ಗಿಡಗಳ ಸಂರಕ್ಷಣೆಗೆ ಸಾಮೂಹಿಕ ಜಾಗೃತಿ ಅಗತ್ಯ: ರಾಜೇಶ್

ಮಂಗಳೂರು : ಗಿಡಗಳ ಸಂರಕ್ಷಣೆಯ ಬಗ್ಗೆ ಸಾಮೂಹಿಕ ಜಾಗೃತಿಯ ಅಗತ್ಯವಿದೆ ಎಂದು ಮಂಗಳೂರು ವಲಯ ಅರಣ್ಯ ಅಧಿಕಾರಿ ರಾಜೇಶ್ ತಿಳಿಸಿದ್ದಾರೆ.
ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮಾಚರಣೆಯ ಅಂಗವಾಗಿ ಅರಣ್ಯ ಇಲಾಖೆ, ದ.ಕ. ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡ ಸುರತ್ಕಲ್ ಕೋಡಿಕೆರೆ (ಎಸ್‌ಟಿಪಿ)ಯಲ್ಲಿ 50 ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಗರದಲ್ಲಿ 25 ಸಾವಿರ ಗಿಡಗಳನ್ನು ಸಾರ್ವಜನಿಕರಿಗೆ ವಿತರಿಸಲಾಗಿದೆ ಮತ್ತು ಈ ಗಿಡಗಳನ್ನು ನೆಟ್ಟು ಸಂರಕ್ಷಣೆಯ ನಿಗಾವಹಿಸುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.ಈಗಾಗಲೇ ಸುಮಾರು 9 ಸಾವಿರ ಗಿಡಗಳನ್ನು ಅರಣ್ಯ ಇಲಾಖೆ ಯವತಿಯಿಂದ ನೆಡಲಾಗಿದೆ. ಈ ನಿಟ್ಟಿನಲ್ಲಿ ಸಾಮೂಹಿಕ ಸಹಭಾಗಿತ್ವ ದ ಅಗತ್ಯವಿದೆ ಎಂದು ರಾಜೇಶ್ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ಸುರತ್ಕಲ್ ಅರಣ್ಯ ವಲಯದ ಉಪ ಅರಣ್ಯಾಧಿಕಾರಿ ಶ್ರವಣ್ ಕುಮಾರ್, ಸುರತ್ಕಲ್ ಬೀಟ್ ಅರಣ್ಯ ಅಧಿಕಾರಿ ಗಂಗಾಧರ್, ದ.ಕ.ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟಾ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಕೋಡಿಕೆರೆ ಎಸ್‌ಟಿಪಿ ಗುತ್ತಿಗೆದಾರ ಶಾಂತರಾಜು ಉಪಸ್ಥಿತರಿದ್ದರು.