪ್‌ಗಳ ಮಾಲಕರಿಗೆ ಕಾಲಮಿತಿ ನಿಗದಿಪಡಿಸಿ, ನಿಗದಿತ ಕಾಲಮಿತಿ ಯೊಳಗೆ ನೋಂದಣಿ ಪಡೆಯದ ಮಾಲಕರ ವಿರುದ್ಧ ಅಗತ್ಯ ಕಾನೂನು ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಪ್ರಾಣಿಗಳ ರಕ್ಷಣೆಯು ಮಹತ್ವದ ಕಾರ್ಯವಾಗಿದೆ. ಜಿಲ್ಲೆಯಲ್ಲಿ ಪ್ರಾಣಿಗಳ ಮೇಲಾಗುವ ದೌರ್ಜನ್ಯವನ್ನು ತಡೆಗಟ್ಟಿ ಅವುಗಳನ್ನು ರಕ್ಷಿಸಬೇಕು. ಪ್ರಾಣಿಗಳ ಮೇಲೆ ಕ್ರೌರ್ಯ ನಡೆಸುವುದು ಕಂಡು ಬಂದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ವ್ಯಾಪ್ತಿಯಲ್ಲಿರುವ ನಿರಾಶ್ರಿತ ಪ್ರಾಣಿಗಳಿಗೆ ಅಗತ್ಯ ಶುಶ್ರೂಷೆ ಕೊಡುವ ನಿಟ್ಟಿನಲ್ಲಿ ಮಂಗಳೂರು ತಾಲೂಕಿನ ಬೊಂಡಂತಿಲ ಗ್ರಾಮದಲ್ಲಿ ಪ್ರಾಣಿ ಮಿತ್ರ ಆಸ್ಪತ್ರೆ ತೆರೆಯುವ ಯೋಜನೆ ಅನುಷ್ಠಾನದ ಕುರಿತು ಹಾಗೂ ರಸ್ತೆ ಅಪಘಾತ ಮತ್ತಿತರ ಕಾರಣಗಳಿಂದ ಸತ್ತ ಪ್ರಾಣಿಗಳನ್ನು ಯಾರೂ ಸಹ ಮುಟ್ಟುವು ದಿಲ್ಲ. ಅವುಗಳ ಮೃತದೇಹ ಅಲ್ಲಿಯೇ ಕೊಳೆಯುತ್ತಿರುತ್ತವೆ. ಪ್ರಾಣಿಗಳ ಅಂತ್ಯಸಂಸ್ಕಾರಕ್ಕೆ ಸ್ಮಶಾನ ಸೌಲಭ್ಯದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಮೂಕಪ್ರಾಣಿಗಳ ಬಗ್ಗೆ ಅನುಕಂಪ ಮತ್ತು ಮಾನವೀಯತೆಯ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸಾರ್ವಜನಿಕರಿಗೆ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮದ ಮೂಲಕ ಮಾಹಿತಿ ನೀಡಲಾ ಗುತ್ತಿದೆ. ರಾಜ್ಯ ಮತ್ತು ಜಿಲ್ಲಾ ಮಟ್ಟದ ಸಂಬಂಧಪಟ್ಟ ಇಲಾಖೆಗಳೊಂದಿಗೆ ಕೈಜೋಡಿಸಿ ಪ್ರಾಣಿ ಕಲ್ಯಾಣ ಮಂಡಳಿಯಿಂದ ಸ್ಥಾಪಿಸಲ್ಪಟ್ಟ ಪ್ರಾಣಿ ಕಲ್ಯಾಣ ಕಾನೂನು ಜಾರಿಯ ಬಗ್ಗೆ ಅರಿವು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಎಸಿಪಿ ಗೀತಾ ಕುಲಕರ್ಣಿ, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಸಮಿತಿಯ ಸದಸ್ಯೆ ಸುಮಾ ಆರ್. ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X